AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲೇ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿವಿ ಸ್ಥಾಪನೆಗೆ ಕರ್ನಾಟಕ ಮುಂದು!

ಕರ್ನಾಟಕ ಸರ್ಕಾರವು ದೇಶದ ಮೊದಲ ಸರ್ಕಾರಿ ನೇತೃತ್ವದ ಎಐ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಇದಕ್ಕಾಗಿ ವಿಶೇಷ ವಿಧೇಯಕ ಮಂಡಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಶಿಕ್ಷಣ, ಆರೋಗ್ಯ ಮತ್ತು ಕೃಷಿ ವಲಯದಲ್ಲಿ ತಾಂತ್ರಿಕ ಕ್ರಾಂತಿ ಸೃಷ್ಟಿಸಬಲ್ಲ ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ದೇಶದಲ್ಲೇ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿವಿ ಸ್ಥಾಪನೆಗೆ ಕರ್ನಾಟಕ ಮುಂದು!
ದೇಶದಲ್ಲೇ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿವಿ ಸ್ಥಾಪನೆಗೆ ಕರ್ನಾಟಕ ಮುಂದು! Image Credit source: gettyimages.com
ಭಾವನಾ ಹೆಗಡೆ
|

Updated on:Aug 07, 2026 | 7:41 AM

Share

ಮುಖ್ಯಾಂಶಗಳು

  • ರಾಜ್ಯ ಸರ್ಕಾರದಿಂದ ದೇಶದ ಮೊದಲ ಸರ್ಕಾರಿ ಎಐ ವಿವಿ ಸ್ಥಾಪನೆ.
  • ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಅಧಿಕೃತ ವಿಧೇಯಕ ಮಂಡನೆ ಸಾಧ್ಯತೆ.
  • ಆರೋಗ್ಯ, ಕೃಷಿ ಹಾಗೂ ಆಡಳಿತದಲ್ಲಿ ಕೃತಕ ಬುದ್ಧಿಮತ್ತೆ ಬಳಕೆ.

ಬೆಂಗಳೂರು, ಆಗಸ್ಟ್ 07: ತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ನೇತೃತ್ವದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುನ್ನಡೆದಿದೆ. ಮುಂಬರುವ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಇದಕ್ಕಾಗಿ ವಿಶೇಷ ‘ಎಐ ವಿಶ್ವವಿದ್ಯಾಲಯ ವಿಧೇಯಕ’ವನ್ನು ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆ ವರದಿ ಮಾಡಿದೆ.

ಎಐ ವಿವಿ ಸ್ಥಾಪನೆಯ ಪ್ರಮುಖ ಉದ್ದೇಶ

ರಾಜ್ಯದಲ್ಲಿ ತಂತ್ರಜ್ಞಾನ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಮತ್ತು ಕೃತಕ ಬುದ್ಧಿಮತ್ತೆ (AI) ಸಂಶೋಧನೆಗೆ ವೇಗ ನೀಡಲು ಈ ವಿವಿ ಸಹಕಾರಿಯಾಗಲಿದೆ. ಈ ಮಹತ್ವದ ಯೋಜನೆಯು ಶಿಕ್ಷಣ ಸಂಸ್ಥೆಗಳು, ಕೈಗಾರಿಕೆಗಳು ಮತ್ತು ಸರ್ಕಾರದ ನಡುವಿನ ಜಂಟಿ ಸಹಭಾಗಿತ್ವವನ್ನು ಗಟ್ಟಿಗೊಳಿಸಲಿದೆ. ಕೇವಲ ಪದವಿ ನೀಡುವುದಷ್ಟೇ ಅಲ್ಲದೆ, ಭವಿಷ್ಯದ ತಂತ್ರಜ್ಞಾನಕ್ಕೆ ತಕ್ಕಂತೆ ನುರಿತ ವೃತ್ತಿಪರರನ್ನು ಸಿದ್ಧಪಡಿಸುವುದು ಇದರ ಮುಖ್ಯ ಗುರಿಯಾಗಿದೆ.

ಇದನ್ನೂ ಓದಿ ನೂತನ ಸಚಿವರಿಗೆ ಇಂದೇ ಖಾತೆ ಹಂಚಿಕೆ?: ಮಂತ್ರಿಗಳಿಗೆ ಖಡಕ್​​ ಸೂಚನೆ ಕೊಟ್ಟಿದ್ದೇಕೆ ಹೈಕಮಾಂಡ್​​?

ಎಐ-ನೇಟಿವ್ ರಾಜ್ಯವಾಗುವತ್ತ ಕರ್ನಾಟಕದ ಹೆಜ್ಜೆ

ಕರ್ನಾಟಕವನ್ನು ಸಂಪೂರ್ಣ ‘ಎಐ-ನೇಟಿವ್’ ರಾಜ್ಯವನ್ನಾಗಿ ಮಾಡುವುದು ಸರ್ಕಾರದ ಮಹತ್ವಾಕಾಂಕ್ಷೆಯಾಗಿದೆ. ಆಡಳಿತ ಮತ್ತು ಸಾರ್ವಜನಿಕ ಸೇವೆಗಳಾದ ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ನಗರಾಭಿವೃದ್ಧಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಸಮರ್ಥವಾಗಿ ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಬೆಂಗಳೂರಿನಲ್ಲಿ ಈಗಾಗಲೇ ಬಲಿಷ್ಠ ಸ್ಟಾರ್ಟ್‌ಅಪ್ ಇಕೋಸಿಸ್ಟಮ್ ಇರುವುದರಿಂದ ಈ ಹೊಸ ವಿವಿ ಜಾಗತಿಕ ಹೂಡಿಕೆಯನ್ನು ಮತ್ತಷ್ಟು ಆಕರ್ಷಿಸಲಿದೆ. ಇದರೊಂದಿಗೆ ರಾಜ್ಯದಲ್ಲಿ ಸುಧಾರಿತ ತಂತ್ರಜ್ಞಾನ ಸಂಶೋಧನೆಗಾಗಿ ‘ಎಐ ಹಬ್’ ಒಂದನ್ನು ಸಹ ಸ್ಥಾಪಿಸಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:28 am, Fri, 7 August 26

Follow Us
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್