ಭ್ರಷ್ಟಾಚಾರ ವಿವಾದದಲ್ಲಿ ಸಿಲುಕಿರುವ ಐಪಿಎಸ್ ರವಿ ಚನ್ನಣ್ಣವರ್​ ವರ್ಗಾವಣೆ ಆದೇಶಕ್ಕೆ ಸರ್ಕಾರದಿಂದ ತಡೆ

ಭ್ರಷ್ಟಾಚಾರ ವಿವಾದದಲ್ಲಿ ಸಿಲುಕಿರುವ ಐಪಿಎಸ್ ರವಿ ಚನ್ನಣ್ಣವರ್​ ವರ್ಗಾವಣೆ ಆದೇಶಕ್ಕೆ ಸರ್ಕಾರದಿಂದ ತಡೆ

ಸಾಧು ಶ್ರೀನಾಥ್​
|

Updated on:Jan 29, 2022 | 7:39 AM

Ravi D Channannavar: ಭ್ರಷ್ಟಾಚಾರ ವಿವಾದದಲ್ಲಿ ಸಿಲುಕಿರುವ ಐಪಿಎಸ್ ರವಿ ಚನ್ನಣ್ಣವರ್​ ವರ್ಗಾವಣೆ ಆದೇಶಕ್ಕೆ ಸರ್ಕಾರದಿಂದ ತಡೆ ನೀಡಲಾಗಿದೆ.

Govt Stops IPS Officer Ravi D Channannavar Transfer Order | ವರ್ಗಾವಣೆ ಆದೇಶಕ್ಕೆ ಸರ್ಕಾರದಿಂದ ತಡೆ
ಭ್ರಷ್ಟಾಚಾರ ವಿವಾದದಲ್ಲಿ ಸಿಲುಕಿರುವ ಐಪಿಎಸ್ ರವಿ ಚನ್ನಣ್ಣವರ್​ ವರ್ಗಾವಣೆ ಆದೇಶಕ್ಕೆ ಸರ್ಕಾರದಿಂದ ತಡೆ ನೀಡಲಾಗಿದೆ. ರವಿ ಚನ್ನಣ್ಣವರ್​ ವರ್ಗಾವಣೆ ಆದೇಶಕ್ಕೆ ಸರ್ಕಾರದಿಂದ ತಡೆ – ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ MDಯಾಗಿ ವರ್ಗಾವಣೆ – ನಿನ್ನೆ ಹೊರಡಿಸಿದ್ದ ಆದೇಶಕ್ಕೆ ಇಂದು ತಡೆ ನೀಡಿದ ಸರ್ಕಾರ – ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿಗೆ ಹೆಚ್ಚುವರಿ ಹೊಣೆಗಾರಿಕೆ – ಮೈಸೂರು ಪೇಪರ್ ಮಿಲ್ ಎಂಡಿ ಹುದ್ದೆ ಹೆಚ್ಚುವರಿ ಹೊಣೆ

ಹಿಂದಿನ ವರ್ಗಾವಣೆ ಆದೇಶ ವಿವರ: ಕರ್ನಾಟಕದಲ್ಲಿ ರವಿ ಡಿ. ಚನ್ನಣ್ಣನವರ್ (Ravi D Channannavar) ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ (Karnataka Government) ಆದೇಶ ಹೊರಡಿಸಲಾಗಿದೆ. ಸಿಐಡಿ ಎಸ್​ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆಗೊಂಡಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ರವಿ ಚನ್ನಣ್ಣನವರ್ ನೇಮಕವಾಗಿದ್ದಾರೆ. 2 ದಿನಗಳ ಹಿಂದಷ್ಟೇ 19 ಉನ್ನತ ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಬಸವರಾಜ ಬೊಮ್ಮಾಯಿ ಸರ್ಕಾರ ಇದೀಗ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಆದೇಶ ಹೊರಡಿಸಿದೆ.

ಉಳಿದಂತೆ ಭೀಮಾಶಂಕರ ಗುಳೇದ್- ಡಿಸಿಪಿ, ಬೆಂಗಳೂರು ಪೂರ್ವ, ಡಿ. ಕಿಶೋರ್ ಬಾಬು- ಬೀದರ್ ಪೊಲೀಸ್ ವರಿಷ್ಠಾಧಿಕಾರಿ, ಅರುಣಾಂಗ್ಶು ಗಿರಿ- ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ, ಡಿ.ಎಲ್. ನಾಗೇಶ್- ಸಿಐಡಿ ಎಸ್‌ಪಿ, ಅಬ್ದುಲ್ ಅಹಾದ್- ಕೆಎಸ್‌ಆರ್‌ಟಿಸಿ ನಿರ್ದೇಶಕ, ಟಿ. ಶ್ರೀಧರ್- ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್​ಪಿ, ಟಿ.ಪಿ. ಶಿವಕುಮಾರ್- ಚಾಮರಾಜನಗರ ಎಸ್‌ಪಿ ಹಾಗೂ ದಿವ್ಯಸಾರ ಥಾಮಸ್- ಪೊಲೀಸ್ ಅಕಾಡೆಮಿ ಉಪ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

ಸಿನಿಮಾ ಬ್ಲಾಕ್​ ಟಿಕೆಟ್​ ಮಾರುತ್ತಿದ್ದ ರವಿ ಡಿ. ಚನ್ನಣ್ಣನವರ್​: ‘ದಿಲ್​ ಪಸಂದ್​’ ವೇದಿಕೆಯಲ್ಲಿ ಅಚ್ಚರಿ ವಿಚಾರ ಬಹಿರಂಗ
ಕರ್ನಾಟಕ ಕಂಡ ಧಕ್ಷ ಅಧಿಕಾರಿಗಳಲ್ಲಿ ರವಿ ಡಿ. ಚನ್ನಣ್ಣನವರ್​ ಕೂಡ ಒಬ್ಬರು. ಅವರು ಮಾಡಿದ ಕೆಲಸಗಳಿಗೆ ಜನರು ಫಿದಾ ಆಗಿದ್ದಾರೆ. ಅವರ ಭಾಷಣಗಳನ್ನು ಕೇಳಿ ಅಪಾರ ಸಂಖ್ಯೆಯ ಜನರು ಸ್ಫೂರ್ತಿ ಪಡೆದುಕೊಂಡಿದ್ದಾರೆ. ಅನೇಕರಿಗೆ ರವಿ ಡಿ. ಚನ್ನಣ್ಣನವರ್​ ಮಾದರಿ ವ್ಯಕ್ತಿ. ಪೊಲೀಸ್​ ಇಲಾಖೆಗೆ ಸೇರಬೇಕು ಎಂಬ ಎಷ್ಟೋ ಯುವಕರಿಗೆ ಅವರೇ ಪ್ರೇರಣೆ. ಇಷ್ಟೆಲ್ಲ ಜನರ ಪ್ರೀತಿ ಗಳಿಸಿರುವ ರವಿ ಡಿ. ಚನ್ನಣ್ಣನವರ್​ ಒಂದು ಕಾಲದಲ್ಲಿ ಸಿನಿಮಾದ ಬ್ಲಾಕ್​ ಟಿಕೆಟ್​ ಮಾರುತ್ತಿದ್ದರು ಎಂಬುದು ಅಚ್ಚರಿಯ ವಿಚಾರ. ಈ ಬಗ್ಗೆ ಸ್ವತಃ ರವಿ ಚನ್ನಣ್ಣನವರ್​ ಹೇಳಿಕೊಂಡಿದ್ದಾರೆ!

ಡಾರ್ಲಿಂಗ್​ ಕೃಷ್ಣ, ನಿಶ್ವಿಕಾ ಕಾಯ್ಡು ಮತ್ತು ಮೇಘಾ ಶೆಟ್ಟಿ ನಟಿಸಲಿರುವ ‘ದಿಲ್​ ಪಸಂದ್​’ ಸಿನಿಮಾದ ಸುದ್ದಿಗೋಷ್ಠಿ ಸೋಮವಾರ (ಸೆ.27) ನಡೆಯಿತು. ಅದಕ್ಕೆ ಮುಖ್ಯ ಅತಿಥಿಯಾಗಿ ರವಿ ಡಿ. ಚನ್ನಣ್ಣನವರ್​ ಆಗಮಿಸಿದ್ದರು. ಅವರ 13 ವರ್ಷಗಳ ಸರ್ವೀಸ್​ನಲ್ಲಿ ಒಂದು ಸಿನಿಮಾ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದು ಇದೇ ಮೊದಲು. ಆ ವೇದಿಕೆಯಲ್ಲಿ ಹಲವು ವಿಚಾರಗಳನ್ನು ಅವರು ಹಂಚಿಕೊಂಡರು. ಯಾರಿಗೂ ಗೊತ್ತಿಲ್ಲದ ಬ್ಲಾಕ್​ ಟಿಕೆಟ್​ ಕಹಾನಿಯನ್ನೂ ಅವರು ತೆರೆದಿಟ್ಟರು.

ರವಿ ಡಿ. ಚನ್ನಣ್ಣನವರ್​ ಅವರಿಗೆ ನಟನೆ, ಬರವಣಿಗೆ, ಸಿನಿಮಾ ಬಗ್ಗೆ ಅಪಾರ ಆಸಕ್ತಿ ಇದೆ. ಹಲವು ನಾಟಕಗಳಲ್ಲಿ ಅವರು ಅಭಿನಯಿಸಿದ್ದಾರೆ. ಕಾಲೇಜು ದಿನಗಳಿಂದಲೂ ಅವರ ಮೇಲೆ ಸಿನಿಮಾಗಳು ಬಹಳ ಪ್ರಭಾವ ಬೀರಿವೆ. ಡಾ. ರಾಜ್​ಕುಮಾರ್​ ಅವರ ‘ಮಯೂರ’ ಸಿನಿಮಾ ನೋಡಿ ಅವರು ಸ್ವಾಭಿಮಾನದ ಪಾಠ ಕಲಿತರು. ಈ ಎಲ್ಲ ಘಟನೆಗಳನ್ನು ಅವರು ಮೆಲುಕು ಹಾಕಿದರು.

‘ಎಲ್ಲೂ ಹೇಳಲಾರದ ಒಂದು ಸತ್ಯವನ್ನು ನಾನು ಇಂದು ಹೇಳುತ್ತಿದ್ದೇನೆ. ನಾನು ಗದಗದಲ್ಲಿ ಬ್ಲಾಕ್​ ಟಿಕೆಟ್​ ಮಾರುತ್ತಿದ್ದೆ. ಮಹಾಲಕ್ಷ್ಮೀ, ಶಾಂತಿ ಚಿತ್ರಮಂದಿಗಳಲ್ಲಿ ಬ್ಲಾಕ್​ ಟಿಕೆಟ್​ ಮಾರಿದ್ದೆ. ‘ಅಸುರ’ ಸಿನಿಮಾ ರಿಲೀಸ್​ ಆದಾಗ ನಾನು ಪ್ರಥಮ ಪಿಯುಸಿ ಹುಡುಗ. ಯಜಮಾನ, ದಿಲ್​ ಕಾ ರಿಶ್ತಾ, ಅಂಜಲಿ ಗೀತಾಂಜಲಿ ಸಿನಿಮಾಗಳು ಬಂದಾಗ ಹುಬ್ಬಳ್ಳಿಯಿಂದ ತೆಗೆದುಕೊಂಡು ಬರುತ್ತಿದ್ದೆ’ ಎಂದು ಅವರು ಹೇಳಿದರು.

ಮೊದಲಿನಿಂದಲೂ ನಾಟಕಗಳ ಜೊತೆ ನಂಟು ಹೊಂದಿರುವ ರವಿ ಡಿ. ಚನ್ನಣ್ಣನವರ್​ ಇತ್ತೀಚೆಗೆ ಬರಹಗಳನ್ನು ಕೂಡ ಆರಂಭಿಸಿದ್ದಾರೆ. ಅನೇಕ ಕಥೆಗಳನ್ನು ಅವರು ಬರೆದಿದ್ದಾರೆ. ಅವು ಇನ್ನೂ ಪ್ರಕಟಗೊಂಡಿಲ್ಲ. ‘ಬರೆದ ಪುಸ್ತಕವನ್ನು ಜನರು ಓದುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ ಸಿನಿಮಾವನ್ನು ಎಲ್ಲರೂ ನೋಡುತ್ತಾರೆ’ ಎನ್ನುವ ಮೂಲಕ ಈ ಮಾಧ್ಯಮದ ಪ್ರಭಾವವನ್ನು ಅವರು ಶ್ಲಾಘಿಸಿದರು.

Published on: Jan 29, 2022 07:35 AM