ಬೆಂಗಳೂರು: ಕರ್ನಾಟಕದಲ್ಲಿ ಅದ್ದೂರಿಯಾಗಿ ಆಚರಿಸುವ ಕನ್ನಡ ರಾಜ್ಯೋತ್ಸವ, ವಿವಿಧ ಕಾರ್ಯಕ್ರಮಗಳಲ್ಲಿ ಕನ್ನಡಾಂಬೆಯ ಚಿತ್ರದ ಬದಲಿಗೆ ಸರಸ್ವತಿ, ದುರ್ಗಾದೇವಿ ಸೇರಿದಂತೆ ಇತರೆ ದೇವರ ಚಿತ್ರಗಳನ್ನು ಇಟ್ಟು ಪೂಜಿಸಲಾಗುತ್ತಿತ್ತು. ಹಾಗೂ ನಾಡ ದೇವಿ ಭುವನೇಶ್ವರಿಯ ಚಿತ್ರವನ್ನು ವಿವಿಧ ರೀತಿಯಲ್ಲಿ ಬಳಸಲಾಗಿದೆ. ಕನ್ನಡಾಂಬೆಗೆ ನಿರ್ದಿಷ್ಟವಾದ ಚಿತ್ರ ಇಲ್ಲದನ್ನು ಗಮನಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಮಾತೆಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಬಿಡುಗಡೆ ಮಾಡಲು ಒಪ್ಪಿದೆ.
ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದ ಸಮಿತಿ ಈ ಬಗ್ಗೆ ಶಿಫಾರಸು ನೀಡಿತ್ತು. ಕಲಾವಿದರಾದ ಸೋಮಶೇಖರ್.ಕೆ ಅವರು ರಚಿಸಿರುವ ಚಿತ್ರವನ್ನು ಅಧಿಕೃತವಾಗಿ ಜಾರಿಗೆ ತರುವಂತೆ ಶಿಫಾರಸು ಸಲ್ಲಿಸಿತ್ತು. ಸಮಿತಿಯಲ್ಲಿ ಡಾ. ಚೂಡಾಮಣಿ ನಂದಗೋಪಾಲ್, ಎಚ್.ಎಚ್.ಮ್ಯಾದರ್, ಬಾಬು ನಡೋಣಿ, ವಿ.ಎಸ್. ಕಡೇಮನಿ ಸದಸ್ಯರಾಗಿದ್ದರು.
Former Chairman to Lalithakala academy D Mahendra 's committee has recommended portrait of Goddess Bhuvaneshwari to the Department of Kannada & Culture. Statue of Bhuvaneshwari will come up which will be similar to this portrait at Bengaluru University campus.@NewIndianXpress pic.twitter.com/XalIs8W55y
— Ashwini M Sripad/ಅಶ್ವಿನಿ ಎಂ ಶ್ರೀಪಾದ್?? (@AshwiniMS_TNIE) November 21, 2022
ಇದನ್ನೂ ಓದಿ: ದುಬಾರಿ ಬೆಲೆಗೆ ಬಾರ್ಗಳಿಗೆ ಕನ್ನಡಾಂಬೆ ಫೋಟೊ ಮಾರಿದ ಅಬಕಾರಿ ಇಲಾಖೆ: ಫೋಟೊಗಳಲ್ಲಿ ಅನ್ಯ ಬಾವುಟ: ವ್ಯಾಪಕ ಆಕ್ರೋಶ
ಅದರಂತೆ ಈಗ ಕರ್ನಾಟಕದ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಚಿತ್ರವನ್ನು ಐವರು ಕಲಾವಿದರ ಸಮಿತಿಯ ಶಿಫಾರಸುಗಳನ್ನು ಒಪ್ಪಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಆದೇಶ ಹೊರಬೀಳಲಿದೆ. ಅಲ್ಲದೆ ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಶಾಲಾ ಕಾಲೇಜುಗಳ ಗೋಡೆಯ ಮೇಲೆ ಈ ಚಿತ್ರವನ್ನೇ ಕಡ್ಡಾಯವಾಗಿ ಬಳಸಬೇಕು ಎಂಬ ಆದೇಶವೂ ಹೊರ ಬೀಳಲಿದೆ.
ಬೆಂಗಳೂರು ವಿವಿ ಆವರಣದಲ್ಲಿ ಸ್ಥಾಪಿಸುವ ನಾಡದೇವಿ ಪ್ರತಿಮೆ ಇದೇ ರೀತಿ ಆಗಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಕನ್ನಡಾಂಬೆಯ ಅಧಿಕೃತ ಚಿತ್ರದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಳಸಲಾಗಿದೆ.
ರಾಜ್ಯದ ನಾಡದೇವತೆಯ ಚಿತ್ರವನ್ನು ವಿವಿಧ ಚಿತ್ರಪಟಗಳಲ್ಲಿ ವಿವಿಧ ರೀತಿಯಾಗಿ ಚಿತ್ರಿಸಿರಿವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ನಾಡದೇವತೆಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರ ಅವಶ್ಯಕವಾಗಿತ್ತು.ಈ ಹಿನ್ನಲೆಯಲ್ಲಿ ನಾಡದೇವತೆಯ ಪ್ರಮಾಣಿತ & ಅಧಿಕೃತ ಚಿತ್ರ ಆಯ್ಕೆ ಮಾಡಿ ಶಿಫಾರಸ್ಸು ಮಾಡಲು ಲಲಿತಕಲಾ ಅಕಾಡೆಮಿ ಅಧ್ಯಕ್ಷರಾದ ಶ್ರೀ ಡಿ.ಮಹೇಂದ್ರರವರ pic.twitter.com/I6uJbjx4Xm
— Sunil Kumar Karkala (@karkalasunil) November 21, 2022
ಕನ್ನಡಾಂಬೆಯ ಅಧಿಕೃತ ಭಾವಚಿತ್ರದಲ್ಲಿ ಅಳವಡಿಸಲಾಗಿರುವ ಅಂಶಗಳು
Published On - 8:24 am, Tue, 22 November 22