Cabinet Meeting: 3 ನಿಗಮಗಳ ವಿಲೀನಕ್ಕೆ, 400 ಪಶುವೈದ್ಯರ ನೇಮಕಾತಿಗೆ ಸಚಿವ ಸಂಪುಟ ಅನುಮೋದನೆ

ಅರಣ್ಯ ಅಭಿವೃದ್ಧಿ ನಿಗಮ, ಅರಣ್ಯ ಕೈಗಾರಿಕಾ ನಿಗಮ ಮತ್ತು ಗೇರು ಅಭಿವೃದ್ಧಿ ನಿಗಮಗಳನ್ನು ವಿಲೀನಗೊಳಿಸಲು ಸರ್ಕಾರವು ನಿರ್ಧರಿಸಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

Cabinet Meeting: 3 ನಿಗಮಗಳ ವಿಲೀನಕ್ಕೆ, 400 ಪಶುವೈದ್ಯರ ನೇಮಕಾತಿಗೆ ಸಚಿವ ಸಂಪುಟ ಅನುಮೋದನೆ
ಕಾನೂನು ಸಚಿವ ಜೆಸಿ ಮಾಧುಸ್ವಾಮಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 27, 2022 | 5:43 PM

ಬೆಂಗಳೂರು: ಕರ್ನಾಟಕ ಸರ್ಕಾರದ (Karnataka Govt) ಸುಪರ್ದಿಯಲ್ಲಿರುವ ಮೂರು ನಿಗಮಗಳನ್ನು ವಿಲೀನಗೊಳಿಸಲು ಸಚಿವ ಸಂಪುಟ ಒಪ್ಪಿಗೆ (Karnataka Cabinet Meeting) ಸೂಚಿಸಿದೆ. ಅರಣ್ಯ ಅಭಿವೃದ್ಧಿ ನಿಗಮ, ಅರಣ್ಯ ಕೈಗಾರಿಕಾ ನಿಗಮ ಮತ್ತು ಗೇರು ಅಭಿವೃದ್ಧಿ ನಿಗಮಗಳನ್ನು ವಿಲೀನಗೊಳಿಸಲು ಸರ್ಕಾರವು ನಿರ್ಧರಿಸಿದೆ ಎಂದು ಸಚಿವ ಸಂಪುಟ ಸಭೆಯ ವಿವರಗಳನ್ನು ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ (JC Madhuswamy) ತಿಳಿಸಿದರು. ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿದ್ಯಾವಿಕಾಸ ಕಾರ್ಯಕ್ರಮದ ಸಮವಸ್ತ್ರಕ್ಕೆ ₹ 73.63 ಕೋಟಿ ನೀಡಲು ನಿರ್ಧರಿಸಲಾಗಿದೆ ಎಂದರು.

ಲೋಕಾಯುಕ್ತದಲ್ಲಿ ಇನ್ನೂ ಸ್ವಲ್ಪ ದಿನ ಮೂರ್ನಾಲ್ಕು ಸಿಬ್ಬಂದಿಯನ್ನು ಮುಂದುವರಿಸುತ್ತೇವೆ. ಸನ್ನಡತೆ ಅಧಾರದಲ್ಲಿ 166 ಕೈದಿಗಳ ಬಿಡುಗಡೆಗೆ ನಿರ್ಧರಿಸಲಾಗಿದೆ. ಚಾಮುಂಡೇಶ್ವರಿ ದೇಗುಲದ ಮೂಲಸೌಕರ್ಯಕ್ಕೆ ₹ 92.81 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಕರ್ನಾಟದಲ್ಲಿ ಸ್ವಾಮಿತ್ವ ಯೋಜನೆಗೆ ₹ 287 ಕೋಟಿ ಅನುದಾನ ನೀಡಲಾಗಿದೆ. ಗ್ರಾಮೀಣ ವಸತಿ ಹಕ್ಕು, ಕೃಷಿ ಭೂಮಿಯ ಹಕ್ಕುಗಳ ದಾಖಲೆಗಳನ್ನು ಹಾಗೂ ಪಟ್ಟಣ, ನಗರದ ಆಸ್ತಿಗಳ ದಾಖಲೆ ಸಿದ್ಧಪಡಿಸಲು ಸಮೀಕ್ಷೆ ನೆರವಾಗಲಿದೆ ಎಂದರು. ಕೆಟಿಪಿಪಿ ಕಾಯ್ದೆಯ ಅನ್ವಯ ಅರ್ಹ ಖಾಸಗಿ ಏಜೆನ್ಸಿಗಳಿಂದ ಡ್ರೋಣ್ ಮೂಲಕ ಸಮೀಕ್ಷೆ ನಡೆಸಲಾಗುವುದು. ಇದಕ್ಕಾಗಿ ₹ 287 ಕೋಟಿ ಮೊತ್ತಕ್ಕೆ ಆಡಳಿತಾತ್ಮಕ ಅನುದಾನ ಸಿಕ್ಕಿದೆ ಎಂದರು.

ಶಿವರಾಮ ಕಾರಂತ ಬಡಾವಣೆಗಾಗಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) 400 ಎಕರೆ ಜಮೀನು ನಿಗದಿಪಡಿಸಲಾಗಿದೆ. ಈ ಪೈಕಿ 66.17 ಎಕರೆ ಹಸ್ತಾಂತರ ಮಾಡಲಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲಲ್ಲಿ ವಿಸ್ತರಿಸಲಾಗುವುದು. 32 ಗ್ರಾಮಗಳಿಗೆ ವಿಸ್ತರಿಸುವ ಈ ಯೋಜನೆಗೆ ₹22 ಕೋಟಿಯ ಅಂದಾಜು ಮೊತ್ತ ನಿಗದಿಪಡಿಸಲಾಗಿದ್ದು, ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ವಸತಿ ಬಡಾವಣೆಗೆ ₹30.50 ಕೋಟಿ ಮೊತ್ತದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಹುಬ್ಬಳ್ಳಿ-ಧಾರವಾಡ ಆರ್ಯಭಟ ಐಟಿ ಪಾರ್ಕ್​​ನಲ್ಲಿ ಬಾಕಿ ಉಳಿದ 3 ಎಕರೆ ಭೂಮಿಯನ್ನು 3 ಐಟಿ-ಬಿಟಿ ಕಂಪನಿಗಳಿಗೆ ಹಂಚಿಕೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ. 400 ಪಶುವೈದ್ಯರ ಇಲಾಖಾ ನೇಮಕಾತಿಗೆ ಅನುಮತಿ ನೀಡಲಾಗಿದೆ. ಸಂಪುಟ ಸಭೆಯಲ್ಲಿ ಕೊವಿಡ್ ನಿಯಮಗಳ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಹೇಳಿದರು.

ಮುಂದಿನ ಶೈಕ್ಷಣಿಕ ವರ್ಷದಲ್ಲಿ, ಅಂದರೆ (2022-2023ರಲ್ಲಿ) 60 ಲಕ್ಷ ಮೀಟರ್ ಬಟ್ಟೆ ಖರೀದಿಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಒದಗಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಜಿಲ್ಲಾ ಉಸ್ತುವಾರಿ ಸಚಿವರ ವಿಚಾರ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಉಸ್ತುವಾರಿ ಸಿಕ್ಕಿಲ್ಲ ಅಂತ ನೋವಾಗುತ್ತೆ ನನಗೆ ಜಿಲ್ಲಾ ಉಸ್ತುವಾರಿ ಸಿಕ್ಕಿಲ್ಲ ಎಂದು ನೋವಾಗುವುದು ಸಹಜ. ಆದರೆ ಮಂತ್ರಿ ಸ್ಥಾನವೇನೂ ಹೋಗಿಲ್ಲವಲ್ಲ. ನನಗೂ ಬೇರೆ ಜಿಲ್ಲೆ ನೋಡಿಕೊಳ್ಳಿ ಎಂದರು. ಬೇರೆ ಜಿಲ್ಲೆಗೆ ಹೋಗಿ ತಳವೂರಿ ಅಲ್ಲಿಯದೆಲ್ಲ ಅರ್ಥ ಮಾಡಿಕೊಳ್ಳೋಕೆ ಒಂದು ವರ್ಷದಲ್ಲಿ ಆಗುತ್ತೆ ಅಂತ ನನಗೆ ಅನ್ನಿಸಲಿಲ್ಲ. ಹೀಗಾಗಿ ನನಗೆ ಬೇಡ ಎಂದು ಹೇಳಿದೆ. ಮುಖ್ಯಮಂತ್ರಿಯವರು ನನ್ನನ್ನು ಹಾಗೂ ಆರ್.ಅಶೋಕ ಅವರನ್ನು ದೂರ ಇಟ್ಟಿಲ್ಲ ಎಂದು ನುಡಿದರು.

ಇದನ್ನೂ ಓದಿ: ಗಣರಾಜ್ಯೋತ್ಸವ ದಿನ ಧ್ವಜಾರೋಹಣ ಕಾರ್ಯಕ್ರಮದಿಂದ ದೂರ ಉಳಿದ ಸಚಿವ ಮಾಧುಸ್ವಾಮಿ ಇದನ್ನೂ ಓದಿ: ಸಚಿವ ಜೆಸಿ ಮಾಧುಸ್ವಾಮಿಗೆ ಜಿಲ್ಲಾ ಉಸ್ತುವಾರಿ ನೀಡಿ; ಕರ್ನಾಟಕ ಸರ್ಕಾರಕ್ಕೆ ಬೆಂಬಲಿಗರಿಂದ ಒತ್ತಾಯ

Published On - 5:43 pm, Thu, 27 January 22

ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್
ಲಂಚ ಕೇಳಿದ ಅಧಿಕಾರಿಯನ್ನು ಟ್ರಾನ್ಸ್​ಫರ್ ಮಾಡೋದೇ ದೊಡ್ಡ ಶಿಕ್ಷೆ!
ಲಂಚ ಕೇಳಿದ ಅಧಿಕಾರಿಯನ್ನು ಟ್ರಾನ್ಸ್​ಫರ್ ಮಾಡೋದೇ ದೊಡ್ಡ ಶಿಕ್ಷೆ!
IND vs AUS: ಆಸ್ಟ್ರೇಲಿಯಾ ಪ್ರಧಾನಿಯನ್ನ ಭೇಟಿಯಾದ ಟೀಮ್ ಇಂಡಿಯಾ
IND vs AUS: ಆಸ್ಟ್ರೇಲಿಯಾ ಪ್ರಧಾನಿಯನ್ನ ಭೇಟಿಯಾದ ಟೀಮ್ ಇಂಡಿಯಾ
ಗುಂಪುಗಾರಿಕೆ 2 ತಿಂಗಳು ಮುಂದುವರಿಯಲಿದೆ, ಪತ್ರ ಚಳುವಳಿ ಅಗತ್ಯವಿಲ್ಲ: ಶಾಸಕ
ಗುಂಪುಗಾರಿಕೆ 2 ತಿಂಗಳು ಮುಂದುವರಿಯಲಿದೆ, ಪತ್ರ ಚಳುವಳಿ ಅಗತ್ಯವಿಲ್ಲ: ಶಾಸಕ
ಯತ್ನಾಳ್ ತಂಡದ ವಿರುದ್ದ 2 ಪತ್ರ ಬರೆದರೂ ವರಿಷ್ಠರಿಂದ ಕ್ರಮವಿಲ್ಲ: ಡಿವಿಎಸ್
ಯತ್ನಾಳ್ ತಂಡದ ವಿರುದ್ದ 2 ಪತ್ರ ಬರೆದರೂ ವರಿಷ್ಠರಿಂದ ಕ್ರಮವಿಲ್ಲ: ಡಿವಿಎಸ್
ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ದೇವೇಗೌಡ
ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ದೇವೇಗೌಡ