AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Bharat Jodo Yuva Sangha: ರಾಜ್ಯದಲ್ಲಿ 10 ಸಾವಿರ 'ಭಾರತ್​ ಜೋಡೋ ಯುವ ಸಂಘ'ಗಳ ಸ್ಥಾಪನೆಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಯುವ ಸಬಲೀಕರಣಕ್ಕಾಗಿ 1,010 ಕೋಟಿ ರೂಪಾಯಿ ವೆಚ್ಚದ ಈ ಬೃಹತ್ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮೂಲಕ ಡಿಸಿಎಂ ಡಾ. ಜಿ. ಪರಮೇಶ್ವರ್​​ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
ಸಿಎಂ ಡಿಕೆ ಶಿವಕುಮಾರ್​​ ಮತ್ತು ಡಿಸಿಎಂ ಡಾ. ಪರಮೇಶ್ವರ್​Image Credit source: G. Parameshwar X Account
ಪ್ರಸನ್ನ ಗಾಂವ್ಕರ್​
| Edited By: |

Updated on:Jul 13, 2026 | 8:56 PM

Share

ಮುಖ್ಯಾಂಶಗಳು

  • ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆಗೆ ಅಧಿಕೃತ ಆದೇಶ
  • ಗ್ರಾ.ಪಂ. ಮತ್ತು ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 10 ಸಾವಿರ ಸಂಘ
  • 1,010 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಯೋಜನೆ ಅನುಷ್ಠಾನ

ಬೆಂಗಳೂರು, ಜುಲೈ 13: ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆ ಸಂಬಂಧ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಮಾಡಿದ್ದು, ಈ ಬಗ್ಗೆ ತಮ್ಮ ಎಕ್ಸ್​ ಖಾತೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾಹಿತಿ ಹಂಚಿಕೊಂಡಿದ್ದಾರೆ. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 10 ಸಾವಿರ ಭಾರತ್‌ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಅಧಿಕೃತ ಆದೇಶವನ್ನು ಹೊರಡಿಸಿದ್ದೇವೆ ಎಂದವರು ತಿಳಿಸಿದ್ದಾರೆ.

ಪ್ರತಿ ಸಂಘಕ್ಕೆ ವಾರ್ಷಿಕ ತಲಾ 10 ಲಕ್ಷ ಅನುದಾನ

ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ ಅನುಷ್ಠಾನ ಮಾಡಲಾಗುವುದು. ಇದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಕಾರ ನೀಡಲಿದೆ. ಪ್ರತಿಯೊಂದು ಸಂಘದ ಒಬ್ಬ ತರಬೇತುದಾರರಿಗೆ ವಾರ್ಷಿಕ ತಲಾ ₹24,000 ಗೌರವಧನದ ಜೊತೆಗೆ ಪ್ರತಿ ಸಂಘಕ್ಕೆ ವಾರ್ಷಿಕ ತಲಾ ₹10 ಲಕ್ಷ ಅನುದಾನ ನೀಡಲಾಗುವುದು. ಭಾರತ್‌ ಜೋಡೋ ಯುವ ಸಂಘಗಳ ಮೂಲಕ ಯುವಜನರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿ, ಅವರನ್ನು ಸಬಲೀಕರಣಗೊಳಿಸಿ, ನಾಡಿನ ಸತ್ಪ್ರಜೆಗಳಾಗಿ ರೂಪಿಸುವುದು ನಮ್ಮ ಉದ್ದೇಶ ಎಂದು ಡಿಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ‘ಬೆಂಗಳೂರಿಗರಿಗೆ ಬಸ್ಸುಗಳು ಬೇಡವೇ?’; ಸರ್ಕಾರದ ವಿಳಂಬ ನೀತಿ ವಿರುದ್ಧ ಜೆಡಿಎಸ್ ಕೆಂಡಾಮಂಡಲ!

ಸರ್ಕಾರದ ಆದೇಶದಲ್ಲಿ ಏನಿದೆ?

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 6,000, ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಸರಾಸರಿ 4000 ಸೇರಿ ಒಟ್ಟು 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುವುದು. 1010 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:48 pm, Mon, 13 July 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More