ಡ್ರಗ್ಸ್ ತಡೆಗೆ ಸಿದ್ದರಾಮಯ್ಯ ಸರ್ಕಾರ ದಿಟ್ಟ ಹೆಜ್ಜೆ, ಡ್ರಗ್ಸ್ ಕಡಿವಾಣಕ್ಕೆ ಟಾಸ್ಕ್ ಫೋರ್ಸ್ ರಚನೆ

ಬೆಂಗಳೂರಿನಲ್ಲಿ ಇತ್ತೀಚೆಗೆ ಡ್ರಗ್ಸ್​ ಮಾಫಿಯ ಮಿತಿ ಮೀರಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಖುದ್ದು ಸರ್ಕಾರ ಪಣತೊಟ್ಟಿದೆ. ಸಂಬಂಧ ಇಂದು(ಸೆ.18) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಡ್ರಗ್ಸ್ ತಡೆಗಟ್ಟಲು 7 ಸಚಿವರನ್ನೊಳಗೊಂಡ ಒಂದು ಟಾಸ್ಕ್​ಫೋರ್ಸ್​​​​ ಸಮಿತಿ ರಚಿಸಲಾಗಿದೆ.

ಡ್ರಗ್ಸ್ ತಡೆಗೆ ಸಿದ್ದರಾಮಯ್ಯ ಸರ್ಕಾರ ದಿಟ್ಟ ಹೆಜ್ಜೆ, ಡ್ರಗ್ಸ್ ಕಡಿವಾಣಕ್ಕೆ ಟಾಸ್ಕ್ ಫೋರ್ಸ್ ರಚನೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Sep 18, 2024 | 9:23 PM

ಬೆಂಗಳೂರು, (ಸೆಪ್ಟೆಂಬರ್ 18): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡ್ರಗ್ಸ್ ತಡೆಗಟ್ಟಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಟಾಸ್ಕ್​ಫೋರ್ಸ್​​​​ ಸಮಿತಿ ರಚಿಸಿದೆ. 7 ಸಚಿವರನ್ನೊಳಗೊಂಡ ಟಾಸ್ಕ್​ಫೋರ್ಸ್ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಟಾಸ್ಕ್​ಫೋರ್ಸ್ ಸಮಿತಿ ಅಧ್ಯಕ್ಷರಾಗಿ ಗೃಹ ಸಚಿವ ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದ್ದ, ಇನ್ನುಳಿದ 6 ಸಚಿವರುಗಳನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಮೂಲಕ ಡ್ರಗ್ಸ್​​ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಗೃಹ ಸಚಿವ ಪರಮೇಶ್ವರ್ ಅವರನ್ನು ಟಾಸ್ಕ್​ಫೋರ್ಸ್ ಸಮಿತಿ ಅಧ್ಯಕ್ಷರಾನ್ನಾಗಿ ನೇಮಕ ಮಾಡಿದ್ದರೆ, ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ, ಮಧು ಬಂಗಾರಪ್ಪ, ಶರಣಪ್ರಕಾಶ್ ಪಾಟೀಲ್, ಎಂ.ಸಿ.ಸುಧಾಕರ್, ದಿನೇಶ್ ಗುಂಡೂರಾವ್ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಈ ಸಮಿತಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚನೆ, ಹೊಸ ಕಾನೂನು ಜಾರಿಗೆ ನಿರ್ಧಾರ: ಸಿದ್ದರಾಮಯ್ಯ

ತಿಂಗಳಿಗೊಮ್ಮೆ ಸಭೆ ನಡೆಸಿ ಡ್ರಗ್ಸ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸಮಿತಿ ಸದಸ್ಯರಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಡ್ರಗ್ಸ್ ತಡೆಗಟ್ಟಲು ರಾಜ್ಯ ಸರ್ಕಾರ ಈ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಆದ್ರೆ, ಇದು ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನು ಈ ಡ್ರಗ್ಸ್​​ಗೆ ಕಡಿವಾಣ ಹಾಕಲು ಸಿಎಂ ಸಿದ್ದರಾಮಯ್ಯ ಅವರು ಇಂದು (ಸೆಪ್ಟೆಂಬರ್ 18) ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿರುವ ಸಿಎಂ, ಡ್ರಗ್ಸ್​ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು ಮಾಡುತ್ತೇವೆ. ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಗಾದರೆ ಜಾಮೀನು ಸಿಗದಂತೆ ಮಾಡುತ್ತೇವೆ. ಡ್ರಗ್ಸ್​ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು‌ ಶಿಕ್ಷೆ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ