ಬೆಂಗಳೂರು: ರಾಜ್ಯ ಸರ್ಕಾರ ಕೆಲ ಗಂಟೆಗಳ ಹಿಂದೆ 42 ಐಎಎಸ್ (IAS) ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ಆದೇಶ ಹೊರಡಿಸಿತ್ತು. ಈಗ 53 ಐಪಿಎಸ್ (IPS) ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿ ನ್ಯೂ ಇಯರ್ ಗಿಫ್ಟ್ ಕೊಟ್ಟಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.
ಇನ್ನು ಈ ಬಡ್ತಿ ಪಡೆಯುವ ಪಟ್ಟಿಯಲ್ಲಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಹೆಸರು ಸಹ ಇತ್ತು. ಆದ್ರೆ, ಅವರ ಮೇಲೆ ಕೆಲ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರ ಅವರ ಬಡ್ತಿಯನ್ನು ತಡೆ ಹಿಡಿದಿದೆ ಎಂದು ತಿಳಿದುಬಂದಿದೆ. ನಿರ್ಭಯಾ ಸೇಫ್ಟಿ ಟೆಂಡರ್ ವಿಚಾರಕ್ಕೆ ಸಂಬಂಧಿಸಿ 2021ರಲ್ಲಿ ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಮತ್ತು ನಿಂಬಾಳ್ಕರ್ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು. ಈ ಘಟನೆ ನಂತರ ಸರ್ಕಾರ ಇಬ್ಬರನ್ನು ವರ್ಗಾವಣೆ ಮಾಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:49 pm, Sat, 31 December 22