AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತಕ್ಕೆ ಬಲಿ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರನ್ನ ಕಾರಿನಲ್ಲಿ ಕರೆದೊಯ್ಯಲು ಸಿದ್ದತೆ ಮಾಡಿಕೊಳ್ಳುವ ವೇಳೆ ಚಾಲಕ ರವಿಕುಮಾರ್ ಗೆ ಎದೆ ನೋವು ಕಾಣಿಸಿಕೊಂಡಿದೆ. ಈ ಮಧ್ಯೆ ಆತನಿಗೆ ಹೃದಯಾಘಾತವೂ ಆಗಿದೆ.

Heart Attack: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತಕ್ಕೆ ಬಲಿ
ಕರ್ನಾಟಕ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತದಿಂದ ಸಾವು
TV9 Web
| Edited By: |

Updated on:Dec 11, 2022 | 12:34 PM

Share

ಬೆಂಗಳೂರು: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Karnataka Governor Thawar Chand Gehlot ) ಅವರ ಕಾರು ಚಾಲಕ (Car Driver) ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (BIAL) ಶನಿವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ರವಿಕುಮಾರ್ ಎಸ್. ಕಾಳೆ ಮೃತಪಟ್ಟ ದುರ್ದೈವಿ ಕಾರು ಚಾಲಕ. ಮಧ್ಯ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯಪಾಲರನ್ನು ಕರೆದೊಯ್ಯಲು ಚಾಲಕ ರವಿಕುಮಾರ್ ಬಂದಿದ್ದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರನ್ನ ಕಾರಿನಲ್ಲಿ ಕರೆದೊಯ್ಯಲು ಸಿದ್ದತೆ ಮಾಡಿಕೊಳ್ಳುವ ವೇಳೆ ಚಾಲಕ ರವಿಕುಮಾರ್ ಗೆ ಎದೆ ನೋವು ಕಾಣಿಸಿಕೊಂಡಿದೆ. ಈ ಮಧ್ಯೆ ಆತನಿಗೆ ಹೃದಯಾಘಾತವೂ ಆಗಿದೆ. ತಕ್ಷಣ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಆತ ಕೊನೆಯುಸಿರೆಳೆದಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: ಸೆಕ್ಯೂರಿಟಿ ಸರ್ಕಸ್: ಕೋಮು ಸೌಹಾರ್ದ ಮಂಡಳಿ ಸದಸ್ಯಗೆ ಗನ್ ಮ್ಯಾನ್ ಭದ್ರತೆ ಕೊಟ್ಟ ಜಿಲ್ಲಾಡಳಿತ, ಜನಕ್ಕೆ ಅಚ್ಚರಿ!

ರಾಜ್ಯಪಾಲರ ಕಾರಿನ ಚಾಲಕನಿಗೆ ಹೃದಯಾಘಾತ, ಸ್ವಲ್ಪದರಲ್ಲಿಯೇ ತಪ್ಪಿದ ಭಾರೀ ಅನಾಹುತ:

ರಾಜ್ಯಪಾಲರ ಕಾರಿನ ಚಾಲಕ ರವಿಕುಮಾರ್ ಎಸ್. ಕಾಳೆ ಶನಿವಾರ ರಾತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರ ಬರುವಿಕೆಗಾಗಿ ಕಾಯುತ್ತಿದ್ದ ಸಂದರ್ಭ ಅದು. VVIP ಲಾಂಜ್ ಬಳಿ ಕಾಯುತ್ತಿದ್ದ ಚಾಲಕ ರವಿಕುಮಾರ್ ಅವರಿಗೆ ತೀವ್ರ ಹೃದಯಾಘಾತವಾಗಿದೆ. ತಕ್ಷಣ ಲಾಂಚ್ ಬಳಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಮಧ್ಯರಾತ್ರಿ 2:20 AM ವೇಳೆಗೆ ರವಿಕುಮಾರ್ ಕಾಳೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಇದನ್ನೂ ಓದಿ: ಆಟೋದಲ್ಲಿ ಬಿಟ್ಟು ಹೋಗಿದ್ದ 1.5 ಲಕ್ಷ ಮೌಲ್ಯದ ಚಿನ್ನಾಭರಣ ಮಾಲೀಕರಿಗೆ ಹಿಂದಿರುಗಿಸಿದ ಮೈಸೂರಿನ ಆಟೋ ಡ್ರೈವರ್

ಘಟನೆಯ ಬಳಿಕ ಹೆಚ್ಚವರಿ ವಾಹನ ಬಳಸಿಕೊಂಡು ರಾಜ್ಯಪಾಲರು ರಾಜ್ಯಭವನಕ್ಕೆ ತೆರಳಿದರು. ರಾಜ್ಯಪಾಲರು ನಿಗದಿತ ಸಮಯಕ್ಕಿಂತ ಬೇಗ ಆಗಮಿಸಿದ್ದರೆ, ರವಿಕುಮಾರ್ ಅವರೇ ಕಾರು ಏರಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು.

To read health related articles click here

Published On - 12:15 pm, Sun, 11 December 22

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'