School Reopening: ಆಗಸ್ಟ್ 23ರಿಂದ ಶಾಲೆ ಶುರು! ಮಾರ್ಗಸೂಚಿ ಏನಿರುತ್ತೆ?

ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಶಾಕೆಗಳನ್ನ ಬಂದ್ ಮಾಡಲಾಗಿತ್ತು. ಆದರೆ ಆಗಸ್ಟ್ 23 ರಿಂದ ಶಾಲೆಗಳನ್ನ ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ನಿನ್ನೆ ನಡೆದ ಸಭೆಯಲ್ಲಿ ಕೆಲವರು ಶಾಲೆಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದ್ದಾರೆ.

School Reopening: ಆಗಸ್ಟ್ 23ರಿಂದ ಶಾಲೆ ಶುರು! ಮಾರ್ಗಸೂಚಿ ಏನಿರುತ್ತೆ?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: sandhya thejappa

Updated on:Aug 15, 2021 | 4:53 PM

ಬೆಂಗಳೂರು: ಕೊರೊನಾ (Coronavirus) ಮೂರನೇ ಅಲೆ ಆತಂಕದ ನಡುವೆ 9 ರಿಂದ 12ನೇ ತರಗತಿಗಳನ್ನ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh), ಕೊವಿಡ್ ಪಾಸಿಟಿವಿಟಿ ದರ (Positivity Rate) ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ತಿಳಿಸಿದ್ದಾರೆ. ಆಗಸ್ಟ್ 23 ರಿಂದ 9-12 ನೇ ತರಗತಿಗಳು ಮೊದಲ ಹಂತದಲ್ಲಿ ಆರಂಭವಾಗಲಿದ್ದು, ನಾಳೆ (ಆಗಸ್ಟ್ 16) ಶಿಕ್ಷಣ ಇಲಾಖೆ ಗೈಡ್​ಲೈನ್ಸ್ ಬಿಡುಗಡೆ ಮಾಡಲಿದೆ.

ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಶಾಲೆಗಳನ್ನ ಬಂದ್ ಮಾಡಲಾಗಿತ್ತು. ಆದರೆ ಆಗಸ್ಟ್ 23 ರಿಂದ ಶಾಲೆಗಳನ್ನ ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ನಿನ್ನೆ ನಡೆದ ಸಭೆಯಲ್ಲಿ ಕೆಲವರು ಶಾಲೆಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದ್ದಾರೆ. ಇನ್ನು ಕೆಲವರು ಈಗಲೇ ಬೇಡ ಅಂತ ಹೇಳಿದ್ದಾರೆ. ಸದ್ಯ ಆಗಸ್ಟ್ 23 ರಿಂದ 9-12 ನೇ ತರಗತಿಗಳು ಆರಂಭವಾಗಲಿದ್ದು, ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಸರ್ಕಾರ ನಾಳೆ ಪ್ರಕಟಿಸಲಿದೆ.

ಶಾಲೆ ಆರಂಭಕ್ಕೆ ಗೈಡ್​ಲೈನ್ಸ್? 1. ಶಾಲೆ, ಕಾಲೇಜು ಆವಾರಣದಲ್ಲಿ ಸಾಮಾಜಿಕ ಅಂತರ ಕಡ್ಡಾಯ. 2. ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ. 3. ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು. 4. ವಿದ್ಯಾರ್ಥಿಗೆ ಕೊವಿಡ್ ಲಕ್ಷಣಗಳಿಲ್ಲವೆಂದು ದೃಢೀಕರಿಸಬೇಕು. 5. ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ 72 ಗಂಟೆಗಳ ಅಂತರದಲ್ಲಿ ಕೊವಿಡ್ ನೆಗೆಟಿವ್ ವರದಿ ಸಲ್ಲಿಸಬೇಕು. 6. ಶಾಲೆ-ಕಾಲೇಜಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ. 7. ಅನ್​ಲೈನ್​ ಹಾಗೂ ಆಫ್​ಲೈನ್ ಎರಡಕ್ಕೂ ಅವಕಾಶ. 9. ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಕಲಿಕೆಗೆ ಅವಕಾಶ. 10. ಬ್ಯಾಚ್ ಮಾದರಿಯಲ್ಲಿ ತರಗತಿ ಭೋದನೆ. 11. ಶಿಕ್ಷಕ ಹಾಗೂ ಶಾಲಾ ಸಿಬ್ಬಂದಿಗೆ ವ್ಯಾಕ್ಸಿನ್ ಕಡ್ಡಾಯ. 12. ಸಾಮಾಜಿಕ ಅಂತರದ ದೃಷ್ಟಿಯಿಂದ ಕಲಿಕೆಗೆ ಶಾಲೆಯ ಎಲ್ಲಾ ಕೊಠಿಡಿಗಳ ಬಳಕೆ 13. ಶಾಲೆಗಳಲ್ಲಿ ಬಿಸಿ ನೀರು ಹಾಗೂ ಸ್ಯಾನಿಟೈಸರ್ ವ್ಯವಸ್ಥೆ. 14. ಹೊರಗಡೆಯ ಜನರಿಗೆ ಶಾಲಾ ಪ್ರವೇಶ ನಿರ್ಬಂಧ. 15. ಶಾಲೆಯ ಸುತ್ತಮುತ್ತ ತಿಂಡಿ ವ್ಯಾಪಾರಕ್ಕೆ ನಿರ್ಬಂಧ ಸಾಧ್ಯತೆ. 16. ಹೊರಂಗಣ ಆಟಕ್ಕೆ ಅವಕಾಶವಿಲ್ಲ. 17. ಶಾಲೆಯಲ್ಲಿ ಎರಡಕ್ಕಿಂತ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದರೆ ಒಂದು ವಾರ ಶಾಲೆ ಸೀಲ್ ಡೌನ್ ಸಾಧ್ಯತೆ. 18. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಶಾಲೆ ಬಂದ್ ಮಾಡಲಾಗುವುದು. 19. ವೀಕೆಂಡ್ ಕರ್ಪ್ಯೂ ಇರುವ ಜಿಲ್ಲೆಗಳಲ್ಲಿ ಶನಿವಾರ ಶಾಲೆ ಬಂದ್ ಮಾಡಲಾಗವುದು. 20. ಕೊರೊನಾ ಲಕ್ಷಣ ಕಂಡು ಬರುವ ಮಗುವನ್ನು ಶಾಲೆಯ ಪ್ರವೇಶಕ್ಕೆ ನಿರ್ಬಂಧ ಹೇರಲಾಗುವುದು. 21. ಪ್ರತಿ ವಾರಕ್ಕೊಂದು ಭಾರಿ ಸ್ಥಳೀಯ ವೈದ್ಯಾಧಿಕಾರಿಗಳಿಂದ ಮಕ್ಕಳು ಹಾಗೂ ಶಿಕ್ಷಕರ ಆರೊಗ್ಯ ತಪಾಸಣೆ.

ಇದನ್ನೂ ಓದಿ

Schools Reopening: ಪಾಸಿಟಿವಿಟಿ ದರ ಶೇ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9, 10, ಪಿಯುಸಿ ತರಗತಿ ಪ್ರಾರಂಭ

Coronavirus cases in India: ದೇಶದಲ್ಲಿ 36,083 ಹೊಸ ಕೊವಿಡ್ ಪ್ರಕರಣ, 493 ಮಂದಿ ಸಾವು

(Karnataka Government will publish the guideline tomorrow for school opening)

Published On - 12:41 pm, Sun, 15 August 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್