ಬೆಂಗಳೂರು: ಒಮಿಕ್ರಾನ್ ರೂಪಾಂತರಿ ಹಾಗೂ ಕೊರೊನಾ ಪ್ರಕರಣಗಳ ನಿಯಂತ್ರಣಕ್ಕೆ IAS ಅಧಿಕಾರಿಗಳಿಗೆ ವಿಶೇಷ ಜವಾಬ್ದಾರಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಒಮಿಕ್ರಾನ್ ನಿರ್ವಹಣೆ ಕಟ್ಟೆಚ್ಚರ ವಹಿಸಲು ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯ ಕೊವಿಡ್ ವಾರ್ ರೂಮ್ ನಿರ್ವಹಣೆ, ಆಕ್ಸಿಜನ್ ನಿರ್ವಹಣೆಗಾಗಿ ಮೌನೀಶ್ ಮೌದ್ಗಿಲ್, ಹೋಮ್ ಐಸೋಲೇಶನ್ ವಿಚಾರವಾಗಿ ಪಂಕಜ್ ಕುಮಾರ್ ಪಾಂಡೆ, ವಿದೇಶಿ ಪ್ರಯಾಣಿಕ ತಪಾಷಣೆ, ಸ್ಕ್ರಿನಿಂಗ್ ಕೊವಿಡ್ ನಿರ್ವಹಣೆಗೆ ಎಂ ಶೀಖಾ, ಆಕ್ಸಿಜನ್ ಸರಬರಾಜು ನೋಡಿಕೊಳ್ಳಲು ಪ್ರತಾಪ್ ರೆಡ್ಡಿ, ಗುಂಜನ್ ಕೃಷ್ಣಾ, ಸರ್ವೆಲೆನ್ಸ್ ನೋಡಲ್ ಆಫೀಸರ್ ಆಗಿ ಶಿಲ್ಪಾನಾಗ್, ಹಾಸ್ಪಿಟಲ್ ಬೆಡ್ ನಿರ್ವಹಣೆಗಾಗಿ ಕುಮಾರ್ ಪುಷ್ಕರ್ ಹಾಗೂ ಔಷಧ ನಿರ್ವಹಣೆಗೆ ಎಂ.ಟಿ ರೇಜು ನೇಮಕ ಮಾಡಿ ಆದೇಶ ನೀಡಲಾಗಿದೆ. ಅದರಂತೆ 6 ಐಎಎಸ್ ಅಧಿಕಾರಿಗಳು ಮತ್ತು 1 ಐಪಿಎಸ್ ಅಧಿಕಾರಿ ನೋಡಲ್ ಅಧಿಕಾರಿಗಳಾಗಿ ನೇಮಕಗೊಂಡಿದ್ದಾರೆ.
ವಿಧಾನಸೌಧದಲ್ಲಿ ಬಿ.ಸಿ. ನಾಗೇಶ್ ನೇತೃತ್ವದಲ್ಲಿ ಕೊರೊನಾ ಕುರಿತಾಗಿ ಸಭೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇಡೀ ದಿನ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದಿದ್ದಾರೆ ಎಂದು ಹೇಳಲಾಗಿದೆ. ಸಾಮೂಹಿಕ ಸಭೆ ನಡೆಸದೆ ಪ್ರತ್ಯೇಕವಾಗಿ ಮಾಹಿತಿ ಸಂಗ್ರಹ ಮಾಡಲಾಗಿದೆ. ಮೊದಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಂದ ವಿವರ ಪಡೆಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಈ ನಡುವೆ ಶಾಲೆಗಳಲ್ಲಿ ಹೊಸ ಪ್ರತ್ಯೇಕ SOP ನೀಡುವಂತೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಮನವಿ ಮಾಡಲಾಗಿದೆ. ಶಾಲೆಗಳಿಗೆ ಪ್ರತ್ಯೇಕ ಕೊರೊನಾ ಮಾರ್ಗಸೂಚಿ ಪ್ರಕಟಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಪ್ರಾಥಮಿಕ & ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ. ನಾಗೇಶ್ಗೆ ಸೋಮವಾರ ಮನವಿ ಮಾಡಲಾಗಿದೆ. ಶಾಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪಾಲನೆ ಆಗುತ್ತಿಲ್ಲ. ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಮಾರ್ಗಸೂಚಿ ಪಾಲಿಸ್ತಿಲ್ಲ. ಕೋಚಿಂಗ್ ಸೆಂಟರ್, ಟ್ಯುಟೋರಿಯಲ್ಗಳು ಪಾಲಿಸುತ್ತಿಲ್ಲ. ಹೀಗಾಗಿ ಶಿಕ್ಷಣ ಸಂಸ್ಥೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿ. ಶಿಕ್ಷಣ ಇಲಾಖೆಯಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿ ಮಾಡಿದ್ದಾರೆ.
ಸೋಂಕು ಹೆಚ್ಚಾದರೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧವಿದೆ: ಡಾ.ಅಶ್ವತ್ಥ್ ನಾರಾಯಣ
ಸೋಂಕು ಹೆಚ್ಚಾದರೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಅಗತ್ಯಬಿದ್ದರೆ ಸಿಎಂ ಬೊಮ್ಮಾಯಿ ಕಠಿಣ ಕ್ರಮ ಕೈಗೊಳ್ತಾರೆ. ಕಡ್ಡಾಯವಾಗಿ ಕೊವಿಡ್ ನಿಯಮಗಳ ಪಾಲನೆಗೆ ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯಸರ್ಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡಿದೆ. ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ. ಒಮಿಕ್ರಾನ್‌ನಿಂದ ಆತಂಕ ಇಲ್ಲ ಅಂತ ತಜ್ಞರು ಹೇಳಿದ್ದಾರೆ. ಸೋಂಕು ತಗುಲಿದ ಕಾರಣಕ್ಕೆ ಆತಂಕಪಡುವ ಅಗತ್ಯ ಇಲ್ಲ. ಲಸಿಕೆ ಹಾಕಿಸಿಕೊಳ್ಳುವ ಅಭಿಯಾನಕ್ಕೆ ವೇಗ ನೀಡಲಾಗ್ತಿದೆ ಎಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.
ಬಿಜೆಪಿಗೆ ಹೋಗಿಲ್ಲವೆಂದು ನನ್ನನ್ನು ಜೈಲಿಗೆ ಕಳಿಸಿದ್ರು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್‌ರನ್ನು ನಮ್ಮ ಪಕ್ಷಕ್ಕೆ ಸ್ವಾಗತ ಮಾಡಿಲ್ಲ. ಅವರ ಅಗತ್ಯ ನಮ್ಮ ಪಕ್ಷಕ್ಕೆ ಇಲ್ಲ. ನಮ್ಮ ಪಕ್ಷದಲ್ಲೇ ಹಲವು ದೊಡ್ಡದೊಡ್ಡ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಗತ್ಯ ಬಿಜೆಪಿಗೆ ಇಲ್ಲ. ಅವರು ಬಿಜೆಪಿಗೆ ಸಲ್ಲುವವರಲ್ಲ, ಕಾಂಗ್ರೆಸ್‌ಗೆ ಸಲ್ಲುವ ನಾಯಕ. ಅವರ ಶೈಲಿ, ತತ್ವ, ಸಿದ್ಧಾಂತ ಕಾಂಗ್ರೆಸ್‌ಗೆ ಮಾತ್ರ ಸಲ್ಲುತ್ತದೆ ಎಂದು ಬೆಂಗಳೂರಿನಲ್ಲಿ ಸಚಿವ ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: Mangalore College Covid: ಮಂಗಳೂರಿನಲ್ಲಿ ಒಂದೇ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೊರೊನಾ ದೃಢ
Published On - 5:22 pm, Mon, 6 December 21