Lata Mangeshkar: ಲತಾ ಮಂಗೇಶ್ಕರ್ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರದಿಂದ 2 ದಿನಗಳ ಕಾಲ ಶೋಕಾಚರಣೆ

ದೇಶದಲ್ಲಿ ಕೂಡ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದ್ದು, ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಾಡಲಿದೆ. ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ತಿಳಿಸಲಾಗಿದೆ.

Lata Mangeshkar: ಲತಾ ಮಂಗೇಶ್ಕರ್ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರದಿಂದ 2 ದಿನಗಳ ಕಾಲ ಶೋಕಾಚರಣೆ
ಲತಾ ಮಂಗೇಶ್ಕರ್
Follow us
| Updated By: ganapathi bhat

Updated on:Feb 06, 2022 | 3:55 PM

ಬೆಂಗಳೂರು: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನ ಹಿನ್ನೆಲೆ ಕರ್ನಾಟಕ ರಾಜ್ಯ ಸರ್ಕಾರದಿಂದ 2 ದಿನಗಳ ಕಾಲ ಶೋಕಾಚರಣೆ ಮಾಡಲು ನಿರ್ಧರಿಸಲಾಗಿದೆ. ಈ ವೇಳೆ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳಿರುವುದಿಲ್ಲ. ಲತಾ ಮಂಗೇಶ್ಕರ್ ಅವರಿಗೆ ಗೌರವಪೂರ್ವಕವಾಗಿ ಸರ್ಕಾರಿ ಕಟ್ಟಡದ ಮೇಲೆ ರಾಷ್ಟ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲು ಸೂಚನೆ ನೀಡಲಾಗಿದೆ. ದೇಶದಲ್ಲಿ ಕೂಡ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದ್ದು, ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಾಡಲಿದೆ. ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ತಿಳಿಸಲಾಗಿದೆ.

ಭಾರತ ರತ್ನ ಲತಾ ಮಂಗೇಶ್ಕರ್ (Lata Mangeshkar) ಇಂದು ಮುಂಜಾನೆ 8.12ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಅವರು ನಮ್ಮನ್ನಗಲಿದ್ದಾರೆ ಎಂದು ಅವರ ಆರೋಗ್ಯದ ಉಸ್ತುವಾರಿ ಹೊತ್ತಿದ್ದ ಡಾ.ಪ್ರತಿತ್ ಸಮ್ದಾನಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಲತಾ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar)​ ಅವರು ನಿಧನ ಹೊಂದಿರುವ ವಿಚಾರ ಇಡೀ ದೇಶಕ್ಕೆ ದುಃಖ ತಂದಿದೆ. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ನಿಧನ ಹೊಂದಿದ್ದಾರೆ. ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸ ‘ಪ್ರಭು ಕುಂಜ್​’ಗೆ ಕೊಂಡೊಯ್ಯಲಾಗಿದೆ. ಇಂದು (ಫೆಬ್ರವರಿ 6) ಸಂಜೆ 6.30 ಕ್ಕೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಅಂತ್ಯಸಂಸ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕೂಡ ಭಾಗವಹಿಸಲಿದ್ದಾರೆ.

‘ಲತಾ ಅವರು ಸ್ವರ್ಗಕ್ಕೆ ತೆರಳಿದ್ದಾರೆ. ಅವರ ಜತೆ ಒಳ್ಳೆಯ ಬಾಂಧವ್ಯ ಇತ್ತು ಎಂದು ನನ್ನಂತ ಹಲವು ಜನರು ಹೆಮ್ಮೆಯಿಂದ ಹೇಳಿಕೊಳ್ಳಬಹುದು. ನೀವು ಎಲ್ಲೇ ತೆರಳಿದರು ಅವರ ಪ್ರೀತಿಪಾತ್ರರು ಸಿಗುತ್ತಾರೆ. ಅವರ ಮಧುರ ಕಂಠ ನಮ್ಮ ಜತೆ ಸದಾ ಇರುತ್ತದೆ. ನನ್ನ ಭಾರ ಹೃದಯದಿಂದ ಅವರಿಗೆ ಅಂತಿಮ ನಮನ ಸೂಚಿಸುತ್ತೇನೆ’ ಎಂದು ಮೋದಿ ಹೇಳಿದ್ದಾರೆ. ಇಂದು ಮೋದಿ ಕೂಡ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಿದ್ದು, ಈ ಮೂಲಕ ಖ್ಯಾತ ಗಾಯಕಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಲತಾ ಮಂಗೇಶ್ಕರ್ ಜತೆ ಬಾಲಿವುಡ್​ ತಾರೆಯರ ಸವಿ ನೆನಪು; ಆ ಕ್ಷಣಗಳನ್ನು ನೆನಪಿಸಿದ ಫೋಟೋಗಳು

ಇದನ್ನೂ ಓದಿ: ‘ಲತಾ ಮಂಗೇಶ್ಕರ್​ ಅವರ ಆ ಹಾಡು ಕೇಳಿದ್ರೆ ಈಗಲೂ ಕಣ್ಣೀರು ಬರುತ್ತೆ’: ಬಸವರಾಜ ಬೊಮ್ಮಾಯಿ

Published On - 3:48 pm, Sun, 6 February 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ