ಆರು ಐಎಎಸ್ ಅಧಿಕಾರಿಗಳು ವರ್ಗಾವಣೆ; ಕರ್ನಾಟಕ ಸರ್ಕಾರದಿಂದ ಆದೇಶ

ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಆರು ಐಎಎಸ್ ಅಧಿಕಾರಿಗಳು ವರ್ಗಾವಣೆ; ಕರ್ನಾಟಕ ಸರ್ಕಾರದಿಂದ ಆದೇಶ
ವಿಧಾನಸೌಧ
Rakesh Nayak Manchi

Updated on: Jun 03, 2023 | 4:46 PM

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ (Transfers) ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಮಂಜುಳಾ ಎನ್ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಪ್ರಭಾರ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: 51 ಡಿವೈಎಸ್​ಪಿ, 292 ಪೊಲೀಸ್ ಇನ್ಸ್​ಪೆಕ್ಟರ್​ಗಳ ವರ್ಗಾವಣೆ, ಕರ್ನಾಟಕ ಸರ್ಕಾರದಿಂದ ಆದೇಶ

ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶರತ್ ಬಿ ಅವರನ್ನು ಕೃಷಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇದೇ ರೀತಿ, ಇ-ಆಡಳಿತ, RDPR ನಿರ್ದೇಶಕಿ ಸುಭಾ ಕಲ್ಯಾಣ್ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ (ಮಧ್ಯಾಹ್ನದ ಬಿಸಿ ಊಟ) ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us