AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ವೈಕಲ್ ಕ್ಯಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ: 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ ಅಭಿಯಾನ ಪ್ರಾರಂಭ

Free HPV Vaccines: ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಆರೋಗ್ಯ ಇಲಾಖೆಯು 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ ನೀಡುವ ಮಹತ್ವದ ಅಭಿಯಾನ ಆರಂಭಿಸಿದೆ. ಖಾಸಗಿಯಲ್ಲಿ 3 ರಿಂದ 5 ಸಾವಿರ ರೂ. ಬೆಲೆಯಿದ್ದ ಈ ಲಸಿಕೆಗೆ ಈಗ ಶೇ. 50 ರಷ್ಟು ಬೇಡಿಕೆ ಹೆಚ್ಚಾಗಿದ್ದು, ಸರ್ಕಾರದ ಈ ಉಚಿತ ಕ್ರಮಕ್ಕೆ ಸಾರ್ವಜನಿಕರಿಂದ ಭಾರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸರ್ವೈಕಲ್ ಕ್ಯಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ: 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ ಅಭಿಯಾನ ಪ್ರಾರಂಭ
ಸಾಂದರ್ಭಿಕ ಚಿತ್ರ Image Credit source: gettyimages.com
ವಿನಯ್​ ಕಾಶಪ್ಪನವರ್​
| Edited By: |

Updated on:Jul 15, 2026 | 9:24 AM

Share

ಮುಖ್ಯಾಂಶಗಳು

  • 14 ವರ್ಷದ ಹೆಣ್ಣುಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಉಚಿತ HPV ಲಸಿಕೆ ಅಭಿಯಾನ
  • ಗರ್ಭಕಂಠ ಕ್ಯಾನ್ಸರ್ ಲಸಿಕೆ ಬೇಡಿಕೆಯಲ್ಲಿ ಶೇಕಡಾ 50 ರಷ್ಟು ಭಾರಿ ಹೆಚ್ಚಳ
  • ಮಾಡರ್ನ್ ಜೀವನಶೈಲಿ ಹಾಗೂ ಧೂಮಪಾನದಿಂದ ಮಹಿಳೆಯರಲ್ಲಿ ಹೆಚ್ಚುತ್ತಿದೆ ಗರ್ಭಕಂಠ ಕ್ಯಾನ್ಸರ್

ಬೆಂಗಳೂರು, ಜುಲೈ 15: ಕೊರೊನಾ ಜಾಗತಿಕ ಹಾವಳಿಯ ನಡುವೆ ಕೊಂಚ ಮರೆಯಾಗಿದ್ದ ಮಹಾಮಾರಿ ಕ್ಯಾನ್ಸರ್, ಈಗ ಮತ್ತೆ ಕರ್ನಾಟಕ ರಾಜ್ಯದಲ್ಲಿ ಮಹಿಳೆಯರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸುತ್ತಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವತಿಯರಿಂದ ಹಿಡಿದು ಮಧ್ಯವಯಸ್ಕ ಮಹಿಳೆಯರವರೆಗೆ ತೀವ್ರವಾಗಿ ಕಾಡುತ್ತಿರುವ ‘ಗರ್ಭಕಂಠ ಕ್ಯಾನ್ಸರ್’ (Cervical Cancer) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಈಗ ಮಹತ್ವದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತವಾಗಿ ಎಚ್‌ಪಿವಿ (HPV) ಲಸಿಕೆ ನೀಡುವ ಬೃಹತ್ ಅಭಿಯಾನಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.

ಕರ್ನಾಟಕದಲ್ಲಿ 2026ರಲ್ಲಿ ಲಸಿಕೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಆಗಮನ

ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಲಸಿಕೆಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಸೃಷ್ಟಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಲಸಿಕೆ ಪಡೆಯಲು ಮುಂದೆ ಬರುವ ಮಹಿಳೆಯರ ಸಂಖ್ಯೆಯಲ್ಲಿ ಶೇ 50ರಷ್ಟು ಹೆಚ್ಚಳ ಕಂಡುಬಂದಿದೆ. ಈ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಈ ಲಸಿಕೆಗೆ 3 ರಿಂದ 5 ಸಾವಿರ ರೂಪಾಯಿಗಳವರೆಗೆ ದುಬಾರಿ ವೆಚ್ಚ ತಗಲುತ್ತಿತ್ತು.

ಇದರಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಹೆಣ್ಣುಮಕ್ಕಳಿಗೆ ಲಸಿಕೆ ಲಭ್ಯವಾಗದೆ, ಹಲವರು ಪ್ರಾಣ ಕಳೆದುಕೊಳ್ಳುವ ಭೀಕರ ಪರಿಸ್ಥಿತಿ ಇತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಸ್ತ್ರೀರೋಗ ತಜ್ಞರ ಬೇಡಿಕೆಗೆ ಸ್ಪಂದಿಸಿರುವ ಸರ್ಕಾರ, ಉಚಿತ ವ್ಯಾಕ್ಸಿನ್ ಡ್ರೈವ್ ಆರಂಭಿಸಿದ್ದು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಆರೋಗ್ಯ ಇಲಾಖೆಯ ಆಯುಕ್ತರಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಇದನ್ನೂ ಓದಿ Cervical cancer; ಗರ್ಭಕಂಠದ ಕ್ಯಾನ್ಸರ್ ಲಕ್ಷಣ, ಕಾರಣ, ಪರಿಣಾಮ ಮತ್ತು ನಿರ್ವಹಣೆ ಮಾಹಿತಿ ಇಲ್ಲಿದೆ

ಗರ್ಭಕಂಠ ಕ್ಯಾನ್ಸರ್‌ಗೆ ಪ್ರಮುಖ ಕಾರಣಗಳು

  • ಮಹಿಳೆಯರಲ್ಲಿ ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿರುವ ಧೂಮಪಾನ ಹಾಗೂ ಮದ್ಯಪಾನದ ಹವ್ಯಾಸ.
  • ಬದಲಾದ ಪಾಶ್ಚಾತ್ಯ ಹಾಗೂ ಮಾಡರ್ನ್ ಜೀವನಶೈಲಿ.
  • ಅತಿಯಾದ ಲೈಂಗಿಕತೆ ಮತ್ತು ಗರ್ಭನಿರೋಧಕಗಳ ಅಸಮರ್ಪಕ ಬಳಕೆ.
  • ಅತಿ ಬೇಗನೇ ಋತುಸ್ರಾವವಾಗುವುದು ಅಥವಾ ತಡವಾಗಿ ಋತುಬಂಧ (Menopause) ತಲುಪುವುದು.
  • ದೇಹದಲ್ಲಿ ಉಂಟಾಗುವ ಹಾರ್ಮೋನು ಬದಲಾವಣೆಗಳ ಚಿಕಿತ್ಸೆಗಳು ಹಾಗೂ ಸಂತಾನೋತ್ಪತ್ತಿಯ ನಾನಾ ಅಂಶಗಳು.

ಈ ಮಾರಕ ರೋಗದಿಂದ ರಕ್ಷಣೆ ಪಡೆಯಲು ಲಸಿಕೆಯೊಂದೇ ಸೂಕ್ತ ಮಾರ್ಗವಾಗಿದ್ದು, ಅರ್ಹ ಹೆಣ್ಣುಮಕ್ಕಳ ಪೋಷಕರು ಸರ್ಕಾರದ ಈ ಉಚಿತ ಲಸಿಕಾ ಅಭಿಯಾನದ ಸದುಪಯೋಗ ಪಡೆದುಕೊಂಡು ಎಚ್ಚರಿಕೆ ವಹಿಸಬೇಕಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 am, Wed, 15 July 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?