AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ನೀಡಲು 418.72 ಕೋಟಿ ರೂ. ಅನುದಾನ ಬಿಡುಗಡೆ

ಎಸ್‌ಡಿಆರ್‌ಎಫ್ ನಿಧಿಯಡಿ ಅನುದಾನ ಬಿಡುಗಡೆ ಮಾಡುವಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಅದರಂತೆ, 418.72 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ನೀಡಲು 418.72 ಕೋಟಿ ರೂ. ಅನುದಾನ ಬಿಡುಗಡೆ
ಮಳೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 23, 2021 | 7:55 PM

Share

ಬೆಂಗಳೂರು: ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ನೀಡಲು ಅನುದಾನ ಬಿಡುಗಡೆ ಮಾಡಲಾಗಿದೆ. ಮನೆ ಹಾನಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಆದೇಶ ನೀಡಿದೆ. ಎಸ್‌ಡಿಆರ್‌ಎಫ್ ನಿಧಿಯಡಿ ಅನುದಾನ ಬಿಡುಗಡೆ ಮಾಡುವಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಅದರಂತೆ, 418.72 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

ಕಳೆದ ಕೆಲವು ದಿನಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿವಿಧ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ, ಬೆಳೆ ಹಾನಿ ಉಂಟಾಗಿದೆ. ಅದರಂತೆ, ರಾಯಚೂರು ಜಿಲ್ಲೆಯಲ್ಲಿ ಕೂಡ ಬಹಳಷ್ಟು ಪ್ರಮಾಣದ ಹಾನಿ ಸಂಭವಿಸಿದೆ. ಜಿಲ್ಲೆಯ ಬೆಳೆ ಹಾನಿ ಅಂಕಿ- ಅಂಶವನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಅದರಂತೆ, ರಾಯಚೂರು ಜಿಲ್ಲೆಯಲ್ಲಿ 40,534 ಹೆಕ್ಟೇರ್‌ನಷ್ಟು ಬೆಳೆ ನಾಶ ಆಗಿದೆ ಎಂದು ತಿಳಿದುಬಂದಿದೆ.

ಅತಿಹೆಚ್ಚು 34,496 ಹೆಕ್ಟೇರ್‌ನಲ್ಲಿದ್ದ ಭತ್ತದ ಬೆಳೆ ನಾಶವಾಗಿದೆ. ಸಿಂಧನೂರು ತಾಲೂಕಿನಲ್ಲೇ 24,108 ಹೆಕ್ಟೇರ್‌ನಷ್ಟು ಭತ್ತ ನಾಶ ಆಗಿದೆ. 23 ಹೆಕ್ಟೇರ್​ ಜೋಳ, 3,742 ಹೆಕ್ಟೇರ್ ತೊಗರಿ ಬೆಳೆ, 7 ಹೆಕ್ಟೇರ್ ಶೇಂಗಾ, 1,860 ಹೆಕ್ಟೇರ್‌ನಲ್ಲಿದ್ದ ಕಡಲೆ, 15 ಹೆಕ್ಟೇರ್ ಸೂರ್ಯಕಾಂತಿ, 391 ಹೆಕ್ಟೇರ್ ಹತ್ತಿ ಬೆಳೆ ನಾಶ ಆಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಸಾವಿರಾರು ಹೆಕ್ಟೇರ್ ಬೆಳೆ ನಾಶದಿಂದ ನೂರಾರು ಕೋಟಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ; ದುಪ್ಪಟ್ಟಾದ ತರಕಾರಿ ಬೆಲೆ, ಪ್ಯಾಕೆಟ್ ಒಂದರಲ್ಲಿ 2 ಟೊಮೆಟೋ ಮಾರಾಟ!

ಇದನ್ನೂ ಓದಿ: ಮಳೆ ಹಾನಿ ಕುರಿತು ಅಧಿಕಾರಿಗಳ ಜತೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ; ಮುಖ್ಯಾಂಶಗಳು ಇಲ್ಲಿದೆ

Published On - 7:50 pm, Tue, 23 November 21

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ