ರೋಹಿಂಗ್ಯಾ ಮುಸ್ಲಿಮರನ್ನು ಗಡಿಪಾರು ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ; ಕರ್ನಾಟಕ ಸರ್ಕಾರ ಅಫಿಡವಿಟ್
ಗಡಿಪಾರು ಮಾಡಲು ಸಲ್ಲಿಸಿರುವ ಅರ್ಜಿಯನ್ನ ವಜಾಮಾಡಿ ಎಂದು ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕ ಸರ್ಕಾರದಿಂದ ಹೇಳಿಕೆ ನೀಡಿದೆ. ಬಿಜೆಪಿಯ ಅಶ್ವಿನಿ ಉಪಾಧ್ಯಾಯ ಈ ಬಗ್ಗೆ ಪಿಐಎಲ್ ಸಲ್ಲಿಸಿದ್ದರು.
ಬೆಂಗಳೂರು: ನಗರದಲ್ಲಿ 72 ರೋಹಿಂಗ್ಯಾ ಮುಸ್ಲಿಮರು ಇದ್ದಾರೆ. ಅವರನ್ನು ಗಡಿಪಾರು ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸುಪ್ರೀಂಕೋರ್ಟ್ಗೆ ಕರ್ನಾಟಕ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ರೋಹಿಂಗ್ಯಾ ಮುಸ್ಲಿಮರು ಬೆಂಗಳೂರಿನ ವಿವಿಧೆಡೆ ಹೊಟ್ಟೆಪಾಡಿಗೆ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳುವುದಿಲ್ಲ. ಗಡಿಪಾರು ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಗಡಿಪಾರು ಮಾಡಲು ಸಲ್ಲಿಸಿರುವ ಅರ್ಜಿಯನ್ನ ವಜಾಮಾಡಿ ಎಂದು ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕ ಸರ್ಕಾರದಿಂದ ಹೇಳಿಕೆ ನೀಡಿದೆ. ಬಿಜೆಪಿಯ ಅಶ್ವಿನಿ ಉಪಾಧ್ಯಾಯ ಈ ಬಗ್ಗೆ ಪಿಐಎಲ್ ಸಲ್ಲಿಸಿದ್ದರು. ರೋಹಿಂಗ್ಯಾ ಮುಸ್ಲಿಮರನ್ನ ಗಡಿಪಾರು ಮಾಡುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ನಿಜಕ್ಕೂ ರಸ್ತೆಗಳು ಅಸ್ತಿತ್ವದಲ್ಲಿವೆಯೇ ಎಂದು ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ದಾಸರಹಳ್ಳಿ ವಿಭಾಗದಲ್ಲಿ ರಸ್ತೆ ದುಸ್ಥಿತಿ ಹಿನ್ನೆಲೆ, ಇಲ್ಲಿ ನಿಜಕ್ಕೂ ರಸ್ತೆಗಳು ಅಸ್ತಿತ್ವದಲ್ಲಿವೆಯೇ ಎಂದು ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಮಳೆ ಮುಗಿದ ನಂತರ ರಸ್ತೆ ಕಾಮಗಾರಿ ನಡೆಸಲಾಗುವುದು. ಅನುದಾನ ಲಭ್ಯವಾದರೆ ಶೀಘ್ರ ಕಾಮಗಾರಿ ನಡೆಸುವುದು ಎಂದು ಹೈಕೋರ್ಟ್ಗೆ ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಹೇಳಿಕೆ ನೀಡಿದ್ದಾರೆ. ನೀವು ಸಾಲ ಮಾಡಿ, ಕಳ್ಳತನ ಮಾಡಿ. ಆದರೆ, ಮೂಲಭೂತ ಸೌಕರ್ಯ ಕಲ್ಪಿಸುವುದು ನಿಮ್ಮ ಕರ್ತವ್ಯ. ಮಳೆಯ ನಂತರ ಬೆಂಗಳೂರಿನ ರಸ್ತೆಗಳು ಇನ್ನೂ ಹಾಳಾಗಿವೆ ಎಂದು ಸಿಜೆ ರಿತು ರಾಜ್ ಅವಸ್ತಿ ನೇತೃತ್ವದ ಪೀಠ ಅಸಮಾಧಾನ ಹೊರಹಾಕಿದೆ.
ಈ ಸಂಬಂಧ ಜನವರಿ ತಿಂಗಳೊಳಗೆ ಕಾಮಗಾರಿ ಪ್ರಗತಿಯ ವರದಿ ನೀಡಿ ಎಂದು ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ಮಾಡಿದೆ. ಈ ಪ್ರಕರಣ ಬಗ್ಗೆ ಅಶ್ವತ್ಥ್ ನಾರಾಯಣ ಚೌಧರಿ ಪಿಐಎಲ್ ಸಲ್ಲಿಸಿದ್ದರು. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಿನ್ನೆಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ.
ಇದನ್ನೂ ಓದಿ: ನೀವು ಸಾಲ ಮಾಡಿ ಕಳ್ಳತನ ಮಾಡಿ; ಆದ್ರೆ ಮೂಲ ಸೌಕರ್ಯ ಕಲ್ಪಿಸುವುದು ನಿಮ್ಮ ಕರ್ತವ್ಯ: ಸರ್ಕಾರಕ್ಕೆ ಕೋರ್ಟ್ ತರಾಟೆ
ಇದನ್ನೂ ಓದಿ: ಚರ್ಚ್ಗಳ ಗಣತಿಗೆ ನಿರ್ಧಾರ: ಕರ್ನಾಟಕ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು
Published On - 6:45 pm, Mon, 25 October 21