ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಿಸಲು ವಾಹನ ಸವಾರರಿಂದ ದಟ್ಟಣೆ ಶುಲ್ಕ ವಸೂಲಿಗೆ ಚಿಂತನೆ

ಬ್ರ್ಯಾಂಡ್ ಬೆಂಗಳೂರು ಕಾರ್ಯಕ್ರಮ ಯೋಜನೆ ಅಡಿಯಲ್ಲಿ ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಜಂಟಿಯಾಗಿ ಹಲವು ಅಂಶಗಳನ್ನು ಒಳಗೊಂಡ ವರದಿಯನ್ನು ಸಿದ್ದಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿವೆ.

ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಿಸಲು ವಾಹನ ಸವಾರರಿಂದ ದಟ್ಟಣೆ ಶುಲ್ಕ ವಸೂಲಿಗೆ ಚಿಂತನೆ
Follow us
ವಿವೇಕ ಬಿರಾದಾರ
|

Updated on:Sep 06, 2023 | 11:29 AM

ಬೆಂಗಳೂರು: ಸಾರ್ವಜನಿಕ ಸಾರಿಗೆಯನ್ನು (Government Vehicle) ಬಳಸಲು ಮತ್ತು ಖಾಸಗಿ ವಾಹನಗಳ (Private Vehicle) ಬಳಕೆ ಕಡಿಮೆ ಮಾಡುವಂತೆ ಜನರನ್ನು ಉತ್ತೇಜಿಸಲು ಮತ್ತು ನಗರದಲ್ಲಿ ಸಂಚಾರ ದಟ್ಟಣೆ (Bengaluru Traffic) ಹೆಚ್ಚಿರುವ ರಸ್ತೆಗಳಲ್ಲಿ ವಾಹನ ಸವಾರರಿಂದ ದಟ್ಟಣೆ ಶುಲ್ಕವನ್ನು ವಸೂಲಿಗೆ ಕರ್ನಾಟಕ ಸರ್ಕಾರ ಚಿಂತಿಸುತ್ತಿದೆ. ಈ ಕ್ರಮವು ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿವಾರಿಸುವ ಗುರಿಯನ್ನು ಹೊಂದಿದೆ. ಈ ಯೋಜನೆ ಅಭಿವೃದ್ಧಿಪಡಿಸಲು ಸರಕಾರಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (IISC) ಮತ್ತು ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (RIM) ಜಂಟಿಯಾಗಿ ವರದಿ ಸಲ್ಲಿಸಿವೆ.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿಯಲ್ಲಿ ತಿಳಿಸಲಾಗಿದೆ. ಪಾರ್ಕಿಂಗ್ ನೀತಿ ಜಾರಿ, ಜನನಿಬಿಡ ರಸ್ತೆಗಳಲ್ಲಿ ವಾಹನ ಸವಾರರಿಂದ ಶುಲ್ಕ ವಸೂಲಿ ಮತ್ತು ಸಮಗ್ರ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಮಾಸ್ಟರ್ ಪ್ಲಾನ್ ರಚಿಸುವುದು ಸೇರಿದಂತೆ ವಿವಿಧ ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಲಾಗಿದೆ.

ಬ್ರ್ಯಾಂಡ್ ಬೆಂಗಳೂರು ಕಾರ್ಯಕ್ರಮ ಯೋಜನೆ ಅಡಿಯಲ್ಲಿ ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲು ಸಾರ್ವಜನಿಕ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿತ್ತು. ಈ ಸಲಹೆಗಳನ್ನು ಒಟ್ಟುಗೂಡಿಸಿ ಪ್ರತ್ಯೇಕ ವರದಿ ಸಿದ್ದಪಡಿಸಿ ಸಲ್ಲಿಸುವಂತೆ ಐಐಎಸ್​ಸಿ ಮತ್ತು ಆರ್​ಆಯ್​ಎಮ್​ಗೆ ರಾಜ್ಯ ಸರ್ಕಾರ ಸೂಚಿಸಿತ್ತು. ಅದರಂತೆ ಐಐಎಸ್‌ಸಿನ ಪ್ರೊಫೆಸರ್ ಆಶಿಶ್ ವರ್ಮಾ ಮತ್ತು ಆರ್‌ಆಯ್​ಎಂನ ಪ್ರೊಫೆಸರ್ ಮೇಘನಾ ವರ್ಮಾ ಅವರು ವರದಿ ಸಿದ್ದಪಡಿಸಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವರ್ಸಸ್ ಹೈದರಾಬಾದ್: ಯಾವ ನಗರ ಅತಿ ವೆಚ್ಚದಾಯಕ? ಟ್ವಿಟರ್​ನಲ್ಲಿ ವೈರಲ್​ ಆಗುತ್ತಿವೆ ಪೋಸ್ಟ್​​ಗಳು

ವರದಿಯು ಜೂನ್ ಮತ್ತು ಆಗಸ್ಟ್ ನಡುವೆ ಸಾರ್ವಜನಿಕರಿಂದ ಒಟ್ಟು 10,479 ಸಲಹೆ, ಸೂಚನೆಗಳನ್ನು ಸ್ವೀಕರಿಸಿದೆ. ಅಪ್ರಸ್ತುತ ಸಲ್ಲಿಕೆಗಳನ್ನು ತೆಗೆದುಹಾಕಿದ ನಂತರ ಕೊನೆಯದಾಗಿ 6,075 ಸಲಹೆ, ಸೂಚನೆಗಳನ್ನು ಪರಿಗಣಿಸಲಾಗಿದೆ.

ಮುಂಬರುವ ವರ್ಷಗಳಲ್ಲಿ ನಗರದಲ್ಲಿ ಹೆಚ್ಚುತ್ತಿರುವ ವಾಹನ ಹಾಗೂ ಸಂಚಾರ ದಟ್ಟಣೆಯ ಸಮಸ್ಯೆಯನ್ನು ಪರಿಹರಿಸಲು, ಸೂಕ್ತವಾದ ಮಾಸ್ಟರ್​ಪ್ಲಾನ್ ಹಾಗೂ ಅನ್ವಯವಾಗುವ ಸಾರಿಗೆ ಯೋಜನೆಯನ್ನು ಅಭಿವೃದ್ಧಿಪಡಿಸಬೇಕಿದೆ. ಹಾಗೇ ಇದನ್ನು ಕಾಲಕಾಲಕ್ಕೆ ನವೀಕರಿಸಬೇಕು. ಸಂಚಾರ ದಟ್ಟಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಈ ಯೋಜನೆಗಳು ಅತ್ಯಗತ್ಯ. ಇದಲ್ಲದೆ, ವರದಿಯು ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ, ವಾಹನ ನಿಲುಗಡೆ ನೀತಿಯನ್ನು ಸಮಗ್ರವಾಗಿ ಜಾರಿ ಮತ್ತು ಪಾರ್ಕಿಂಗ್ ಶುಲ್ಕವನ್ನು ಸಂಗ್ರಹ ಮಾಡಬೇಕು.

ವರದಿಯು ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದ (BMLTA) ಪರಿಣಾಮಕಾರಿ ಅನುಷ್ಠಾನದ ಅಗತ್ಯವನ್ನು ಒತ್ತಿಹೇಳುತ್ತದೆ. ಮತ್ತು ಎಲೆಕ್ಟ್ರಿಕ್ ವಾಹನಗಳು, ಸೈಕಲ್‌ಗಳು, ಬಸ್‌ಗಳು ಮತ್ತು ಮೆಟ್ರೋದಂತಹ ಪರಿಸರ ಸ್ನೇಹಿ ಸಾರಿಗೆ ಬಳಸುವಂತೆ ಪ್ರೋತ್ಸಾಹಿಸುತ್ತದೆ.

ಲಂಡನ್‌ ರಸ್ತೆಗಳಲ್ಲಿ ಸಂಚರಿಸುವ ವಾಹನಗಳಿಗೆ ದಟ್ಟಣೆ ಶುಲ್ಕದ ಮಾದರಿಯನ್ನು ಇಲ್ಲಿ ಅಳವಡಿಸುವಂತೆ ವರದಿಯಲ್ಲಿ ಹೇಳಲಾಗಿದೆ. ಅಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ವಾಹನಗಳು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇದರಿಂದ ಸಂಚಾರ ದಟ್ಟಣೆ ನಿವಾರಣೆಯಾಗಿದೆ

ವರದಿಯ ಪ್ರಮುಖ ಶಿಫಾರಸುಗಳು:

  1. ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಉತ್ತೇಜಿಸುವುದು
  2. ಫೀಡರ್ ಸೇವೆಗಳನ್ನು ಸುಧಾರಿಸಲು ಬಿಎಂಟಿಸಿ ಮತ್ತು ಮೆಟ್ರೋ ನಡುವೆ ಆದಾಯ ಹಂಚಿಕೆ ವ್ಯವಸ್ಥೆಯನ್ನು ಜಾರಿ ಮಾಡಬೇಕು.
  3. ಬಸ್ ಸೇವೆಯ ವೇಗವನ್ನು ಹೆಚ್ಚಿಸಲು ಬಸ್ ಟ್ರಿಪ್‌ಗಳ ಸಂಖ್ಯೆಯನ್ನು ಹೆಚ್ಚಿಸುವುದು
  4. ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಸುತ್ತಲಿನ ಪ್ರದೇಶಗಳಿಗೆ ವಿಸ್ತರಿಸುವುದು
  5. ಮೋಟಾರು ವಾಹನಗಳಿಗೆ ಪರ್ಯಾಯವಾಗಿ ಬೈಸಿಕಲ್ ಬಳಕೆಗೆ ಪ್ರೋತ್ಸಾಹ.
  6. ಶಾಪಿಂಗ್ ಮತ್ತು ಇನ್ನಿತರ ಕಾರ್ಯಕ್ಕಾಗಿ ಜನರ ಓಡಾಟ ತಪ್ಪಿಸಲು ಮಿಶ್ರ ಭೂ-ಬಳಕೆ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು.
  7. ಟ್ರಾಫಿಕ್ ಸಿಗ್ನಲ್‌ಗಳನ್ನು ನವೀಕರಿಸುವುದು.
  8. ಪಾದಚಾರಿ ಸ್ನೇಹಿ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Wed, 6 September 23

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು