Republic Day 2022: ಸ್ವಾವಲಂಬಿ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳೋಣ- ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್ ಭಾಷಣ

ಬೆಂಗಳೂರಿನಲ್ಲಿ 42.3 ಕಿ.ಮೀ.ಮೆಟ್ರೋ ಮಾರ್ಗವಿದೆ. ನಗರದಲ್ಲಿ 40 ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿವೆ. 3.18 ಲಕ್ಷ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. 397 ನಗರಗಳನ್ನು ಓಡಿಎಫ್ ಮಾಡಲಾಗಿದೆ. ಕಸಮುಕ್ತ ನಗರಗಳ ಪೈಕಿ ಫೈವ್ ಸ್ಟಾರ್ ಶ್ರೇಣಿ ಪಡೆದಿವೆ ಎಂದು ವಿವರಿಸಿದ್ದಾರೆ.

Republic Day 2022: ಸ್ವಾವಲಂಬಿ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳೋಣ- ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್ ಭಾಷಣ
ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್ (ಸಂಗ್ರಹ ಚಿತ್ರ)
Follow us
| Updated By: ganapathi bhat

Updated on:Jan 26, 2022 | 11:09 AM

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ, ಲಾಕ್​ಡೌನ್ ವೇಳೆ ಸಂಕಷ್ಟಕ್ಕೆ ಒಳಗಾದ ಜನರಿಗೆ ಸರ್ಕಾರದ ನೆರವು, ಕರ್ನಾಟಕ ಸರ್ಕಾರದ ಅಮೃತ ಯೋಜನೆಗಳು, ಕೊರೊನಾ ಲಸಿಕೆ ಹಾಗೂ ಕೊರೊನಾ ವಾರಿಯರ್ಸ್​ ಸೇವೆ, ಕರ್ನಾಟಕದಲ್ಲಿ ಸಂಭವಿಸಿದ ಅತಿವೃಷ್ಟಿ ಅನಾವೃಷ್ಟಿ ಇತ್ಯಾದಿ ವಿಚಾರಗಳ ಬಗ್ಗೆ ರಾಜ್ಯಪಾಲ ಥಾವರಚಂದ ಗೆಹಲೋತ್ ಭಾಷಣ ಮಾಡಿದ್ದಾರೆ. ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆ ಕರ್ನಾಟಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಅವರು ಬುಧವಾರ (ಜನವರಿ 26) ಮಾತನಾಡಿದ್ದಾರೆ.

ಕೊರನಾ ನಿಯಂತ್ರಿಸಲು ವೈದ್ಯರು, ನರ್ಸ್‌ಗಳು ಅವಿರತ ಸೇವೆ ಸಲ್ಲಿಸಿದ್ದಾರೆ. ಪೊಲೀಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಫ್ರಂಟ್ ಲೈನ್ ವಾರಿಯರ್ಸ್‌ಗೆ ಕೃತಜ್ಞತೆ ಸಲ್ಲಿಸುತ್ತೇನೆ. ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಉಂಟಾದ ಅತಿವೃಷ್ಟಿಯನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ದೇಶದ ಪ್ರಗತಿಪರ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಅಮೃತ ಮಹೋತ್ಸವ ಸಂದರ್ಭದಲ್ಲಿ ಹಲವು ಯೋಜನೆ, ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ. ಅಮೃತ ಗ್ರಾಮಪಂಚಾಯತಿಗಳ ಅಮೃತ ರೈತ, ಅಮೃತ ಗ್ರಾಮೀಣ ವಸತಿ ಯೋಜನೆ, ಅಮೃತ ನಿರ್ಮಲ, ಅಮೃತ ಶಾಲಾ ಮೂಲಸೌಕರ್ಯ ಕಾರ್ಯಕ್ರಮ, ಅಮೃತ ಅಂಗನವಾಡಿ ಕೇಂದ್ರಗಳು, ಅಮೃತ ನಗರೋತ್ಥಾನ, ಒಟ್ಟು 14 ಅಮೃತ ಮಹೋತ್ಸವ ಕಾರ್ಯಕ್ರಮ ಘೋಷಿಸಿದೆ ಎಂದು ಸರ್ಕಾರದ ಹಾಗೂ ನಾಡಿನ ಜನರ ಬಗ್ಗೆ ರಾಜ್ಯಪಾಲರು ಮೆಚ್ಚುಗೆಯ ನುಡಿಗಳನ್ನು ಆಡಿದ್ದಾರೆ.

ರಾಜ್ಯ ಸರ್ಕಾರದಿಂದ 14 ಅಮೃತ ಮಹೋತ್ಸವ ಕಾರ್ಯಕ್ರಮ ಅನುಷ್ಠಾನ ಮಾಡಲಾಗಿದೆ. 2023ರ ಆಗಸ್ಟ್ 15ರವರೆಗೆ ಫಲಿತಾಂಶಗಳೊಂದಿಗೆ ಅನುಷ್ಠಾನ ಮಾಡಲಾಗಿದೆ. ಕಾರ್ಯಕ್ರಮ ಅನುಷ್ಠಾನ ಮಾರ್ಗಸೂಚಿ ಸರ್ಕಾರ ಸಿದ್ಧಪಡಿಸಿದೆ. ಕೃಷಿ ವಲಯದಲ್ಲಿ ಬದಲಾವಣೆ ತರಲು ಜಲಾನಯನ ಅಭಿವೃದ್ಧಿ ಮಾಡಲಾಗುತ್ತಿದೆ. ಜಲಾನಯನ ಅಭಿವೃದ್ಧಿಗೆ ರಾಜ್ಯ ಸರ್ಕಾರ ಗಮನಹರಿಸಿದೆ. 2021-22ನೇ ಸಾಲಿನಲ್ಲಿ 1,472 ಕೋಟಿ ರೂ. ಕಾಮಗಾರಿ ಅನುಮೋದನೆ ನೀಡಲಾಗಿದೆ.

ಬೆಳೆ ಸಮೀಕ್ಷೆ, ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ

ಮೊಬೈಲ್, ತಂತ್ರಜ್ಞಾನ ಆಧಾರಿತ ಬೆಳೆ ಸಮೀಕ್ಷೆ, ಸ್ಥಳೀಯ ಯುವಕರ ಮೂಲಕ ಅನುಷ್ಠಾನಗೊಳಿಸಲಾಗಿದೆ. 2021-22ನೇ ಸಾಲಿನಲ್ಲಿ 12,76,868 ರೈತರ ನೋಂದಣಿ ಮಾಡಲಾಗಿದೆ. 256.95 ಲಕ್ಷ ಪ್ರದೇಶ ಬೆಳೆ ಸಮೀಕ್ಷೆ ಅಡಿ ತರಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. 16,176 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ₹4.41 ಕೋಟಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಮಿಕರ ಹಿತಾಸಕ್ತಿಗೆ ಒತ್ತು ನೀಡಲಾಗಿದೆ

ಖಾಲಿ ಇರುವ ವೈದ್ಯಾಧಿಕಾರಿಗಳು, ತಂತ್ರಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆ ಭರ್ತಿಗೆ ಸಮಿತಿ ರಚಿಸಲಾಗಿದೆ. 6 ತಿಂಗಳ ಅವಧಿಯಲ್ಲಿ 746 ತಂತ್ರಜ್ಞರು, 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ನೇಮಿಸಲಾಗಿದೆ. ವಿವಿಧ ಕಾರ್ಮಿಕ ಅಧಿನಿಯಮಗಳ ಅಡಿ 12,946 ತಪಾಸಣೆ ಮಾಡಲಾಗಿದೆ. ನಿಯಮ ಉಲ್ಲಂಘಿಸಿದ ಮಾಲೀಕರ ವಿರುದ್ಧ 2,018 ಕೇಸ್ ದಾಖಲಿಸಲಾಗಿದೆ. 2,033 ಪ್ರಕರಣಗಳಲ್ಲಿ 21,19,309 ರೂ. ದಂಡ ಸಂಗ್ರಹ ಮಾಡಲಾಗಿದೆ. ವಲಸೆ ಕಾರ್ಮಿಕರು, ಇತರ ಕಾರ್ಮಿಕರ ಹಿತಾಸಕ್ತಿಗೆ ಒತ್ತು ಕೊಡಲಾಗಿದೆ ಎಂದು ರಾಜ್ಯದ ಜನರನ್ನುದ್ದೇಶಿಸಿ ರಾಜ್ಯಪಾಲ ಟಿ.ಸಿ.ಗೆಹ್ಲೋಟ್ ಭಾಷಣ ಮಾಡಿದ್ದಾರೆ.

ತೋಟಗಾರಿಕಾ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದಲ್ಲಿದೆ

2ನೇ ಅಲೆ ಲಾಕ್‌ಡೌನ್ ವೇಳೆ ಕಾರ್ಮಿಕರಿಗೆ ಪರಿಹಾರ ನೀಡಲಾಗಿದೆ. 11,82,307 ಕಾರ್ಮಿಕರಿಗೆ ತಲಾ ₹2,000 ಪರಿಹಾರ ನೀಡಲಾಗಿದೆ. ಇದಕ್ಕಾಗಿ 236.46 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಅಸಂಘಟಿತ ಕಾರ್ಮಿಕರಿಗೆ ₹628.16 ಕೋಟಿ ಪರಿಹಾರ, 14,527 ಸಂಘಟಿತ ಕಾರ್ಮಿಕರಿಗೆ ಪರಿಹಾರ ನೀಡಲಾಗಿದೆ. ತೋಟಗಾರಿಕಾ ಕ್ಷೇತ್ರದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. 18,777 ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ, ಇದರಿಂದ 20,634 ಫಲಾನುಭವಿಗಳಿಗೆ ಪ್ರಯೋಜನವಾಗಿದೆ. 3,347 ಹೆಕ್ಟೇರ್ ಪ್ರದೇಶದಲ್ಲಿ ಸಂರಕ್ಷಿತ ಬೇಸಾಯ ಪದ್ಧತಿ ಮಾಡಲಾಗಿದೆ. 3,440 ಜೇನುಪೆಟ್ಟಿಗೆಗಳನ್ನು ವಿತರಿಸಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು ನಗರ ಅಭಿವೃದ್ಧಿಗೆ ಆದ್ಯತೆ

ಬೆಂಗಳೂರಿನಲ್ಲಿ 42.3 ಕಿ.ಮೀ.ಮೆಟ್ರೋ ಮಾರ್ಗವಿದೆ. ನಗರದಲ್ಲಿ 40 ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿವೆ. 3.18 ಲಕ್ಷ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. 397 ನಗರಗಳನ್ನು ಓಡಿಎಫ್ ಮಾಡಲಾಗಿದೆ. ಕಸಮುಕ್ತ ನಗರಗಳ ಪೈಕಿ ಫೈವ್ ಸ್ಟಾರ್ ಶ್ರೇಣಿ ಪಡೆದಿವೆ ಎಂದು ವಿವರಿಸಿದ್ದಾರೆ. ಘನತ್ಯಾಜ್ಯ ವಿಲೇವಾರಿಯಲ್ಲಿ ಬೆಂಗಳೂರಿಗೆ ಪ್ರಶಸ್ತಿ ಲಭಿಸಿದೆ. ಅತ್ಯುತ್ತಮ ಸುಸ್ಥಿರ ವಾಸಯೋಗ್ಯ ನಗರ ಪ್ರಶಸ್ತಿ ಲಭ್ಯವಾಗಿದೆ. ವಿಮಾನ ನಿಲ್ದಾಣ ಅಭಿವೃದ್ಧಿಗೆ ಭೂಮಿ ಸ್ವಾಧೀನ ಮಾಡಲಾಗಿದೆ. ಕಲಬುರಗಿ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ಹಾಸನ, ಕಾರವಾರ, ರಾಯಚೂರು ನಗರಗಳಲ್ಲಿ ಭೂಮಿ ಸ್ವಾಧೀನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸ್ ಇಲಾಖೆಗಳ ವಿವಿಧ ಘಟಕಗಳಿಗೆ ಶಸ್ತ್ರಾಸ್ತ್ರಗಳು, ವಾಹನಗಳು ಮತ್ತು ವೈಜ್ಞಾನಿಕ ಉಪಕರಣ ಖರೀದಿಗೆ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ 14.23 ಕೋಟಿ ರೂಪಾಯಿ, ರಾಜ್ಯ ಸರ್ಕಾರದಿಂದ 13.39 ಕೋಟಿ ಹಣ ಬಿಡುಗಡೆ ಆಗಿದೆ. ವೈರ್‌ಲೆಸ್ ಉಪಕರಣಗಳ ಖರೀದಿಗಾಗಿ ಕೇಂದ್ರ ಸರ್ಕಾರದಿಂದ 9.14 ಕೋಟಿ ರೂಪಾಯಿ, ರಾಜ್ಯ ಸರ್ಕಾರದಿಂದ 6.09 ಕೋಟಿ ಬಿಡುಗಡೆ ಮಾಡಲಾಗಿದೆ. ಕೊರೊನಾಗೆ ಬಲಿಯಾದ ಪೊಲೀಸರ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ. 173 ಪೊಲೀಸ್ ಕುಟುಂಬಗಳಿಗೆ ತಲಾ 30 ಲಕ್ಷ ಪರಿಹಾರ ಒದಗಿಸಲಾಗಿದೆ ಎಂದು ಹೇಳಿದ್ದಾರೆ.

ಹಾಲು, ಮೊಟ್ಟೆ ಉತ್ಪಾದನೆಯಲ್ಲಿ ಕರ್ನಾಟಕ ಮುಂದೆ

ಮಧ್ಯಾಹ್ನದ ಬಿಸಿಯೂಟಕ್ಕೆ ಕೇಂದ್ರದಿಂದ 577.71 ಕೋಟಿ, ರಾಜ್ಯ ಸರ್ಕಾರ ₹1469.26 ಕೋಟಿ ಬಿಡುಗಡೆ ಮಾಡಿದೆ. ಹಾಲು ಉತ್ಪಾದನೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಮೊಟ್ಟೆ ಉತ್ಪಾದನೆಯಲ್ಲಿ ಕರ್ನಾಟಕ 6ನೇ ಸ್ಥಾನದಲ್ಲಿದೆ. ಮಾಂಸ ಉತ್ಪಾದನೆಯಲ್ಲಿ 103ನೇ ಸ್ಥಾನ ಪಡೆದಿದೆ. ಎಪಿಎಂಸಿಗಳಲ್ಲಿ ಶುಲ್ಕದಿಂದ ರೈತರಿಗೆ ಹೊರೆಯಾಗುತ್ತಿತ್ತು. ಹೀಗಾಗಿ ಮಾರುಕಟ್ಟೆ ಶುಲ್ಕ ಶೇ.0.6ರಷ್ಟು ತಗ್ಗಿಸಲಾಗಿದೆ. ರಾಜ್ಯದ 54 ಕೇಂದ್ರಗಳಲ್ಲಿ ಉಗ್ರಾಣ ನಿರ್ಮಾಣ ಕಾರ್ಯ ಮಾಡಲಾಗಿದೆ ಎಂದು ಹೇಳಿದ್ದಾರೆ.

ಹುಲಿ, ಆನೆ ಹೆಚ್ಚಿನ ಸಂಖ್ಯೆಯಲ್ಲಿ ಇರುವ ರಾಜ್ಯ ಕರ್ನಾಟಕ

ಅರಣ್ಯ ಇಲಾಖೆಯಿಂದ 2.39 ಕೋಟಿ ಗಿಡ ನೆಡಲಾಗಿದೆ. 1.87 ಕೋಟಿ ಸಸಿ ಸಾರ್ವಜನಿಕರಿಗೆ ವಿತರಿಸಲಾಗಿದೆ. ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ ಕರ್ನಾಟಕ ಆಗಿದೆ. 524 ಹುಲಿ ಹೊಂದಿರುವ ಕರ್ನಾಟಕ 2ನೇ ಸ್ಥಾನದಲ್ಲಿದೆ. 2017ರ ಗಣತಿಯಂತೆ ರಾಜ್ಯದಲ್ಲಿ 6,049 ಆನೆಗಳಿವೆ. ಇದು ಭಾರತದಲ್ಲಿನ ಆನೆಗಳಲ್ಲಿ ಶೇ.25ರಷ್ಟು ರಾಜ್ಯದಲ್ಲಿವೆ ಎಂದು ಮಾಹಿತಿ ನೀಡಿದ್ದಾರೆ.

ಸ್ವಾವಲಂಬಿ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳೋಣ

ನಾವು ಈಗ ಕೊರೊನಾ 3ನೇ ಅಲೆ ಎದುರಿಸುತ್ತಿದ್ದೇವೆ. ಈ ಪರಿಸ್ಥಿತಿಯನ್ನು ಗಂಭೀರವಾಗಿ ನಿಭಾಯಿಸಬೇಕು. ದೈಹಿಕ ಅಂತರ ಪಾಲಿಸಿ, ಕಡ್ಡಾಯವಾಗಿ ಮಾಸ್ಕ್ ಧರಿಸಿ. ರಾಜ್ಯದ ಜನತೆ ಎಸ್ಎಂಎಸ್ ಮಂತ್ರ ಪಾಲಿಸಬೇಕು. ‘ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸ್’ ಮಂತ್ರ ಪಾಲಿಸಬೇಕು. ಸ್ವಾವಲಂಬಿ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳೋಣ. ನಮ್ಮನ್ನು ನಾವು ಸಮರ್ಪಿಸಿಕೊಳ್ಳೋಣ ಎಂದು ರಾಜ್ಯಪಾಲರು ಕರೆನೀಡಿದ್ದಾರೆ.

ಇದನ್ನೂ ಓದಿ: India Republic Day; ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್​ ರಚಿಸಿ ಶುಭ ಕೋರಿದ ಗೂಗಲ್​

ಇದನ್ನೂ ಓದಿ: Republic Day 2022: ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್​ ಶಾ

Published On - 9:55 am, Wed, 26 January 22

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು