ಗೋಮಾಳ ಜಮೀನು ಮಂಜೂರಾತಿ ನೀತಿ ರಚನೆಗೆ ಸಚಿವ ಸಂಪುಟ ಉಪಸಮಿತಿ; ಆರ್ ಅಶೋಕ್ ಅಧ್ಯಕ್ಷತೆ
ಸರ್ಕಾರಿ ಸ್ವಾಮ್ಯದ ಗೋಮಾಳ, ಗಾಯರಣ, ಹುಲ್ಲು ಬನ್ನಿ, ಸೊಪ್ಪಿನ ಬೆಟ್ಟ, ಗ್ರಾಮೀಣ ಪ್ರದೇಶದ ಸರ್ಕಾರಿ ಜಮೀನನ್ನು ಖಾಸಗಿ ಸಂಘ ಸಂಸ್ಥೆಗಳಿಗೆ ಭೂ ಮಂಜೂರು ಮಾಡಲು ನೀತಿ ರೂಪಿಸಲು ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿದೆ. ನೀತಿಯನ್ನು ರೂಪಿಸಿ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
ಬೆಂಗಳೂರು: ಗೋಮಾಳ ಜಮೀನು ಮಂಜೂರಾತಿ ನೀತಿ ರಚನೆಗೆ ಸಮಿತಿ ರಚನೆ ಮಾಡಲಾಗಿದೆ. ಸಚಿವ ಸಂಪುಟ ಉಪಸಮಿತಿಯನ್ನ ರಚಿಸಿ ಸರ್ಕಾರ ಆದೇಶ ನೀಡಿದೆ. ಕಂದಾಯ ಸಚಿವ ಆರ್. ಅಶೋಕ್ ಅಧ್ಯಕ್ಷತೆಯ ಉಪ ಸಮಿತಿ ರಚನೆ ಮಾಡಲಾಗಿದೆ. ಉಪ ಸಮಿತಿ ಸದಸ್ಯರಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಮಾಧುಸ್ವಾಮಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ, ಸಚಿವ ಪ್ರಭು ಚೌಹಾಣ್ ನೇಮಕ ಮಾಡಲಾಗಿದೆ.
ಸರ್ಕಾರಿ ಸ್ವಾಮ್ಯದ ಗೋಮಾಳ, ಗಾಯರಣ, ಹುಲ್ಲು ಬನ್ನಿ, ಸೊಪ್ಪಿನ ಬೆಟ್ಟ, ಗ್ರಾಮೀಣ ಪ್ರದೇಶದ ಸರ್ಕಾರಿ ಜಮೀನನ್ನು ಖಾಸಗಿ ಸಂಘ ಸಂಸ್ಥೆಗಳಿಗೆ ಭೂ ಮಂಜೂರು ಮಾಡಲು ನೀತಿ ರೂಪಿಸಲು ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿದೆ. ನೀತಿಯನ್ನು ರೂಪಿಸಿ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
ಗೋವುಗಳನ್ನು ದತ್ತು ಪಡೆಯಲು ಪ್ರಭು ಚೌಹಾಣ್ ಮನವಿ
ಗೋವುಗಳನ್ನು ದತ್ತು ಪಡೆಯುವಂತೆ ಸಚಿವರು, ಸಂಸದರು, ಶಾಸಕರಿಗೆ ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ಗೋವುಗಳನ್ನು ಸಂರಕ್ಷಿಸಲು ಸಚಿವರು, ಜನಪ್ರತಿನಿಧಿಗಳು, ಚಿತ್ರರಂಗದ ಕಲಾವಿದರು, ಉದ್ಯಮಿಗಳು, ಸಂಘ-ಸಂಸ್ಥೆಗಳು ಗೋವುಗಳನ್ನು ದತ್ತು ಪಡೆದು ಪೋಷಣೆಗೆ ಮುಂದಾಗಬೇಕು ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ (Prabhu Chauhan) ಮನವಿ ಮಾಡಿದ್ದಾರೆ. ಈಗಾಗಲೇ ಗೋವುಗಳನ್ನು ದತ್ತು ಪಡೆಯುವ ಅಭಿಯಾನವನ್ನು ಆರಂಭಿಸಲಾಗಿದೆ. ಈ ಅಭಿಯಾನದಲ್ಲಿ ಗೋ ಮಾತೆಯನ್ನು ರಕ್ಷಿಸಲು ಗೋ ಪ್ರೇಮಿಗಳಾದ ಎಲ್ಲರೂ ಗೋವುಗಳನ್ನು ದತ್ತು ಪಡೆದು, ಹಸುಗಳ ಪೋಷಣೆ ಮಾಡುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಪ್ರಭು ಚೌಹಾಣ್ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ನಿನ್ನೆ ತಮ್ಮ ಜನ್ಮದಿನದ ಅಂಗವಾಗಿ ರಾಷ್ಟ್ರೋತ್ಥಾನ ಗೋ ಶಾಲೆಯ 11 ಗೋವುಗಳನ್ನು ದತ್ತು ಪಡೆಯುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಗೋ ಸಂತತಿಯ ರಕ್ಷಣೆಗೆ ಕರೆ ನೀಡಿದ್ದಾರೆ. ಈ ಆದರ್ಶವನ್ನು ಎಲ್ಲ ಸಂಸದರು, ಶಾಸಕರು, ವಿವಿಧ ವಲಯಗಳ ಗಣ್ಯರು, ಉದ್ಯಮಿಗಳು ಪಾಲಿಸುವ ಮೂಲಕ ಗೋ ಸಂರಕ್ಷಣೆಗೆ ಮುಂದಾಗುವಂತೆ ಅವರು ಕರೆ ನೀಡಿದ್ದಾರೆ.
ಕಳೆದ ಒಂದು ವರ್ಷದ ಹಿಂದೆಯೇ ನಾನು ಗೋವುಗಳನ್ನು ದತ್ತು ಪಡೆದು ಪೋಷಿಸುತ್ತಿದ್ದೇನೆ. ಔರಾಗ್ ಪಟ್ಟಣದ ಅಮರೇಶ್ವರ ಗೋ ಶಾಲೆಯಲ್ಲಿ 21 ಗೋವುಗಳನ್ನು ದತ್ತು ಪಡೆದು ಪೋಷಣೆ ಮಾಡುತ್ತಿದ್ದೇನೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
ಇದನ್ನೂ ಓದಿ: ಗೋವುಗಳನ್ನು ದತ್ತು ಪಡೆಯಲು ಸಚಿವರು, ಸಂಸದರು, ಶಾಸಕರಿಗೆ ಪ್ರಭು ಚೌಹಾಣ್ ಮನವಿ
ಇದನ್ನೂ ಓದಿ: ಗೋ ಶಾಲಾ ಆಧರಿತ ಆರ್ಥಿಕತೆ ಅಭಿವೃದ್ದಿಗೆ ಪ್ಲ್ಯಾನ್; ಭಾರತದ ಗೋ ಶಾಲೆಗಳ ಸ್ಥಿತಿಗತಿ ಪರಿಶೀಲನೆ
Published On - 8:55 pm, Sat, 29 January 22