AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ, ಎಷ್ಟು ಹೆಚ್ಚಳ?

ಬೆಂಗಳೂರು ಮಂದಿಗೆ ಬಹುನಿರೀಕ್ಷಿತ ‘ಪಿಂಕ್ ಲೈನ್’ (Pink Line) ಮೆಟ್ರೋ ಮಾರ್ಗದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಈ ಹೊಸ ಮಾರ್ಗಕ್ಕೆ ಎರಡನೇ ಸೆಟ್ ರೈಲು ಬೋಗಿಗಳು ಆಗಮಿಸಿವೆ. ಮತ್ತೊಂದೆಡೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್​​ಸಿಎಲ್ ಹಾಗೂ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಹೌದು...ಮೆಟ್ರೋ ಟಿಕೆಟ್ ದರ ಏರಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾದ್ರೆ, ಹೊಸ ಟಿಕೆಟ್ ದರ ಯಾವಾಗಿನಿಂದ ಜಾರಿ? ಎಷ್ಟು ಏರಿಕೆ ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ.

Bengaluru Metro: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ,  ಎಷ್ಟು ಹೆಚ್ಚಳ?
Namma Metro
ಕಿರಣ್​ ಸೂರ್ಯ
| Edited By: |

Updated on: Feb 04, 2026 | 6:46 PM

Share

ಬೆಂಗಳೂರು, (ಫೆಬ್ರವರಿ 04): ಸಿಲಿಕಾನ್ ಸಿಟಿ ಬೆಂಗಳೂರು ನಮ್ಮ ಮೆಟ್ರೋ (Bengaluru Namma Metro) ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೊನ್ನೆ ಅಷ್ಟೇ ಬೋರ್ಡ್​​ ಮೀಟಿಂಗ್​ನಲ್ಲಿ ಶೇಕಡಾ 5ರಷ್ಟು ಮೆಟ್ರೋ ದರ ಏರಿಕೆ ಒಪ್ಪಿಗೆ ಬಳಿಕ ಬಿಎಂಆರ್​ಸಿಎಲ್ ಸಲ್ಲಿಸಿದ್ದ ಪ್ರಸ್ತಾವನೆಗೆ ಇಂದು (ಫೆಬ್ರವರಿ 04) ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.  ಹೀಗಾಗಿ ಇದೇ ಫೆಬ್ರವರಿ 9ರಿಂದ ಶೇಕಡಾ 5ರಷ್ಟು ನಮ್ಮ ಮೆಟ್ರೋ ಟಿಕೆಟ್​ ದರ ಹೆಚ್ಚಳವಾಗಲಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಬಿಎಂಆರ್​​​ಸಿಎಲ್ ಅಧಿಕೃತ ಆದೇಶ ಹೊರಡಿಸಲಿದೆ.

ಕಳೆದ ವರ್ಷ ಮೆಟ್ರೋ ಟಿಕೆಟ್ ದರ ಏರಿಕೆ ಸಂಬಂಧ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಜಟಾಪಟಿ ಏರ್ಪಟ್ಟಿತ್ತು, ರಾಜ್ಯ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ದು ಎಂದು ಬಿಜೆಪಿ ನಾಯಕರು ಹೇಳಿದ್ರೆ, ಇತ್ತ ಕಾಂಗ್ರೆಸ್​​ನವರು ಕೇಂದ್ರವೇ ಹೆಚ್ಚಳ ಮಾಡಿದೆ ಎಂದು ಆರೋಪ ಪ್ರತ್ಯಾರೋಪ ಮಾಡಿದ್ದರು. ಆದ್ರೆ, ಈ ಬಾರಿ ಟಿಕೆಟ್ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರವೇ ಒಪ್ಪಿಗೆ ಸೂಚಿಸಿದೆ.

ಇದನ್ನೂ ಓದಿ: Namma Metro: ವಿರೋಧದ ನಡುವೆಯು BMRCL ಬೋರ್ಡ್​ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು?

ಎಲ್ಲಿಗೆ ಎಷ್ಟು ಟಿಕೆಟ್ ದರ ಹೆಚ್ಚಳ?

ಮೆಟ್ರೋದಲ್ಲಿ ಮೆಜೆಸ್ಟಿಕ್​ನಿಂದ ವೈಟ್​ಫೀಲ್ಡ್​ಗೆ ಪ್ರಸ್ತುತ 80 ರೂ. ಇದ್ದು, ಶೇ. 5% ಹೆಚ್ಚಳ ಬಳಿಕ 80 ರೂ.ನಿಂದ 84ರೂ. ಆಗುತ್ತೆ. 10 ರೂ. ಇರುವ ಟಿಕೆಟ್ ದರ ಶೇ 5ರಷ್ಟು ಹೆಚ್ಚಳವಾದರೆ 11 ರೂ. ಆಗಲಿದೆ. 90 ರೂ. ಇರುವ ಟಿಕೆಟ್ ದರ 95 ರೂ. ಆಗಲಿದೆ. ಮೆಜೆಸ್ಟಿಕ್​ನಿಂದ ಬೊಮ್ಮಸಂದ್ರಕ್ಕೆ 80 ರೂ.ನಿಂದ 84 ರೂ.ಗೆ ಹೆಚ್ಚಳ. ಮೆಜೆಸ್ಟಿಕ್​ನಿಂದ ಚಲ್ಲಘಟ್ಟಕ್ಕೆ 60 ರೂ. ಟು 63 ರೂ.

ಕಳೆದ ವರ್ಷ ಫೆಬ್ರವರಿ 9ರಂದು ಮೆಟ್ರೋ ಟಿಕೆಟ್ ದರವನ್ನು ಶೇ.101.5ರಷ್ಟು ದರ ಹೆಚ್ಚಳ ಮಾಡಲಾಗಿತ್ತು. ಬಳಿಕ ಇದಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಬಿಎಂಆರ್​ಸಿಎಲ್​​, ಶೇಕಡಾ 71.5ಕ್ಕೆ ದರ ಇಳಿಕೆ ಮಾಡಿತ್ತು. ಆದರೂ ಸಹ ನಮ್ಮ ಮೆಟ್ರೋ ಈಗ ಭಾರತದಲ್ಲಿಯೇ ಅತ್ಯಂತ ದುಬಾರಿ ಮೆಟ್ರೋ ಎನ್ನುವ ಬಿರುದುಕೊಂಡಿದ್ದು, ಇದೀಗ ಮತ್ತೆ ಶೇ.5ರಷ್ಟು ಟಿಕೆಟ್ ದರ ಹೆಚ್ಚಳವಾಗಿದ್ದರಿಂದ ಪ್ರಯಾಣಿಕರ ಮತ್ತಷ್ಟು ಹೊರೆಯಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್