Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಸಿದ ರಾಜ್ಯ ಸರ್ಕಾರ

ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಸಿದ ರಾಜ್ಯ ಸರ್ಕಾರ
ಬಿಬಿಎಂಪಿ
Follow us
ವಿವೇಕ ಬಿರಾದಾರ
|

Updated on: Aug 05, 2023 | 7:54 AM

ಬೆಂಗಳೂರು: ಬಿಬಿಎಂಪಿಯ (BBMP) ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಸಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. 2021ರ ಜನವರಿ 29ರಂದು ಅಂದಿನ ಬಿಜೆಪಿ (BJP) ಸರ್ಕಾರ ಬಿಬಿಎಂಪಿಯ ವಾರ್ಡ್ (Ward) ಸಂಖ್ಯೆಯನ್ನು 198ರಿಂದ 243ಕ್ಕೆ ಏರಿಸಿ ಅಧಿಸೂಚನೆ ಹೊರಡಿಸಿತ್ತು. ಇದೀಗ ಈ ಅಧಿಸೂಚನೆಯನ್ನು ತಕ್ಷಣ ಜಾರಿಗೆ ಬರುವಂತೆ ಹಿಂಪಡೆದುಕೊಂಡಿದೆ. ಪಾಲಿಕೆ ಅಧಿನಿಯಮ 2020ರ ಸೆಕ್ಷನ್ 7 ವಾರ್ಡ್​​ ಮರುವಿಂಗಡಣೆಯ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ.

ಸರ್ಕಾರಿ ಆದೇಶದ ಅನುಸಾರ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದ ಸಮಿತಿಯು – 2011 ರ ಜನಗಣತಿಯ ಆಧಾರದ ಮೇಲೆ ವಾರ್ಡ್‌ಗಳ ವಿಂಗಡಣೆಯ ಹೊಸ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ. 243 ವಾರ್ಡ್‌ಗೆ ಸುಮಾರು 36 ಸಾವಿರ ಜನಸಂಖ್ಯೆಯ ಆಸುಪಾಸಿನಲ್ಲಿ ವಾರ್ಡ್‌ ಮರುವಿಂಗಡಣೆ ಮಾಡಲಾಗಿತ್ತು. ವಾರ್ಡ್ ಸಂಖ್ಯೆ ಕಡಿತಗೊಳಿಸಿರುವುದರಿಂದ ವಾರ್ಡ್ ಜನಸಂಖ್ಯೆಯ ಪ್ರಮಾಣದಲ್ಲಿಯೂ ಹೆಚ್ಚಳವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Bengaluru News: 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಆರ್​ಐ

ಜುಲೈ 22 ರಂದು ರಾಜ್ಯ ಸರ್ಕಾರವು ರಚಿಸಿದ ಸಮಿತಿಯು ನಗರಾಭಿವೃದ್ಧಿ ಇಲಾಖೆಗೆ ಪ್ರಾಥಮಿಕ ವರದಿಯನ್ನು ಸಲ್ಲಿಸಿತ್ತು. ಸರ್ಕಾರದಿಂದ ಸ್ಪಷ್ಟ ನಿರ್ದೇಶನ ಸಿಗದ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನು ಒಟ್ಟು 243 ವಾರ್ಡ್‌ಗಳಿವೆ.

10 ದಿನ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಇನ್ನು ನಗರದ ನಗರಾಭಿವೃದ್ಧಿ ಇಲಾಖೆ ಸಮಿತಿ ಸಲ್ಲಿಕೆ ಮಾಡಿದ ವಾರ್ಡ್ ನಕ್ಷೆ ಮತ್ತು ಗಡಿ ನಿಗದಿಪಡಿಸಿದ ವರದಿಯನ್ನು ರಾಜ್ಯಪತ್ರ ಹೊರಡಿಸುವ ಮೂಲಕ ಕರಡು ಅಧಿಸೂಚನೆ ಹೊರಡಿಸಿ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಕೆಗೆ ಕೋರಲಾಗುತ್ತದೆ. ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶ ನೀಡಲಾಗುವುದು. ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಗತ್ಯ ಎನಿಸಿದರೆ, ವಾರ್ಡ್ ರಚನೆ, ಗಡಿ ಹಾಗೂ ನಕ್ಷೆ ಬದಲಾವಣೆ ಮಾಡಿ ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ.

2021ರಲ್ಲಿ ರಚನೆ ಮಾಡಿದ 243 ವಾರ್ಡ್ ಮರು ವಿಂಗಡಣೆ ಪ್ರಶ್ನಿಸಿ ಕಾಂಗ್ರೆಸ್‌ನ ಮಾಜಿ ಮೇಯರ್ ಮಂಜುನಾಥರೆಡ್ಡಿ ಮತ್ತಿತರ ಮುಖಂಡರು ಹೈಕೋರ್ಟ್‌ನ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಕಳೆದ ಜೂನ್ 19ರಂದು ಹೊಸದಾಗಿ ವಾರ್ಡ್‌ ಪುನರ್ ವಿಂಗಡಣೆಗೆ ಸೂಚಿಸಿ ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿತ್ತು. ಈಗಾಗಲೇ ಬಹುತೇಕ ಆರು ವಾರ ಪೂರ್ಣಗೊಂಡಿದೆ. ಉಳಿದ ಪ್ರಕ್ರಿಯೆಯನ್ನು ಇನ್ನಾರು ವಾರದಲ್ಲಿ ಪೂರ್ಣಗೊಳಿಸಬೇಕಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬಿಬಿಎಂಪಿ ಚುನಾವಣೆಗೆ ಹಿಡಿದ ಗ್ರಹಣ ಬಿಡಿಸುವ ಲೆಕ್ಕಾಚಾರದಲ್ಲಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಲೋಕಸಭಾ ಚುನಾವಣೆ ಮುನ್ನ, ಅಂದರೆ ಈ ವರ್ಷದ ಅಂತ್ಯದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ