ಗೃಹಲಕ್ಷ್ಮೀ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಸರ್ಕಾರ, ಕಾರಣವೇನು?

ರಾಜ್ಯದ ಗೃಹಿಣಿಯರಿಗೆ ಸರ್ಕಾರ ಶಾಕ್‌ ಕೊಟ್ಟಿದೆ. ಗೃಹಲಕ್ಷ್ಮೀ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿಗಿದ್ದು ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಟ್ವೀಟ್​ ಮೂಲಕ ಮಾಹಿತಿ ನೀಡಿದೆ. ರಾಜ್ಯದ ಈಗಾಗಲೇ ನೋಂದಾಯಿತ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಆದ ನಂತರ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಪುನಾರಂಭಗೊಳ್ಳಲಿದೆ.

ಗೃಹಲಕ್ಷ್ಮೀ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಸರ್ಕಾರ, ಕಾರಣವೇನು?
ಗೃಹಲಕ್ಷ್ಮೀ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತ
Follow us
ಪ್ರಸನ್ನ ಗಾಂವ್ಕರ್​
| Updated By: ಆಯೇಷಾ ಬಾನು

Updated on:Sep 07, 2023 | 1:59 PM

ಬೆಂಗಳೂರ, ಸೆ.07: ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ನೀಡುವ ಗೃಹಲಕ್ಷ್ಮೀ ಯೋಜನೆ(Gruha Lakshmi Scheme) ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಕ್ಸ್(ಹಿಂದಿನ ಟ್ವಿಟರ್) ಮೂಲಕ ಮಾಹಿತಿ ನೀಡಿದೆ. ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ಈಗಾಗಲೇ 2 ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಗೊಂದಲವಾಗದಿರಲಿ ಎಂದು ರಾಜ್ಯ ಸರ್ಕಾರ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ರಾಜ್ಯದ ಈಗಾಗಲೇ ನೋಂದಾಯಿತ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಆದ ನಂತರ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಪುನಾರಂಭಗೊಳ್ಳಲಿದೆ.

ಆಗಸ್ಟ್ 30ರಂದು ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮ ಮಾಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿತ್ತು. ಆದರೆ ಯೋಜನೆ ಜಾರಿಯಾಗಿ ಒಂದೇ ವಾರಕ್ಕೆ ಗೃಹಲಕ್ಷ್ಮೀ ಯೋಜನೆ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಶೀಘ್ರದಲ್ಲಿಯೇ ನೋಂದಣಿ ಪುನರಾರಂಭಗೊಳ್ಳಲಿದೆ ಎಂದು ತಿಳಿಸಿದೆ.

ಇದುವರೆಗೂ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು ಗೊಂದಲವಾಗದಿರಲೆಂದು, ಗೃಹಲಕ್ಷ್ಮೀ ಯೋಜನೆಯ ಹೊಸ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸದ್ಯ ಈ ಹಿಂಎದಯೇ ನೋಂದಣಿಯಾದ ಎಲ್ಲ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಜಮಾಗೊಂಡ ಬಳಿಕ ಮತ್ತೆ ಹೊಸ ನೋಂದಣಿ ಪ್ರಕ್ರಿಯೆ ಪುನರಾರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತನ್ನ ಎಕ್ಸ್‌ ಖಾತೆಯಲ್ಲಿ ತಿಳಿಸಿದೆ.

ಈಗಾಗಲೇ 1.28 ಕೋಟಿ ಫಲಾನುಭವಿಗಳ ಪೈಕಿ 1.13 ಕೋಟಿ ನೋಂದಣಿಯಾಗಿದೆ. 17 ಲಕ್ಷ ಫಲಾನುಭವಿಗಳು ಬ್ಯಾಂಕ್ ಅಕೌಂಟ್, ಕೆವೈಟಿ ಅಪ್ಡೇಟ್ ಮಾಡಿಸಿಲ್ಲ.

ಇದನ್ನೂ ಓದಿ: ಮೈಸೂರು: ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ ಚಾಲನೆ, 1.2 ಕೋಟಿ ಗೃಹಿಣಿಯರ ಖಾತೆಗಳಿಗೆ ತಲಾ ರೂ. 2,000 ಡಿಬಿಟಿ ಮೂಲಕ ಜಮಾ!

ಏನಿದು ಗೃಹಲಕ್ಷ್ಮಿ ಯೋಜನೆ?’

ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಪಂಚ ಯೋಜನೆಗಳನ್ನು ಘೋಷಿಸಿತ್ತು. ಈ ಪಂಚ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ಮನೆ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಭರವಸೆಯನ್ನು ನೀಡಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದರು. ಅದಾದ ಬಳಿಕ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದ್ದು, ಈಗ ಪಂಚ ಯೋಜನಗಳಿಗೆ ಚಾಲನೆ ನೀಡಲಾಗುತ್ತಿದೆ. ಕಳೆದ ಆಗಸ್ಟ್ 30ರಂದು ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮದ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಯೋಜನೆಗೆ ಚಾಲನೆ ಸಿಗುತ್ತಿದ್ದಂತೆ ಅನೇಕ ಮಹಿಳೆಯರ ಖಾತೆಗೆ 2 ಸಾವಿರ ರೂ ಜಮೆಯಾಗಿತ್ತು.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:33 pm, Thu, 7 September 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ