AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿನಾಯಿ ನಿಯಂತ್ರಣಕ್ಕೆ ಏನೆಲ್ಲ ಕ್ರಮ?: ಸುಪ್ರೀಂಗೆ ವರದಿ ಸಲ್ಲಿಸಿದ ಕರ್ನಾಟಕ

ಬೀದಿ ನಾಯಿಗಳ ಹಾವಳಿ ಕುರಿತು ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿದ್ದು, ಬೀದಿನಾಯಿಗಳ ಕಡಿವಾಣಕ್ಕೆ ರಾಜ್ಯಗಳು ಕೈಗೊಂಡ ಕ್ರಮಗಳ ಬಗ್ಗೆ ವರದಿ ಕೇಳಿತ್ತು. ಈ ಹಿನ್ನಲೆ ಕರ್ನಾಟಕ ಸರ್ಕಾರ ಮಾಹಿತಿ ನೀಡಿದ್ದು, ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಂತಾನ ಹರಣ ಚಿಕಿತ್ಸೆ, ರೇಬಿಸ್ ಲಸಿಕೆ, ಸಹಾಯವಾಣಿ ಮತ್ತು ಆಹಾರ ಸ್ಪಾಟ್‌ಗಳಂತಹ ಕ್ರಮಗಳನ್ನು ಕೈಗೊಂಡಿರೋದಾಗಿ ಕೋರ್ಟ್​ಗೆ ತಿಳಿಸಿದೆ.

ಬೀದಿನಾಯಿ ನಿಯಂತ್ರಣಕ್ಕೆ ಏನೆಲ್ಲ ಕ್ರಮ?: ಸುಪ್ರೀಂಗೆ ವರದಿ ಸಲ್ಲಿಸಿದ ಕರ್ನಾಟಕ
ಬೀದಿ ನಾಯಿಗಳ ನಿಯಂತ್ರಣ
ಹರೀಶ್ ಜಿ.ಆರ್​.
| Edited By: |

Updated on:Nov 05, 2025 | 2:15 PM

Share

ಬೆಂಗಳೂರು, ನವೆಂಬರ್​ 05: ಕರ್ನಾಟಕ ಮಾತ್ರವಲ್ಲದೆ ದೇಶದ ಬಹುತೇಕ ರಾಜ್ಯಗಳಲ್ಲಿ ಬೀದಿನಾಯಿಗಳ ಹಾವಳಿ ಪ್ರಕರಣಗಳು ಹೆಚ್ಚಿರೋದನ್ನು ಮನಗಂಡ ಸುಪ್ರೀಂಕೋರ್ಟ್​ ಈ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿದೆ. ಹೀಗಾಗಿ ಬೀದಿನಾಯಿಗಳ ಕಡಿವಾಣಕ್ಕೆ ರಾಜ್ಯಗಳು ಕೈಗೊಂಡ ಕ್ರಮಗಳ ಬಗ್ಗೆ ವರದಿ ಕೇಳಿತ್ತು. ಈ ಹಿನ್ನಲೆ ಸುಪ್ರೀಂಕೋರ್ಟ್​ಗೆ ರಾಜ್ಯ ಸರ್ಕಾರ ಅಫಿಡವಿಟ್​​ ಸಲ್ಲಿಸಿದ್ದು, ಆ ಕುರಿತ Exclusive ಮಾಹಿತಿ ಟಿವಿನೈನ್ ಗೆ ಲಭ್ಯವಾಗಿದೆ.

2023ರ ಗಣತಿ ಪ್ರಕಾರ GBA ವ್ಯಾಪ್ತಿಯಲ್ಲಿ ಒಟ್ಟು 2,66,968 ಬೀದಿನಾಯಿಗಳಿವೆ ಎಂದು ಸುಪ್ರೀಂಕೋರ್ಟ್​ಗೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ರಾಜ್ಯ ಸರ್ಕಾರ ತಿಳಿಸಿದೆ.

ವಿಭಾಗವಾರು ಬೀದಿನಾಯಿಗಳ ಸಂಖ್ಯೆ

  • ಬೆಂಗಳೂರು ನಾರ್ತ್-51,433
  • ಬೆಂಗಳೂರು ಸೌತ್- 56,247
  • ಬೆಂಗಳೂರು ಈಸ್ಟ್- 61,367
  • ಬೆಂಗಳೂರು ವೆಸ್ಟ್- 63,340

ಇದನ್ನೂ ಓದಿ:  ಬೀದಿ ನಾಯಿಗಳ ಹಾವಳಿ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂಕೋರ್ಟ್​ ಛೀಮಾರಿ

ಆಕ್ರಮಣಕಾರಿ ನಾಯಿಗಳ ನಿರ್ವಹಣೆಗಾಗಿ ದೂರುಗಳನ್ನು ದಾಖಲಿಸಲು ಟೋಲ್-ಫ್ರೀ ಹೆಲ್ಪ್‌ಲೈನ್ ಇದೆ. ನಾಯಿ-ಮಾನವ ಸಂಘರ್ಷವನ್ನು ಕಡಿಮೆ ಮಾಡಲು 400 ನಾಯಿ ಆಹಾರ ಸ್ಪಾಟ್‌ಗಳನ್ನು ಗುರುತಿಸಲಾಗಿದೆ. 88,572 ರೇಬಿಸ್ ಲಸಿಕೆ‌ ಹಾಕಲಾಗಿದ್ದು, 2024-25ರಲ್ಲಿ 35,891 ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಪ್ರತಿದಿನ ನಾಯಿ ಸಂತಾನ ಹರಣ ಚಿಕಿತ್ಸೆ

  • ಬೆಂಗಳೂರು ನಾರ್ತ್- 26
  • ಬೆಂಗಳೂರು ಸೌತ್- 27
  • ಬೆಂಗಳೂರು ಈಸ್ಟ್- 20
  • ಬೆಂಗಳೂರು ವೆಸ್ಟ್- 35

ಪುರಸಭೆಗಳ ವ್ಯಾಪ್ತಿಯಲ್ಲಿವೆ 3 ಲಕ್ಷ ಬೀದಿನಾಯಿಗಳು

GBA ವ್ಯಾಪ್ತಿಯಲ್ಲಿ 21 ನಾಯಿ ಹಿಡಿಯುವ ವಾಹನಗಳಿದ್ದು, ಪಶು ಸಂಗೋಪನಾ ಇಲಾಖೆಯಿಂದ‌ ಪ್ರತಿ 5 ವರ್ಷಕ್ಕೊಮ್ಮೆ ಬೀದಿ ನಾಯಿಗಳ ಗಣತಿ ಮಾಡಲಾಗುತ್ತೆ. 2019ರ ಗಣತಿ ಪ್ರಕಾರ ಪುರಸಭೆಗಳ ವ್ಯಾಪ್ತಿಯಲ್ಲಿ ಅಂದಾಜು 3,03,303 ಬೀದಿ ನಾಯಿಗಳಿದ್ದು,ಅವುಗಳನ್ನು ಹಿಡಿಯಲು ಮತ್ತು ಸಾಗಿಸಲು 197 ವಿಶೇಷ ವಿನ್ಯಾಸದ ವಾಹನಗಳು ಮತ್ತು ಪಂಜರಗಳಿವೆ. ಬೀದಿ ನಾಯಿಗಳ ವಸತಿಗಾಗಿ 91 ಡಾಗ್ ಪೌಂಡ್‌ಗಳನ್ನು ಸ್ಥಾಪಿಸಲಾಗಿದೆ. ಪುರಸಭೆಗಳಾದ್ಯಂತ 301 ನಾಯಿ ಹಿಡಿಯುವ ಸಿಬ್ಬಂದಿ ನಿಯೋಜಿಸಲಾಗಿದ್ದು, ಸಾಮೂಹಿಕ ಬಂಜೆತನ ಅಭಿಯಾನದ ಮೂಲಕ 60,662 ಬೀದಿ ನಾಯಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಾಯಿಗಳ ದಾಳಿ ಕುರಿತು ಎಲ್ಲಾ ಪುರಸಭೆಗಳಲ್ಲಿ ಸಹಾಯವಾಣಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ಜನವರಿ 2025ರಿಂದ ಇಲ್ಲಿಯವರೆಗೆ 4,026 ದೂರುಗಳನ್ನು ಸ್ವೀಕರಿಸಿ ತಕ್ಷಣವೇ ಪರಿಹರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:15 pm, Wed, 5 November 25

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು