Salary Hike: ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ

Guest Lecturer Salary: ಪ್ರತಿ ತಿಂಗಳ 10ನೇ ತಾರೀಖಿನೊಳಗೆ ವೇತನ ಪಾವತಿಗೆ ವ್ಯವಸ್ಥೆ ರೂಪಿಸಲಾಗುವುದು ಎಂದು ಕರ್ನಾಟಕ ಸರ್ಕಾರವು ಭರವಸೆ ನೀಡಿದೆ.

Salary Hike: ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 14, 2022 | 8:17 PM

ಬೆಂಗಳೂರು: ಕರ್ನಾಟಕ ಸರ್ಕಾರವು ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇಡೀ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಿದ್ದು, ಯುಜಿಸಿ ನಿಯಮ ಅನುಸರಿಸಿ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಈವರೆಗೆ ₹ 13,000 ವೇತನ ಪಡೆಯುತ್ತಿದ್ದವರು ಮುಂದಿನ ದಿನಗಳಲ್ಲಿ ₹ 32,000 ಪಡೆಯಲಿದ್ದಾರೆ. ₹ 11,000 ವೇತನ ಪಡೆಯುತ್ತಿದ್ದವರು ₹ 28,000 ಪಡೆಯಲಿದ್ದಾರೆ. ಪ್ರತಿ ತಿಂಗಳ 10ನೇ ತಾರೀಖಿನೊಳಗೆ ವೇತನ ಪಾವತಿಗೆ ವ್ಯವಸ್ಥೆ ರೂಪಿಸಲಾಗುವುದು ಎಂದು ಸರ್ಕಾರವು ಭರವಸೆ ನೀಡಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕಳೆದ ಒಂದು ತಿಂಗಳಿನಿಂದ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರು. ಹೋರಾಟದ ನಂತರ ಎಚ್ಚೆತ್ತ ಸರ್ಕಾರವು ಉಪನ್ಯಾಸಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲು ಮುಂದಾಗಿತ್ತು.

ಸಂಕ್ರಾಂತಿ ಕೊಡುಗೆ ಎಂದ ಬಸವರಾಜ ಬೊಮ್ಮಾಯಿ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ನಿರ್ಧಾರವು ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ನೀಡಿರುವ ಸಂಕ್ರಾಂತಿ ಕೊಡುಗೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಉಪನ್ಯಾಸಕರ ಬೇಡಿಕೆಯ ಶಿಫಾರಸುಗಳಿಗೆ ಸಮ್ಮತಿ ಸೂಚಿಸುವ ಕಡತವನ್ನು ಮುಖ್ಯಮಂತ್ರಿ ಇಂದು (ಜ.14) ವಿಲೇವಾರಿ ಮಾಡಿದರು. ಇವು ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆಯಾಗಿದ್ದವು. ಈ ಸಂಬಂಧ ರಚಿಸಲಾಗಿದ್ದ ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಅನುಕೂಲ ಆಗಲಿದೆ. ಕರ್ನಾಟಕ ಸರ್ಕಾರದ ವತಿಯಿಂದ ಎಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಶುಭಾಶಯಗಳನ್ನು ಕೋರುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Salary-Hike-Order

ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಿ ಸರ್ಕಾರದ ಆದೇಶ

Salary-Hike-Order

ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಿ ಸರ್ಕಾರ ಆದೇಶ

ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸಲು ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದೆ. ಕಳೆದ ಸಾಲಿನಲ್ಲಿ ಬೇರೆಬೇರೆ ವಿಶ್ವವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ನಿರ್ಧಾರ ಮಾಡಲಾಗಿದೆ. 2021-22ನೇ ಸಾಲಿಗೂ‌ ಸೇವೆ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಇದ್ದವರನ್ನು ಒಂದು ದಿನದ ಮಟ್ಟಿಗೆ ಸೇವೆಯಿಂದ ಬಿಡುಗಡೆಗೊಳಿಸಿ ಪುನಃ ಸೇವೆಗೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕೊವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಈ ಮೊದಲು ಸಲಹೆ ನೀಡಿದ್ದರು. ಅಂದಿನ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದರು. ರಾಜ್ಯದ 412 ಪದವಿ ಕಾಲೇಜುಗಳಲ್ಲಿ ಸುಮಾರು 14,564 ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ನಿಯಮಾವಳಿ ಪ್ರಕಾರ, ಅತಿಥಿ ಉಪನ್ಯಾಸಕರು ವಿದ್ಯಾರ್ಹತೆಯನ್ನು ಹೊಂದಿರುತ್ತಾರೆ. ಕಳೆದ 2 ವರ್ಷಗಳಿಂದ ಕೊರೊನಾ ಹಿನ್ನೆಲೆ ಅತಿಥಿ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

ಅತಿ ಕಡಿಮೆ ವೇತನ ಮತ್ತು ಸೇವಾ ಭದ್ರತೆ ಇಲ್ಲದ ಕಾರಣ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕೆಂದು ಸೂಚಿಸಿದ್ದರು. ಈಗಾಗಲೇ ಕಡಿಮೆ ವೇತನ ಮತ್ತು ಭದ್ರತೆ ಇಲ್ಲದ ಕಾರಣ ರಾಜ್ಯದಲ್ಲಿ ಹಲವಾರು ಉಪನ್ಯಾಸಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಲ್ಲಾ ವಿದ್ಯಾರ್ಹತೆ ಹೊಂದಿ, ಹಲವು ವರ್ಷಗಳ ಅನುಭವ ಅತಿಥಿ ಉಪನ್ಯಾಸಕರಿಗಿದೆ. ಹಲವಾರು ಜನ ವಯೋವಿತಿ ಮೀರುತ್ತಿರುವುದರಿಂದ ಅಭದ್ರತೆಯಲ್ಲಿ ಸಿಲುಕಿದ್ದಾರೆ ಎಂದು ವಿವರಿಸಿದ್ದರು. ಇವರಂತೆಯೇ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹಂಗಾಮಿಯಾಗಿ ಕರ್ತವ್ಯ ನಿರ್ವಹಿಸಿದ ಪದನಾಮ ಬದಲಾದ ಸ್ಥಳೀಯ ಅಭ್ಯರ್ಥಿ, ಸ್ಟಾಪ್ ಗ್ಯಾಪ್, ಗುತ್ತಿಗೆ ಆಧಾರಿತ, ಅರೆಕಾಲಿಕ ಉಪನ್ಯಾಸಕರುಗಳನ್ನು ಸರ್ಕಾರ ಮಾನವೀಯತೆಯ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ ಅಂಥವರನ್ನ 1982, 1992, 1996 ಮತ್ತು 2003ರಲ್ಲಿ ಖಾಯಂ ಮಾಡಿರುವ ಉದಾಹರಣೆಗಳಿವೆ. ಅದೇ ಮಾದರಿಯಲ್ಲಿ ಈಗ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ. ಈ ಬಗ್ಗೆ ಸರ್ಕಾರ ಅಗತ್ಯ ಕ್ರಮ ವಹಿಸುವಂತೆ ಬಸವರಾಜ ಹೊರಟ್ಟಿ ಮುಖ್ಯಮಂತ್ರಿಗೆ ಪತ್ರದ ಬರೆದಿದ್ದರು.

ಇದನ್ನೂ ಓದಿ: ಪರಿಷತ್​ನಲ್ಲಿನ ಬೆಳವಣಿಗೆಯಿಂದ ಬೇಸರ; ರಾಜೀನಾಮೆಗೆ ಮುಂದಾಗಿದ್ದ ಬಸವರಾಜ ಹೊರಟ್ಟಿ ಮನವೊಲಿಸಿದ ನಾಯಕರು ಇದನ್ನೂ ಓದಿ: ಹಾವೇರಿ: ಹೊಟ್ಟೆ ಪಾಡಿಗೆ ಮಾವಿನ ಹಣ್ಣು ವ್ಯಾಪಾರ, ಉದ್ಯೋಗ ಖಾತ್ರಿಯತ್ತ ಮುಖ ಮಾಡಿದ ಅತಿಥಿ ಉಪನ್ಯಾಸಕರು

Published On - 7:52 pm, Fri, 14 January 22

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ