ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ವರ್ಗಾವಣೆ, ಹಿತೇಂದ್ರಗೆ ಹೊಣೆ

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಆರ್ ಹಿತೇಂದ್ರ ಅವರನ್ನು ಹೊಸ ಕಮಿಷನರ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ, ಬೆಂಗಳೂರು ಪೊಲೀಸ್ ಕಮಿಷನರ್ ಹಿತೇಂದ್ರ ಎಲ್ಲಿಯವರು? ಯಾವ ಬ್ಯಾಚಿನ ಐಪಿಎಸ್ ಅಧಿಕಾರಿ ಎನ್ನುವ ವಿವರ ಇಲ್ಲಿದೆ.

ಬೆಂಗಳೂರು ಪೊಲೀಸ್ ಕಮಿಷನರ್  ಸೀಮಂತ್ ಕುಮಾರ್  ವರ್ಗಾವಣೆ, ಹಿತೇಂದ್ರಗೆ ಹೊಣೆ
seemant kumar
Edited By:

Updated on: Nov 18, 2026 | 4:13 PM

ಬೆಂಗಳೂರು, ನವೆಂಬರ್ 18): ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಅಗ್ನಿಶಾಮಕ ದಳ ಎಡಿಜಿಪಿಯಾಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡಿ ಇಂದು (ನವೆಂಬರ್ 18) ಆದೇಶ ಹೊರಡಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ದುರಂತಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರನ್ನು ಅಮಾನತುಗೊಳಿಸಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಹೊಸ ಆಯುಕ್ತರನ್ನಾಗಿ ನೇಮಿಸಲಾಗಿತ್ತು. ಇದೀಗ ನೂತನ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಆರ್. ಹಿತೇಂದ್ರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ ದುರಂತದ ನಂತರ, ಬೆಂಗಳೂರಿನ ಪೊಲೀಸ್‌ ಕಮೀಷನರ್‌ ಆಗಿದ್ದ ಬಿ.ದಯಾನಂದ್‌ ಅವರನ್ನು ರಾಜ್ಯ ಸರ್ಕಾರ ಸಸ್ಪೆಂಡ್‌ ಮಾಡಿತ್ತು. ಈ ಹುದ್ದಗೆ ಬೆಂಗಳೂರು ಮಹಾನಗರ ಕಾರ್ಯಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ 1996ರ ಕರ್ನಾಟಕ ಕೆಡರ್‌ನ ಐಪಿಎಸ್‌ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಬೆಂಗಳೂರು ಕಮಿಷನರ್ ಆಗಿ ನೇಮಕ ಮಾಡಲಾಗಿತ್ತು.  ಇದೀಗ ಸೀಮಂತ್ ಕುಮಾರ್ ಅವರನ್ನು ಸಹ ವರ್ಗಾವಣೆ ಮಾಡಿದ್ದು, ಕಾನೂನು ಸುವ್ಯವಸ್ಥೆ ಎಡಿಜಿಪಿಯಾಗಿದ್ದ  ಆರ್ ಹಿತೇಂದ್ರ ಅವರನ್ನು ಹೊಸ ಕಮಿಷನರ್ ಆಗಿ ನೇಮಿಸಲಾಗಿದೆ.

Loading...

Published On - 3:58 pm, Wed, 18 November 26

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us