ಉಕ್ರೇನ್​ನಲ್ಲಿರುವ ಕರ್ನಾಟಕ ವಿದ್ಯಾರ್ಥಿಗಳ ರಕ್ಷಣೆಗೆ ನೋಡೆಲ್ ಅಧಿಕಾರಿ ನೇಮಕ: ಸಹಾಯವಾಣಿ ಆರಂಭ

ಉಕ್ರೇನ್​ನಲ್ಲಿರುವ ಕರ್ನಾಟಕ ಮೂಲದ ವಿದ್ಯಾರ್ಥಿಗಳ ರಕ್ಷಣೆಗಾಗಿ ಕರ್ನಾಟಕ ಸರ್ಕಾರವು ಅಗತ್ಯ ಕ್ರಮ ತೆಗೆದುಕೊಂಡಿದೆ. ಈ ಕುರಿತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಸೂಚನೆ ಹೊರಡಿಸಿದ್ದಾರೆ.

ಉಕ್ರೇನ್​ನಲ್ಲಿರುವ ಕರ್ನಾಟಕ ವಿದ್ಯಾರ್ಥಿಗಳ ರಕ್ಷಣೆಗೆ ನೋಡೆಲ್ ಅಧಿಕಾರಿ ನೇಮಕ: ಸಹಾಯವಾಣಿ ಆರಂಭ
ಉಕ್ರೇನ್ ಗಡಿಯಲ್ಲಿ ರಷ್ಯನ್ ಪಡೆಗಳು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 24, 2022 | 9:29 PM

ಬೆಂಗಳೂರು: ರಷ್ಯಾ-ಉಕ್ರೇನ್ ಸಂಘರ್ಷ (Russia-Ukraine) ವಿಷಮಿಸುತ್ತಿರುವ ಹಿನ್ನೆಲೆಯಲ್ಲಿ ಉಕ್ರೇನ್​ನಲ್ಲಿರುವ ಕರ್ನಾಟಕ ಮೂಲದ ವಿದ್ಯಾರ್ಥಿಗಳ ರಕ್ಷಣೆಗಾಗಿ ಕರ್ನಾಟಕ ಸರ್ಕಾರವು ಅಗತ್ಯ ಕ್ರಮ ತೆಗೆದುಕೊಂಡಿದೆ. ಈ ಕುರಿತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಸೂಚನೆ ಹೊರಡಿಸಿದ್ದಾರೆ. ‘ಉಕ್ರೇನ್​ನಲ್ಲಿ ಪ್ರಸ್ತುತ ಮಿಲಿಟರಿ ಕಾನೂನು ಜಾರಿ ಮಾಡಲಾಗಿದೆ. ಮುಂದೇನಾಗಲಿದೆ ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಗೊತ್ತಿಲ್ಲ. ಉಕ್ರೇನ್​ನ ವಾಯುಮಾರ್ಗವನ್ನು ಮುಚ್ಚಲಾಗಿದೆ. ವಿಶೇಷ ವಿಮಾನಗಳನ್ನು ರದ್ದುಪಡಿಸಲಾಗಿದೆ. ಹೀಗಾಗಿ ಭಾರತದ ಜನರು ಮತ್ತು ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಗೆ ಸಮಸ್ಯೆಯಾಗಿದೆ. ಉಕ್ರೇನ್ ರಾಜಧಾನಿ ಕೀವ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಲ್ಲಿರುವ ಎಲ್ಲ ಭಾರತೀಯರನ್ನು ರಕ್ಷಿಸಲು ಯತ್ನಿಸುತ್ತಿದೆ’ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

‘ಕರ್ನಾಟಕದ ಸಾಕಷ್ಟು ವಿದ್ಯಾರ್ಥಿಗಳು ಉಕ್ರೇನ್​ನಲ್ಲಿ ಸಿಲುಕಿದ್ದಾರೆ. ಇವರ ರಕ್ಷಣೆಗಾಗಿ ಮುಖ್ಯಮಂತ್ರಿ ಕಚೇರಿ ಮತ್ತು ಮುಖ್ಯಕಾರ್ಯದರ್ಶಿ ಸತತ ಪ್ರಯತ್ನ ನಡೆಸುತ್ತಿದ್ದಾರೆ. ವಿದೇಶಾಂಗ ವ್ಯವಹಾರಗಳ ಇಲಾಖೆ ಹಾಗೂ ಕೀವ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಮುಖ್ಯಮಂತ್ರಿ ಕಚೇರಿ ಸತತ ಸಂಪರ್ಕದಲ್ಲಿದೆ. ಅಲ್ಲಿನ ವಿದ್ಯಾರ್ಥಿಗಳನ್ನು ಸಂಪರ್ಕಿಸಲು ಮತ್ತು ಅವರಿಗೆ ಸಾಧ್ಯವಿರು ಎಲ್ಲ ನೆರವು ಒದಗಿಸಲು ವಿದೇಶಾಂಗ ವ್ಯವಹಾರಗಳ ಇಲಾಖೆ ಶ್ರಮಿಸುತ್ತಿದೆ. ಇದಕ್ಕಾಗಿ ಭಾರತ ಸರ್ಕಾರವು 24X7 ಕಾರ್ಯನಿರ್ವಹಿಸುವ ಸಹಾಯವಾಣಿಗಳನ್ನು ಆರಂಭಿಸಿದೆ’ ಎಂದು ಹೇಳಿದ್ದಾರೆ.

‘ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಕನ್ನಡಿಗರನ್ನು ಕರೆತರಲು ಕರ್ನಾಟಕ ಸರ್ಕಾರವು ಐಎಫ್​ಎಸ್ ಅಧಿಕಾರಿ, ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯದರ್ಶಿ ಡಾ.ಮನೋಜ್ ರಾಜನ್ ಅವರನ್ನು ನೋಡೆಲ್ ಅಧಿಕಾರಿಯಾಗಿ ನೇಮಿಸಿದೆ. ಮುಂದಿನ ದಿನಗಳಲ್ಲಿ ಇವರು ವಿದೇಶಾಂಗ ವ್ಯವಹಾರಗಳ ಇಲಾಖೆಯೊಂದಿಗೆ ಸಹಯೋಗದಿಂದ ಕೆಲಸ ಮಾಡಿ, ಉಕ್ರೇನ್​ನಲ್ಲಿರುವ ಕನ್ನಡಿಗರನ್ನು ವಾಪಸ್ ಕರ್ನಾಟಕಕ್ಕೆ ಕರೆತರಲು ಯತ್ನಿಸಲಿದ್ದಾರೆ’ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Govt-Notification

ಕರ್ನಾಟಕ ಸರ್ಕಾರ ಹೊರಡಿಸಿರುವ ಅಧಿಸೂಚನೆ

ಅಗತ್ಯ ಇರುವವರು ಯಾವುದೇ ದಿನ, ಯಾವುದೇ ಸಮಯದಲ್ಲಿ 24X7 ಸಹಾಯವಾಣಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 080 1070, 080 2234 0676. ಇಮೇಲ್: manoarya@gmail.com, revenuedmkar@gmail.com ಸಂಪರ್ಕಿಸಬಹುದು ಎಂದು ಹೇಳಿದ್ದಾರೆ. ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಇಲಾಖೆಯೂ ನಿಯಂತ್ರಣ ಕೇಂದ್ರ ಸ್ಥಾಪಿಸಿದ್ದು ಸಹಾಯವಾಣಿಗಳನ್ನು ಆರಂಭಿಸಿದೆ. +91 11 2301 2113, +91 11 2301 4104, +91 11 2301 7905. ಟೋಲ್​ಫ್ರೀ ಸಂಖ್ಯೆ 1800 11 8797 (ದೆಹಲಿ). ಇಮೇಲ್: situationroom@mea.gov.in

ಇದನ್ನೂ ಓದಿ: ನಿಮಗಿದು ಗೊತ್ತೇ?; ಭಾರತದ ಸಹಾಯ ಬೇಡುತ್ತಿರುವ ಇದೇ ಉಕ್ರೇನ್ ವಿಶ್ವಸಂಸ್ಥೆಯಲ್ಲಿ 1998ರ ಅಣ್ವಸ್ತ್ರ ಪರೀಕ್ಷೆಯನ್ನು ಖಂಡಿಸಿತ್ತು

ಇದನ್ನೂ ಓದಿ: Russia Ukraine War; ಉಕ್ರೇನ್​ನಲ್ಲಿ ಸಿಲುಕಿರುವ ಮಕ್ಕಳ ಪರದಾಟ ನೋಡಿ ಕಂಗಾಲಾದ ಪೋಷಕರು; ಸುರಕ್ಷಿತವಾಗಿ ಕರೆತರುವಂತೆ ಮನವಿ

Published On - 9:28 pm, Thu, 24 February 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ