AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಪಾದಯಾತ್ರೆಗೆ ಕರ್ನಾಟಕ ಸರ್ಕಾರ ನಿರ್ಬಂಧ; ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ

Mekedatu Padayatra: ಕಾಂಗ್ರೆಸ್ ಪಾದಯಾತ್ರೆಗೆ ಕರ್ನಾಟಕ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಮೇಕೆದಾಟು ಪಾದಯಾತ್ರೆಗೆ ಕರ್ನಾಟಕ ಸರ್ಕಾರ ನಿರ್ಬಂಧ; ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ
ಡಿಕೆ ಶಿವಕುಮಾರ್, ಬಸವರಾಜ್ ಬೊಮ್ಮಾಯಿ (ಸಾಂದರ್ಭಿಕ ಚಿತ್ರ)
TV9 Web
| Updated By: ganapathi bhat|

Updated on:Jan 12, 2022 | 11:12 PM

Share

ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆಗೆ (Mekedatu Padayatra) ಕರ್ನಾಟಕ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ (Karnataka Govt) ಸಿ.ಎಸ್‌. ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಪಾದಯಾತ್ರೆಯ ವಾಹನ, ಜನರ ಸಂಚಾರ ನಿಷೇಧಕ್ಕೆ ಆದೇಶ ಹೊರಡಿಸಲಾಗಿದೆ. ರಾಮನಗರ ಜಿಲ್ಲಾಧಿಕಾರಿ, ಎಸ್​ಪಿ ಮೂಲಕ ಪಾದಯಾತ್ರೆಗೆ ಬ್ರೇಕ್ ಹಾಕಲು ತೀರ್ಮಾನಿಸಲಾಗಿದೆ. ಸರ್ಕಾರದ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಹೈಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಬೇಕಿರುವ ಹಿನ್ನೆಲೆ, ಮತ್ತೊಂದು ‌ಸೂಚನೆ ನೀಡುವ ಸಲುವಾಗಿ ನಿಷೇಧ ಹೇರಲಾಗಿದೆ.

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋರ್ಟ್ ಆಕ್ಷೇಪ ಹಿನ್ನೆಲೆ ಪಾದಯಾತ್ರೆ ತಡೆಯುತ್ತೇವೆಂದು ಕೋರ್ಟ್​​ಗೆ ಅಫಿಡವಿಟ್ ಸಲ್ಲಿಸಲು ಕರ್ನಾಟಕ ಸರ್ಕಾರ ನಿರ್ಧಾರ ಮಾಡಿದೆ. ಪಾದಯಾತ್ರೆ ನಡೆಸದಂತೆ ಈವರೆಗೆ ನೀಡಿದ ನೋಟಿಸ್​ಗಳು, ಸೂಚನೆಗಳು, ಮೌಖಿಕ ಮನವಿ, ದಾಖಲಿಸಿರುವ FIR ಸೇರಿ ಎಲ್ಲ ವಿವರ ಒಳಗೊಂಡ ಅಫಿಡವಿಟ್​ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಸಚಿವರು, ಅಧಿಕಾರಿಗಳ ಜತೆ ಚರ್ಚೆ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋರ್ಟ್ ಆಕ್ಷೇಪ ಹಿನ್ನೆಲೆ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ. ದೂರವಾಣಿ ಮೂಲಕ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ‌, ಸಚಿವರಾದ ಆರಗ ಜ್ಞಾನೇಂದ್ರ, ಜೆ.ಸಿ.ಮಾಧುಸ್ವಾಮಿ, ಆರ್‌.ಅಶೋಕ್, ಡಾ.ಸುಧಾಕರ್, ಸಿಎಸ್ ರವಿಕುಮಾರ್, ಡಿಜಿ & ಐಜಿಪಿ ಸೂದ್, ಎಜಿ ನಾವದಗಿ ಜತೆ ಸಿಎಂ ಚರ್ಚೆ ಮಾಡಿದ್ದಾರೆ. ಸರ್ಕಾರದ ಮುಂದಿನ ನಿಲುವಿನ ಬಗ್ಗೆ ಬೊಮ್ಮಾಯಿ ಚರ್ಚಿಸಿದ್ದು ಸಾಂಕ್ರಾಮಿಕ ರೋಗಗಳ ಕಾಯ್ದೆಯನ್ವಯ ಕ್ರಮದ ಬಗ್ಗೆ ಮಾತುಕತೆ ನಡೆಸಲಾಗಿದೆ. ಕ್ರಮಕೈಗೊಳ್ಳುವ ವಿಚಾರವಾಗಿ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.

ಪಾದಯಾತ್ರೆ ಗುರುವಾರ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸಾಗುವ ಹಿನ್ನೆಲೆ; ಸಂಚಾರ ಸ್ಥಗಿತಗೊಳಿಸದಿರಲು ನಿರ್ಧಾರ

ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್​ ಪಾದಯಾತ್ರೆ ನಾಳೆ (ಜನವರಿ 13) ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸಾಗುವ ಹಿನ್ನೆಲೆ ಪಾದಯಾತ್ರೆ ವೇಳೆ ಸಂಚಾರ ಸ್ಥಗಿತಗೊಳಿಸದಿರಲು ನಿರ್ಧಾರ ಕೈಗೊಳ್ಳಲಾಗಿದೆ. ವಾಹನ ಸಂಚಾರ ಸ್ಥಗಿತಗೊಳಿಸದಿರಲು ಸರ್ಕಾರ ನಿರ್ಧಾರ ಮಾಡಿದೆ. ಎಂದಿನಂತೆ ಸಂಚಾರ ಇರುವಂತೆ ನೋಡಿಕೊಳ್ಳಲು ಸೂಚನೆ ಕೊಡಲಾಗಿದೆ. ರಾಮನಗರ ಪೊಲೀಸ್ ಇಲಾಖೆಗೆ ಸರ್ಕಾರದಿಂದ ಸೂಚನೆ ಕೊಡಲಾಗಿದೆ.

ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಶಾಲೆ ಬಂದ್​ಗೆ ಚರ್ಚೆ

ಪಾದಯಾತ್ರೆಯ ವೇಳೆ ಡಿ.ಕೆ. ಶಿವಕುಮಾರ್​ಗೆ ಸನ್ಮಾನ ಹಾಗೂ ಜೈಕಾರ, ಶಾಲಾ ಮಕ್ಕಳ ಜತೆ ಡಿಕೆಶಿ ಫೋಟೋ ತೆಗೆಸಿಕೊಂಡ ಹಿನ್ನೆಲೆ ಪಾದಯಾತ್ರೆ ಮುಗಿಯುವವರೆಗೂ ಶಾಲೆ ಬಂದ್​ಗೆ ಮನವಿ ಮಾಡಲಾಗಿದೆ. ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಶಾಲೆ ಬಂದ್​ಗೆ ಚರ್ಚೆ ವೇಳೆ ಸಿಎಂ ಬೊಮ್ಮಾಯಿಗೆ ಹಿರಿಯ ಸಚಿವರು ಮನವಿ ಮಾಡಿದ್ದಾರೆ. ದೂರವಾಣಿ ಮೂಲಕ ಚರ್ಚೆ ವೇಳೆ ಸಿಎಂಗೆ ಸಚಿವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪಾದಯಾತ್ರೆ ತಡೆಯುತ್ತೇವೆಂದು ಕೋರ್ಟ್​​ಗೆ ಅಫಿಡವಿಟ್ ಸಲ್ಲಿಸಲು ಸರ್ಕಾರ ನಿರ್ಧಾರ; ಕೋರ್ಟ್ ಆಕ್ಷೇಪ ಹಿನ್ನೆಲೆ ಕ್ರಮ

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ವಿರುದ್ಧ ಹೈಕೋರ್ಟ್​ಗೆ ಪಿಐಎಲ್! ತುರ್ತು ವಿಚಾರಣೆಗೆ ಮನವಿ

Published On - 8:48 pm, Wed, 12 January 22