AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷೆಯ ತೃತೀಯ ಭಾಷೆ ಅಂಕಕ್ಕೆ ಕೊಕ್: ನಿರ್ಧಾರ ಪರಿಶೀಲಿಸುವಂತೆ ಸಿಎಸ್​​ಗೆ ರಾಜ್ಯಪಾಲರ ಪತ್ರ

SSLC ತೃತೀಯ ಭಾಷೆಯ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ತೃತೀಯ ಭಾಷೆ ಭಾಷಾವೈವಿಧ್ಯತೆ ಮತ್ತು ಬೌದ್ಧಿಕ ಬೆಳವಣಿಗೆಗೆ ಮುಖ್ಯ. ಗ್ರೇಡಿಂಗ್ ಶೈಕ್ಷಣಿಕ ಪ್ರಾಮುಖ್ಯತೆ ಮತ್ತು ವಿದ್ಯಾರ್ಥಿಗಳ ಆಸಕ್ತಿಯ ಮೇಲೆ ಪರಿಣಾಮ ಬೀರಬಹುದು ಎಂಬ ಕಳವಳವನ್ನು ಅವರು ಪತ್ರಮುಖೇನ ವ್ಯಕ್ತಪಡಿಸಿದ್ದಾರೆ.

SSLC ಪರೀಕ್ಷೆಯ ತೃತೀಯ ಭಾಷೆ ಅಂಕಕ್ಕೆ ಕೊಕ್: ನಿರ್ಧಾರ ಪರಿಶೀಲಿಸುವಂತೆ ಸಿಎಸ್​​ಗೆ ರಾಜ್ಯಪಾಲರ ಪತ್ರ
ಸಿಎಸ್​​ಗೆ ರಾಜ್ಯಪಾಲರ ಪತ್ರ Image Credit source: Google
ಪ್ರಸನ್ನ ಗಾಂವ್ಕರ್​
| Edited By: |

Updated on: Apr 03, 2026 | 11:40 AM

Share

ಬೆಂಗಳೂರು, ಏಪ್ರಿಲ್​​ 03: SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ವಿಚಾರ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಲೆಟರ್​​ ಬರೆದಿದ್ದು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ.  SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್‌ ನೀಡುವ ನಿರ್ಧಾರವನ್ನು ಮರು ಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ ಭಾಷೆಯು ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಗ್ರೇಡ್‌ ನೀಡಿದರೆ ಶೈಕ್ಷಣಿಕ ಪ್ರಾಮುಖ್ಯತೆ ಕಡಿಮೆ ಮಾಡಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ ಸರ್ಕಾರದ ಈ ನಿರ್ಧಾರ ವಿದ್ಯಾರ್ಥಿಗಳು ಕಲಿಯುವ ಆಸಕ್ತಿಯ ಮೇಲೆ ಪರಿಣಾಮ ಬೀರಬಹುದು. ಶಿಕ್ಷಣದ ಮೇಲೆ ಬೀರುವ ಪರಿಣಾಮ ಬಗ್ಗೆ ಪೋಷಕರಿಗೂ ಆತಂಕ ಇದ್ದು, ರಾಜ್ಯಪಾಲರು ಈ ವಿಷಯವನ್ನು ಗಮನಿಸಿದ್ದಾರೆ. ಹೀಗಾಗಿ ಶೈಕ್ಷಣಿಕ, ಆಡಳಿತಾತ್ಮಕ ಅಂಶ ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಸಂಬಂಧಿತ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಶೈಕ್ಷಣಿಕ ಉದ್ದೇಶಗಳಿಗೆ ಅನುಗುಣವಾಗಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಿಎಸ್​ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: SSLC ತೃತೀಯ ಭಾಷೆ ವಿವಾದ; ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರದ ‘ಗ್ರೇಡಿಂಗ್’ ನಿರ್ಧಾರ

ಎಸ್​​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬಾರದು ಮತ್ತು ಅಂಕ ಪಟ್ಟಿಯಿಂದ ಹೊರಗಿಡುವಂತೆ ವಿವಿಧ ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿದ್ದವು. ಆ ಬೆನ್ನಲ್ಲೇ ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ 525 ಅಂಕಗಳು ನಿಗದಿ ಮಾಡಿ, ತೃತೀಯ ಭಾಷೆಯ ಅಂಕಕ್ಕೆ ಸರ್ಕಾರ ಕೊಕ್​ ನೀಡಿತ್ತು. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಮತ್ತು ಮರಾಠಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸಲಾಗುವುದಿಲ್ಲ. ಬದಲಿಗೆ ತೃತೀಯ ಭಾಷೆ ಪರೀಕ್ಷೆಯ ಅಂಕವನ್ನು ಗ್ರೇಡ್ ಮೂಲಕ ನೀಡಲಾಗುತ್ತದೆ. ಆದರೆ ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆಯನ್ನು ಬರೆಯುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಹೇಳಿರೋದು ಭಾರಿ ಚರ್ಚೆಗೂ ಗ್ರಾಸವಾಗಿತ್ತು. ಕರ್ನಾಟಕ ಹೈಕೋರ್ಟ್​​ನಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ಸಲ್ಲಿಕೆಯಾಗಿರುವ ನಡುವೆ ರಾಜ್ಯಪಾಲರ ಕಡೆಯಿಂದ ಬಂದಿರುವ ಈ ಪತ್ರ ಪ್ರಾಮುಖ್ಯತೆ ಪಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​