AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಐಪಿಎಸ್ ವಿಕಾಸ್ ಕುಮಾರ್ ಅಮಾನತು ರದ್ದು ಪ್ರಶ್ನಿಸಿ ಹೈಕೋರ್ಟ್ ಮೊರೆಹೋದ ಸರ್ಕಾರ

ಆರ್​ಸಿಬಿ ವಿಜಯೋತ್ಸವದ ಸಂದರ್ಭ ಬೆಂಗಳೂರಿನಲ್ಲಿ ಸಂಭವಿಸಿದ್ದ ಕಾಲ್ತುಳಿತ ವಿಚಾರವಾಗಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡುವಣ ಕಾನೂನು ಸಮರ ಮುಂದುವರಿದಿದೆ. ವಿಕಾಸ್ ಕುಮಾರ್ ಅಮಾನತು ಆದೇಶವನ್ನು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ನೀಡಿರುವ ತೀರ್ಪನ್ನು ಪ್ರಶ್ನಿಸಿ ಇದೀಗ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ ಮೆಟ್ಟಿಲೇರಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಐಪಿಎಸ್ ವಿಕಾಸ್ ಕುಮಾರ್ ಅಮಾನತು ರದ್ದು ಪ್ರಶ್ನಿಸಿ ಹೈಕೋರ್ಟ್ ಮೊರೆಹೋದ ಸರ್ಕಾರ
ಐಪಿಎಸ್ ವಿಕಾಸ್ ಕುಮಾರ್ ಅಮಾನತು ರದ್ದು ಪ್ರಶ್ನಿಸಿ ಹೈಕೋರ್ಟ್ ಮೊರೆಹೋದ ಸರ್ಕಾರ
Ramesha M
| Updated By: Ganapathi Sharma|

Updated on: Jul 02, 2025 | 11:15 AM

Share

ಬೆಂಗಳೂರು, ಜುಲೈ 2: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ (Chinnaswamy Stampede) ಪ್ರಕರಣ ಸಂಬಂಧ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಕ್ರಮದ ವಿರುದ್ಧ ಕರ್ನಾಟಕ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ತುರ್ತು ವಿಚಾರಣೆ ಕೋರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ಅರ್ಜಿ ಸಲ್ಲಿಸಿದ್ದಾರೆ.

ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ: ಹೈಕೋರ್ಟ್ ಪ್ರಶ್ನೆ

ಕರ್ನಾಟಕ ಸರ್ಕಾರದ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಆದೇಶದ ಕಾರಣ ಅಧಿಕಾರ ವಹಿಸಿಕೊಳ್ಳಲು ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಕೊನೆಯದಾಗಿ, ಬುಧವಾರ ವಿಚಾರಣೆ ನಡೆಸಲಾಗುವುದು ಎಂದು ವಿಭಾಗೀಯ ಪೀಠ ತಿಳಿಸಿತು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತದ ನಂತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದ ಸರ್ಕಾರ, ಆಗಿನ ಪೊಲೀಸ್ ಆಯಕ್ತ ಬಿ ದಯಾನಂದ್, ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಸೇರಿದಂತೆ ಹಲವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದರ ವಿರುದ್ಧ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು.

ಇದನ್ನೂ ಓದಿ
Image
ಕಾನೂನು ಸಚಿವರ ಊರಲ್ಲೇ ಕಿರಾಣಿ ಅಂಗಡಿ, ಹೋಟೆಲ್, ಮನೆಗಳಲ್ಲೂ ಮದ್ಯ ಮಾರಾಟ!
Image
ಮೆಟ್ರೋ ಯೆಲ್ಲೋ ಲೈನ್ ವಿಳಂಬದಿಂದ ಬಿಎಂಟಿಸಿಗೆ ಲಾಭ!
Image
ಬೆಂಗಳೂರು: ದುಪ್ಪಟ್ಟು ದರ ವಸೂಲಿ ಮಾಡಿದ್ದ 56 ಆಟೋ ಸೀಜ್, 183 ಕೇಸ್
Image
ಬೆಂಗಳೂರು ಕಾಲ್ತುಳಿತ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದ ಸಿಎಟಿ

ವಿಕಾಸ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೋರಿತ್ತು. ನಂತರ, ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತ್ತು. ಮಂಗಳವಾರ ತೀರ್ಪು ಪ್ರಕಟಿಸಿ, ಕರ್ನಾಟಕ ಸರ್ಕರದ ನಿರ್ಧಾರವನ್ನು ರದ್ದುಪಡಿಸಿ ಆದೇಶ ನೀಡಿತ್ತು. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿತ್ತು. ಹೀಗಾಗಿ ಇದೀಗ ಸಿಎಟಿ ಆದೇಶದ ವಿರುದ್ಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಜೂನ್ 3 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಯ ಐಪಿಎಲ್ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆ ಸಂದರ್ಭ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಟ್ಟು, ಸುಮಾರು 40 ಮಂದಿ ಗಾಯಗೊಂಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ