IAS: 11 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರದಿಂದ ಆದೇಶ

ಎರಡು ದಿನಗಳ ಹಿಂದೆಯಷ್ಟೇ 6 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಕರ್ನಾಟಕ ಸರ್ಕಾರ ಇದೀಗ, 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.

IAS: 11 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರದಿಂದ ಆದೇಶ
11 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರದಿಂದ ಆದೇಶ Image Credit source: trawell.in
Follow us
Rakesh Nayak Manchi
|

Updated on: Jun 06, 2023 | 5:41 PM

ಬೆಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಆರು ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ (IAS Officers Transfer) ಮಾಡಿದ್ದ ಕರ್ನಾಟಕ ಸರ್ಕಾರ ಇದೀಗ, 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ. ಕಪಿಲ್ ಮೋಹನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈವರೆಗೆ ಈ ಹುದ್ದೆಯನ್ನು ಹೆಚ್ಚುವರಿಯಾಗಿ ಪಂಕಜ್ ಕುಮಾರ್ ಪಾಂಡೆ ಅವರು ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ಪಂಕಜ್ ಅವರನ್ನು ಮುಕ್ತಿಗೊಳಿಸಲಾಗಿದೆ.

ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಎಸ್.ಆರ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಉಮಾಶಂಕರ್ ಎಸ್.ಆರ್. ಅವರ ವರ್ಗಾವಣೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಮಂಜುನಾಥ ಪ್ರಸಾದ್ ಎನ್, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್​ಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕ್ಕುಮಾರ್ ಅವರನ್ನು ಬೆಂಗಳೂರಿನ ಕೃಷಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ. ಈ ಹುದ್ದೆಯನ್ನು ರವಿಶಂಕರ್ ಜೆ ಅವರು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ರವಿಶಂಕರ್ ಅವರನ್ನು ಮುಕ್ತಿಗೊಳಿಸಲಾಗಿದೆ. ಮೋಹನ್ ರಾಜ್ ಕೆ.ಪಿ. ಅವರನ್ನು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯನ್ನು ರಾಜೇಂದರ್ ಕುಮಾರ್ ಕಟಾರಿಯಾ ಅವರು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ರಾಜೇಂದರ್ ಅವರನ್ನು ಮುಕ್ತಿಗೊಳಿಸಲಾಗಿದೆ.

ಇದನ್ನೂ ಓದಿ: 51 ಡಿವೈಎಸ್​ಪಿ, 292 ಪೊಲೀಸ್ ಇನ್ಸ್​ಪೆಕ್ಟರ್​ಗಳ ವರ್ಗಾವಣೆ, ಕರ್ನಾಟಕ ಸರ್ಕಾರದಿಂದ ಆದೇಶ

ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಸಾಂಖ್ಯಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿ’ಸೋಜಾ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಎಂಎಸ್ಎಂಇ ಮತ್ತು ಗಣಿ) ಸರ್ಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯನ್ನು ಪಂಕಜ್ ಕುಮಾರ್ ಪಾಂಡೆ ಅವರು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ಪಂಕಜ್ ಅವರನ್ನು ಮುಕ್ತಿಗೊಳಿಸಲಾಗಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ಸದಸ್ಯ ಗಿರೀಶ್ ಆರ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಅಟಲ್ ಸ್ನೇಹಿ ಕೇಂದ್ರ (AJSK)ದ ನಿರ್ದೇಶಕ ಗಂಗೂ ಬಾಯಿ ರಮೇಶ್ ಮನಕರ್ ಅವರನ್ನು ವರ್ಗಾವಣೆಗೊಳಿಸಿ ತೆರವಾದ ಸ್ಥಾನಕ್ಕೆ ಕರೀಗೌಡ ಅವರನ್ನು ನೇಮಿಸಿ ಆದೇಶಿಸಲಾಗಿದೆ. ತುಮಕೂರು ಉಪ ಜಿಲ್ಲಾಧಿಕಾರಿ ಪಾಟೀಲ್ ಯಲಗೌಡ ಶಿವನಗೌಡ ಅವರನ್ನು ಕೃಷಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯನ್ನು ಶರತ್ ಬಿ ಅವರು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು. ಸದ್ಯ ಇವರನ್ನು ಈ ಸೇವೆಯಿಂದ ಮುಕ್ತಿಗೊಳಿಸಲಾಗಿದೆ.

ಜಗದೀಶ ಜಿ ಅವರನ್ನು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಈ ಹುದ್ದೆಯನ್ನು ಡಾ. ರಾಮ್ ಪ್ರಶಾಂತ್ ಮನೋಹರ್ ವಿ ಅವರು ನಿಭಾಯಿಸುತ್ತಿದ್ದರು. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವ್ಯವಸ್ಥಾಪಕ ನಿರ್ದೇಶ ಡಾ. ಮಹೇಶ್ ಎಂ ಅವರನ್ನು ಗಿರೀಶ್ ಆರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ಸದಸ್ಯರನ್ನಾಗಿ ನೇಮಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ