IPS Transfer: ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯದಲ್ಲಿ ವರ್ಗಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಮಧ್ಯೆ ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಪ್ರತಿಪಕ್ಷಗಳು ಇದನ್ನು ರಾಜಕೀಯ ಅಸ್ತ್ರವಾಗಿ ಮಾಡಿಕೊಂಡಿದ್ದು, ಸದನದಲ್ಲಿ ಕೋಲಾಹಲ ಎಬ್ಬಿಸಿವೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು (HD Kumaraswamy) ವರ್ಗಾವಣೆ ವಿಚಾರವಾಗಿ ರಾಜ್ಯ ಸರ್ಕಾರವನ್ನು (Karnataka Government) ಪೆನ್ ಡ್ರೈವ್ನಿಂದ ತಿವಿಯುತ್ತಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ನಾಲ್ವರು ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ ಅಧಿಕಾರಿಗಳು
- ಸಿದ್ದರಾಮಪ್ಪ, ಪೊಲೀಸ್ ಆಯುಕ್ತರು, ಬೆಳಗಾವಿ ನಗರಕ್ಕೆ ವರ್ಗ
- ವರ್ತಿಕಾ ಕಟಿಯಾರ್, ಎಸ್ಪಿ, ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗ
- ಸಿರಿಗೌರಿ, ಡಿಸಿಪಿ, ಆಡಳಿತ ವಿಭಾಗಕ್ಕೆ ವರ್ಗ
- ಅನೂಪ್ ಶೆಟ್ಟಿ, ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿಗೆ ವರ್ಗ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ