ವಾರಣಾಸಿಗೆ ಕರ್ನಾಟಕ ರೇಷ್ಮೆ ಮಾರುಕಟ್ಟೆ ವ್ಯಾಪ್ತಿ ವಿಸ್ತರಣೆ; ಉತ್ತರ ಪ್ರದೇಶ ಸರ್ಕಾರದ ಜತೆ ಕರ್ನಾಟಕ ಸರ್ಕಾರ ಮಾತುಕತೆ

ವಾರಣಾಸಿಗೆ ಕರ್ನಾಟಕ ರೇಷ್ಮೆ ಮಾರುಕಟ್ಟೆ ವ್ಯಾಪ್ತಿ ವಿಸ್ತರಣೆ; ಉತ್ತರ ಪ್ರದೇಶ ಸರ್ಕಾರದ ಜತೆ ಕರ್ನಾಟಕ ಸರ್ಕಾರ ಮಾತುಕತೆ
ರೇಷ್ಮೆ ಮಾರುಕಟ್ಟೆ (ಸಾಂದರ್ಭಿಕ ಚಿತ್ರ)

ಸಚಿವರ ನೇತೃತ್ವದ ನಿಯೋಗದಲ್ಲಿ ಕೆಎಸ್‌ಎಂಬಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಸೇರಿದಂತೆ ರೇಷ್ಮೆ ಇಲಾಖೆಯ ಹಿರಿಯ ಅಧಿಕಾರಿಗಳು ತೆರಳಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

TV9kannada Web Team

| Edited By: ganapathi bhat

Nov 16, 2021 | 5:45 PM

ಬೆಂಗಳೂರು: ವಾರಣಾಸಿಗೆ ಕರ್ನಾಟಕ ರೇಷ್ಮೆ ಮಾರುಕಟ್ಟೆ ವ್ಯಾಪ್ತಿ ವಿಸ್ತರಣೆ ಯೋಜನೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರದ ಜೊತೆ ಕರ್ನಾಟಕ ರಾಜ್ಯ ಸರ್ಕಾರ ಚರ್ಚಿಸಲು ಮುಂದಾಗಿದೆ. ನವೆಂಬರ್ 18 ರಂದು ಸಚಿವ ನಾರಾಯಣ ಗೌಡ ನೇತೃತ್ವದ ನಿಯೋಗ ವಾರಣಾಸಿಗೆ ಭೇಟಿ ನೀಡಲಿದೆ. ಉತ್ತರ ಪ್ರದೇಶದ ರೇಷ್ಮೆ ಸಚಿವ ಸಿದ್ಧಾರ್ಥ ನಾಥ್ ಸಿಂಗ್ ಭೇಟಿ ಮಾಡಲು ನಿರ್ಧಾರ ಮಾಡಲಾಗಿದೆ.

ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಶಾಖೆ ತೆರೆಯುವ ಕುರಿತು ಹಾಗೂ ಕರ್ನಾಟಕದಿಂದ ವಾರಣಾಸಿಗೆ ರೇಷ್ಮೆ ಕಳುಹಿಸುವ ಸಂಬಂಧ ರೇಷ್ಮೆ ಸಚಿವ ನಾರಾಯಣ ಗೌಡ ಸಭೆ ನಡೆಸಲಿದ್ದಾರೆ. ವಾರಣಾಸಿಗೆ ಸಂಪೂರ್ಣ ರೇಷ್ಮೆಯನ್ನು ಕರ್ನಾಟಕದಿಂದಲೇ ಪೂರೈಸುವ ಸಂಬಂಧ ಉತ್ತರ ಪ್ರದೇಶ ರೇಷ್ಮೆ ಸಚಿವರ ಜೊತೆ ಅವರು ಚರ್ಚೆ ನಡೆಸಲಿದ್ದಾರೆ. ಸಚಿವರ ನೇತೃತ್ವದ ನಿಯೋಗದಲ್ಲಿ ಕೆಎಸ್‌ಎಂಬಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಸೇರಿದಂತೆ ರೇಷ್ಮೆ ಇಲಾಖೆಯ ಹಿರಿಯ ಅಧಿಕಾರಿಗಳು ತೆರಳಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ರಾಜ್ಯದ ಮಿನಿ ವಿಧಾನಸೌಧಗಳ ಹೆಸರು ಬದಲಾವಣೆ ಕರ್ನಾಟಕ ರಾಜ್ಯದ ಮಿನಿ ವಿಧಾನಸೌಧಗಳ ಹೆಸರು ಬದಲಾವಣೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ತಾಲೂಕಿನಲ್ಲಿ ಇರುವ ಮಿನಿ ವಿಧಾನಸೌಧಗಳ ಹೆಸರು ತಾಲೂಕು ಆಡಳಿತ ಸೌಧ ಎಂದು ಬದಲಾವಣೆ ಮಾಡಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Reshamandi: ಭಾರತದ ರೇಷ್ಮೆಯನ್ನು ಚೀನಾ ಜತೆಗೆ ಸ್ಪರ್ಧಿಸಲು ಸಜ್ಜುಗೊಳಿಸುವುದೇ ಅಗ್ರಿಟೆಕ್ ಸ್ಟಾರ್ಟ್​ಅಪ್ ರೇಶಮಂಡಿ ಗುರಿ

ಇದನ್ನೂ ಓದಿ: ಬಿರು ಬಿಸಿಲಿನ ವಿಜಯಪುರದಲ್ಲಿ ರೇಷ್ಮೆ ಬೆಳೆ ಬೆಳೆದ ರೈತ

Follow us on

Related Stories

Most Read Stories

Click on your DTH Provider to Add TV9 Kannada