ಬೆಂಗಳೂರು: ಹೊಸ ಪಡಿತರ ಚೀಟಿ ಮಂಜೂರು ಮಾಡದಂತೆ ಸರ್ಕಾರ ಆದೇಶ; ಸದ್ಯಕ್ಕಿಲ್ಲ ಅರ್ಜಿ ಸಲ್ಲಿಕೆ

ಶೀಘ್ರದಲ್ಲೇ ಹೊಸ ರೇಷನ್‌ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಆಹಾರ ಸಚಿವ ಕೆಎಚ್​ ಮುನಿಯಪ್ಪ ಅವರು ಹೇಳಿದ್ದರು. ಇದೀಗ ಸರ್ಕಾರದ ಮುಂದಿನ ಆದೇಶದವರೆಗೂ ಯಾವುದೇ ಹೊಸ ಪಡಿತರ ಚೀಟಿಗಳನ್ನ ಮಂಜೂರು ಮಾಡದಂತೆ ಆದೇಶಿಸಲಾಗಿದ್ದು, ಪಡಿತರ ಚೀಟಿಯಲ್ಲಿನ ತಿದ್ದಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳನ್ನ ಸೇರ್ಪಡಿಸಲು ಮಾತ್ರ ಅನುಮೋದನೆ ನೀಡಲಾಗಿದೆ. ‌

ಬೆಂಗಳೂರು: ಹೊಸ ಪಡಿತರ ಚೀಟಿ ಮಂಜೂರು ಮಾಡದಂತೆ ಸರ್ಕಾರ ಆದೇಶ; ಸದ್ಯಕ್ಕಿಲ್ಲ ಅರ್ಜಿ ಸಲ್ಲಿಕೆ
ಪ್ರಾತಿನಿಧಿಕ ಚಿತ್ರ
Follow us
Poornima Agali Nagaraj
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 10, 2023 | 6:27 PM

ಬೆಂಗಳೂರು, ಆ.10: ಕಳೆದ ಎರಡು ದಿನಗಳ‌ ಹಿಂದೆಯಷ್ಟೇ ಹೊಸ ರೇಷನ್​ ಕಾರ್ಡ್(Ration Card)​ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡುವುದಾಗಿ ಆಹಾರ ಇಲಾಖೆ ಸಚಿವ ಕೆಎಚ್​ ಮುನಿಯಪ್ಪ(KH Muniyappa) ಹೇಳಿದ್ದರು. ಇದೀಗ ಉಲ್ಟಾ ಹೊಡೆದಿರುವ ಸಚಿವರು ಹೊಸ ಪಡಿತರ ಚೀಟಿ ಮಂಜೂರು ಮಾಡದಂತೆ ಆದೇಶ ಹೊರಡಿಸಿದ್ದಾರೆ. ಹೌದು, ಸರ್ಕಾರದ ಮುಂದಿನ ಆದೇಶದವರೆಗೂ ಯಾವುದೇ ಹೊಸ ಪಡಿತರ ಚೀಟಿಗಳನ್ನ ಮಂಜೂರು ಮಾಡದಂತೆ ಆದೇಶಿಸಲಾಗಿದ್ದು, ಪಡಿತರ ಚೀಟಿಯಲ್ಲಿನ ತಿದ್ದಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳನ್ನ ಸೇರ್ಪಡಿಸಲು ಮಾತ್ರ ಅನುಮೋದನೆ ನೀಡಲಾಗಿದೆ. ‌

ಶೀಘ್ರದಲ್ಲೇ ರೇಷನ್‌ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದಿದ್ದ ಆಹಾರ ಸಚಿವ ಕೆಎಚ್​ ಮುನಿಯಪ್ಪ

ಹೌದು, ಆಗಸ್ಟ್​ 7ರಂದು ಟಿವಿ9ಗೆ ಪ್ರತಿಕ್ರಿಯಿಸಿದ್ದ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಸಚಿವ ಕೆಎಚ್​ ಮುನಿಯಪ್ಪ ಅವರು ‘ಶೀಘ್ರದಲ್ಲೇ ಕರ್ನಾಟಕದಲ್ಲಿ ಬಿಪಿಎಲ್ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಹೇಳಿದ್ದರು. ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾದಗಿನಿಂದ ಬಿಪಿಎಲ್ ಕಾರ್ಡ್​ಗೆ ಅರ್ಜಿ ಸ್ವೀಕರಿಸುವುದನ್ನು ಆಹಾರ ಇಲಾಖೆ ಸ್ಥಗಿತಗೊಳಿಸಿತ್ತು. ಇದಾದ ಬಳಿಕ ಸದ್ಯದಲ್ಲೇ ಹೊಸದಾಗಿ ಬಿಪಿಎಲ್ ಕಾರ್ಡ್​ಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ಮಾಡಲಾಗುತ್ತದೆ ಎಂದಿದ್ದರು. ಇದೀಗ ಉಲ್ಟಾ ಹೊಡೆದಿರುವ ಸಚಿವರು, ಸಧ್ಯ ಹೊಸ ರೇಷನ್​ ಕಾರ್ಡ್​ಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲವೆಂದಿದ್ದಾರೆ.

ಇದನ್ನೂ ಓದಿ:ಕೊರೊನಾ ಸಂಕಷ್ಟ: ರೇಷನ್​ ಕಾರ್ಡ್‌ ಇಲ್ಲದವರಿಗೆ ಇನ್ಫೋಸಿಸ್​ನಿಂದ ದಿನಸಿ ಕಿಟ್, ಎಲ್ಲಿ?

ಇನ್ನು ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕೆಂದು, ಅದರಂತೆ ಈ ಯೋಜನೆಯಡಿ 5 ಕೆಜಿ ಅಕ್ಕಿ ಜೊತೆಗೆ ಹಣ ಜಮೆಯಾಗುತ್ತಿದೆ. ಈವರೆಗೆ ಒಂದು ಕೋಟಿ ಕುಟುಂಬಕ್ಕೆ ಇಲಾಖೆಯಿಂದ ಸುಮಾರು 556 ಕೋಟಿ ಹಣ ಹಾಕಲಾಗಿದೆ. ರಾಗಿ, ಜೋಳಕ್ಕೆ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಚಿವರಿಗೆ ಮನವಿ ಮಾಡಿಕೊಂಡಿದ್ದೇವೆಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ತಿಳಿಸಿದ್ದರು.

ಜೊತೆಗೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ನೀಡಲು ಮುಂದಾಗಿದ್ದು, 34 ರೂಪಾಯಿ ದರದಲ್ಲಿ ನೀಡಿದರೆ, ಅಕ್ಕಿ ಖರೀದಿ ಮಾಡಲು ಸಿದ್ಧವಿದ್ದೇವೆ. ಈ ಕುರಿತಾಗಿ ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡುತ್ತೇವೆ. ಜೊತೆಗೆ ಒಂದು ವಾರದಲ್ಲಿ ಅಲ್ಲಿನ ಅಧಿಕಾರಿಗಳು ನಿರ್ಧಾರ ಪ್ರಕಟಿಸುವ ವಿಶ್ವಾಸವಿದ್ದು, ಸೆಪ್ಟೆಂಬರ್​ ತಿಂಗಳಿನಲ್ಲಿ 10 ಕೆಜಿ ಅಕ್ಕಿ ವಿತರಿಸುವ ಚಿಂತನೆ ಇದೆ ಎನ್ನುವ ಭರವಸೆಯ ಮಾತುಗಳನ್ನಾಡಿದ್ದರು. ಇದೀಗ ಹೊಸ ಕಾರ್ಡ್​ಗೆ ಅಪ್ಲಿಕೇಶನ್​ ಹಾಕಲು ಉತ್ಸುಕರಾಗಿದ್ದವರಿಗೆ ಸರ್ಕಾರ ಶಾಕ್​ ನೀಡಿದೆ. ಮುಂದಿನ ಆದೇಶದವರೆಗೂ ಹೊಸ ಕಾರ್ಡ್ ಅಪ್ಲಿಕೇಶನ್​ಗೆ ಅವಕಾಶವಿಲ್ಲವೆಂದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:27 pm, Thu, 10 August 23

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ