ರಾಜ್ಯದ ಮೂವರು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ
3 ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ವಿಧಾನಸೌಧ
Follow us on
ಬೆಂಗಳೂರು: ಇತ್ತೀಚಿಗೆ ಹೊಸ ವರ್ಷದ ಗಿಫ್ಟ್ ಎಂಬಂತೆ ರಾಜ್ಯ ಸರ್ಕಾರ (ಡಿ.31/2022) ರಂದು 42 ಐಎಎಸ್, 53 ಐಪಿಎಸ್ (IPS) ಅಧಿಕಾರಿಗಳಿಗೆ ವೇತನ ಶ್ರೇಣಿ ಏರಿಕೆ ಮಾಡುವದರ ಜೊತೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಈಗ 3 IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಹೆಚ್ಚುವರಿ ಹೊಣೆ ಹೊತ್ತಿರುವ ಅಧಿಕಾರಿಗಳು
ಡಾ.ರಾಮ್ ಪ್ರಸಾತ್ ಮನೋಹರ್, ಬಿಬಿಎಂಪಿ ವಿಶೇಷ ಆಯುಕ್ತ, ಇವರಿಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಪಿ.ಮಣಿವಣ್ಣನ್ ಅವರಿಗೆ ಅಲ್ಪಸಂಖ್ಯಾತರ ಕಲಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿರುವ ಎಂ.ಜಿ.ಹಿರೇಮಠ್ ಇವರಿಗೆ ಕೆಆರ್ಐಡಿಎಲ್ನ ವ್ಯವಸ್ಥಾಪಕ ನಿರ್ದೇಶಕರಾಗಿ ಜವಾಬ್ದಾರಿ ನೀಡಲಾಗಿದೆ