ದೇಗುಲಗಳಲ್ಲಿ ಗೋಪೂಜೆ ನೆರವೇರಿಸಲು ಅಧಿಕಾರಿಗಳ ನಿಯೋಜನೆ

ಆಯಾ ಜಿಲ್ಲೆಗಳಲ್ಲಿ ಪೂಜೆ ನೆರವೇರುವಂತೆ ನೋಡಿಕೊಳ್ಳುವುದು ಇವರ ಜವಾಬ್ದಾರಿಯಾಗಿರುತ್ತದೆ.

ದೇಗುಲಗಳಲ್ಲಿ ಗೋಪೂಜೆ ನೆರವೇರಿಸಲು ಅಧಿಕಾರಿಗಳ ನಿಯೋಜನೆ
ಗೋಪೂಜೆ ಮಾಡಿದ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 03, 2021 | 8:29 PM

ಬೆಂಗಳೂರು: ದೀಪಾವಳಿ ಪ್ರಯುಕ್ತ ರಾಜ್ಯದ ಎಲ್ಲ ದೇಗುಲಗಳಲ್ಲಿ ಗೋಪೂಜೆ ನಡೆಸಲು ಸರ್ಕಾರ ಆದೇಶಿಸಿದೆ. ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆಯಾ ಜಿಲ್ಲೆಗಳಲ್ಲಿ ಪೂಜೆ ನೆರವೇರುವಂತೆ ನೋಡಿಕೊಳ್ಳುವುದು ಇವರ ಜವಾಬ್ದಾರಿಯಾಗಿರುತ್ತದೆ. ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ದೀಪಾವಳಿ ಹಬ್ಬದಂದು ಗೋಪೂಜೆ ಮಾಡುವಂತೆ ದೇಗುಲಗಳಿಗೆ ಕರ್ನಾಟಕ ಸರ್ಕಾರ ಆದೇಶ ನೀಡಿದೆ. ದೇಗುಲಗಳಲ್ಲಿ ಗೋಪೂಜೆ ಮಾಡಲು ಸರ್ಕಾರದ ಆದೇಶಿಸಿದೆ. ನವೆಂಬರ್ 5ರ ಬಲಿಪಾಡ್ಯಮಿಯಂದು ಪೂಜೆ ಸಲ್ಲಿಸಲು ಆದೇಶ ನೀಡಲಾಗಿದೆ. ಸಂಜೆ 5.30 ರಿಂದ 6.30ರ ವೇಳೆಯಲ್ಲಿ ಪೂಜೆಗೆ ಸೂಚನೆ ಕೊಡಲಾಗಿದೆ.

ಬಲಿಪಾಡ್ಯಮಿ ದಿನದಂದು ಇಲಾಖೆಯ ದೇವಾಲಯಗಳಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಲು ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಕೊಡಲಾಗಿದೆ. ಬಲಿಪಾಡ್ಯಮಿ ದಿನ ಸಂಜೆ 5.30 ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯದಲ್ಲಿ ಅರಿಶಿಣ, ಕುಂಕುಮ, ಹೂವುಗಳಿಂದ ಪೂಜಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸಿಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ದೀಪಾವಳಿ ಹಬ್ಬದಂದು ದೇಗುಲಗಳಲ್ಲಿ ಗೋಪೂಜೆ ಮಾಡುವಂತೆ ಕರ್ನಾಟಕ ಸರ್ಕಾರದ ಆದೇಶ
ಇದನ್ನೂ ಓದಿ: Deepavali 2021: ಕಾಶ್ಮೀರದ ಗಡಿಯಲ್ಲಿ ಸೈನಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ