AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ನಿಯಂತ್ರಣಕ್ಕೆ ಸರ್ಕಾರದ ಬಿಗ್ ಪ್ಲಾನ್!

ಖಾಸಗಿ ಆಸ್ಪತ್ರೆಗಳಲ್ಲಿ ಒಂದೇ ಚಿಕಿತ್ಸೆಗೆ ವಿಭಿನ್ನ ಹಾಗೂ ದುಬಾರಿ ದರ ವಿಧಿಸುವ ಸುಲಿಗೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಚಿಕಿತ್ಸಾ ವೆಚ್ಚದಲ್ಲಿ ಏಕರೂಪತೆ ತರಲು ಆರೋಗ್ಯ ಇಲಾಖೆ ಹೊಸ ನೀತಿ ರೂಪಿಸುತ್ತಿದ್ದು, ಫನಾ ಒಕ್ಕೂಟದ ಜೊತೆ ಸಭೆ ನಡೆಸಿದೆ. ಇದರಿಂದ ಸಾಮಾನ್ಯ ಜನರ ಜೇಬಿಗೆ ಬೀಳುವ ದೊಡ್ಡ ಹೊರೆ ತಪ್ಪಲಿದೆ.

ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ನಿಯಂತ್ರಣಕ್ಕೆ ಸರ್ಕಾರದ ಬಿಗ್ ಪ್ಲಾನ್!
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on: Oct 17, 2026 | 10:16 AM

Share

ಮುಖ್ಯಾಂಶಗಳು

  • ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ನಿಯಂತ್ರಣಕ್ಕೆ ಸರ್ಕಾರದ ಬಿಗ್ ಪ್ಲಾನ್.
  • ಒಂದೇ ಸರ್ಜರಿಗೆ ಬೇರೆ ಬೇರೆ ಆಸ್ಪತ್ರೆಗಳ ದುಬಾರಿ ಬಿಲ್‌ಗೆ ಕಡಿವಾಣ.
  • ರಾಜ್ಯಾದ್ಯಂತ ಚಿಕಿತ್ಸಾ ವೆಚ್ಚದಲ್ಲಿ ಏಕರೂಪತೆ ತರಲು ಸರ್ಕಾರದ ಗಂಭೀರ ಚಿಂತನೆ.

ಬೆಂಗಳೂರು, ಅಕ್ಟೋಬರ್ 17: ಔಷಧಿಗಳ ಬೆಲೆ ನಿಯಂತ್ರಣದ ಬೆನ್ನಲ್ಲೇ, ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಮನಬಂದಂತೆ ಹಣ ವಸೂಲಿ ಮಾಡುತ್ತಿರುವ ಸುಲಿಗೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದೇ ರೀತಿಯ ಶಸ್ತ್ರಚಿಕಿತ್ಸೆಗೆ (ಸರ್ಜರಿ) ವಿವಿಧ ಆಸ್ಪತ್ರೆಗಳಲ್ಲಿ ವಿಭಿನ್ನ ಹಾಗೂ ದುಬಾರಿ ಬಿಲ್ ವಿಧಿಸುತ್ತಿರುವುದಕ್ಕೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ.

ಮಧ್ಯಮ ವರ್ಗದ ಜನರ ಸಂಕಷ್ಟ

ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದೇ ಕಾಯಿಲೆ ಅಥವಾ ಸರ್ಜರಿಗೆ ಒಂದು ಆಸ್ಪತ್ರೆಯಲ್ಲಿ 10 ಸಾವಿರ ರೂ. ಇದ್ದರೆ, ಮತ್ತೊಂದು ಆಸ್ಪತ್ರೆಯಲ್ಲಿ 50 ಸಾವಿರ ರೂ. ಹಾಗೂ ಟಾಪ್ ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಬರೋಬ್ಬರಿ 1 ಲಕ್ಷ ರೂ. ವರೆಗೆ ಬಿಲ್ ಮಾಡಲಾಗುತ್ತಿದೆ. ಅಲ್ಲದೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರಿನಂತಹ ಪ್ರಮುಖ ನಗರಗಳಲ್ಲಿ ಆಸ್ಪತ್ರೆಗಳ ದರಗಳಲ್ಲಿ ಭಾರೀ ವ್ಯತ್ಯಾಸವಿರುತ್ತದೆ. ಇದರಿಂದ ಸಾಮಾನ್ಯ ರೋಗಿಗಳು ಮತ್ತು ಮಧ್ಯಮ ವರ್ಗದ ಜನರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

ಏಕರೂಪದ ದರ ನಿಗದಿಪಡಿಸುವ ಸಾಧ್ಯತೆ

ಈ ಅನ್ಯಾಯ ತಪ್ಪಿಸಲು ಮತ್ತು ಚಿಕಿತ್ಸಾ ವೆಚ್ಚದಲ್ಲಿ ಏಕರೂಪತೆ ತರಲು ಆರೋಗ್ಯ ಇಲಾಖೆ ಗಂಭೀರ ಚಿಂತನೆ ನಡೆಸಿದೆ. ಖಾಸಗಿ ಆಸ್ಪತ್ರೆಗಳ ದರ ನಿಯಂತ್ರಣಕ್ಕೆ ಹೊಸ ನೀತಿಯನ್ನು ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ‘ಫನಾ’ (PHANA – Private Hospitals and Nursing Homes Association) ಖಾಸಗಿ ಆಸ್ಪತ್ರೆಗಳ ಒಕ್ಕೂಟದ ಜೊತೆ ಪ್ರಾಥಮಿಕ ಹಂತದ ಸಭೆಯನ್ನು ನಡೆಸಲಾಗಿದೆ. ಮುಂದಿನ ವಾರದಲ್ಲೇ ಚಿಕಿತ್ಸಾ ವೆಚ್ಚಕ್ಕೆ ಸಂಬಂಧಿಸಿದಂತೆ ಏಕರೂಪದ ದರ ನಿಗದಿಪಡಿಸುವ ಸಾಧ್ಯತೆಯಿದೆ. ಸರ್ಕಾರದ ಈ ಹೊಸ ನಿರ್ಧಾರದಿಂದ ರೋಗಿಗಳ ಜೇಬಿಗೆ ಬೀಳುವ ದೊಡ್ಡ ಹೊರೆ ತಪ್ಪಲಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ದೊಡ್ಡ ಪ್ರಮಾಣದ ಆರ್ಥಿಕ ನಿರಾಳತೆ ಸಿಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More