AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಮುಕ್ತಾಯಗೊಂಡ ಗೃಹ ಜ್ಯೋತಿ ಮರುಪರಿಶೀಲನೆ: 1.42 ಲಕ್ಷ ಫಲಾನುಭವಿಗಳಿಗೆ ಶಾಕ್

ರಾಜ್ಯ ಸರ್ಕಾರದ ಗೃಹ ಜ್ಯೋತಿ ಉಚಿತ ವಿದ್ಯುತ್ ಯೋಜನೆಯ ಫಲಾನುಭವಿಗಳ ಅರ್ಹತಾ ಪರಿಶೀಲನಾ ಸಮೀಕ್ಷೆ ಪೂರ್ಣಗೊಂಡಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ 1.42 ಲಕ್ಷ ಫಲಾನುಭವಿಗಳು ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ ಕಾರಣ ಅವರನ್ನು ಯೋಜನೆಯಿಂದ ಹೊರಗಿಡಲು ಸಿದ್ಧತೆ ನಡೆದಿದೆ. ವಾಣಿಜ್ಯ ಬಳಕೆ, ಐಟಿ ರಿಟರ್ನ್ಸ್ ಮತ್ತು ಜಿಎಸ್‌ಟಿ ಪಾವತಿದಾರರನ್ನು ಗುರುತಿಸಿ ಯೋಜನೆಯಿಂದ ಕೈಬಿಡಲಾಗುತ್ತಿದೆ. ಶೀಘ್ರದಲ್ಲೇ ವರದಿ ಸಲ್ಲಿಸಿ, ಮುಂದಿನ ತಿಂಗಳಿನಿಂದ ಅನರ್ಹರಿಗೆ ಸಾಮಾನ್ಯ ಬಿಲ್ ಬರಲಿದೆ.

ಕೊನೆಗೂ ಮುಕ್ತಾಯಗೊಂಡ ಗೃಹ ಜ್ಯೋತಿ ಮರುಪರಿಶೀಲನೆ: 1.42 ಲಕ್ಷ ಫಲಾನುಭವಿಗಳಿಗೆ ಶಾಕ್
ಸಾಂದರ್ಭಿಕ ಚಿತ್ರ Image Credit source: Google
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Nov 02, 2026 | 2:50 PM

Share

ಬೆಂಗಳೂರು, ನ.2: ರಾಜ್ಯ ಕಾಂಗ್ರೆಸ್​​​ ಸರ್ಕಾರದ ಉಚಿತ ವಿದ್ಯುತ್ ಯೋಜನೆಯಾದ ಗೃಹ ಜ್ಯೋತಿ ಫಲಾನುಭವಿಗಳ ಅರ್ಹತೆ ಪರಿಶೀಲನೆಗಾಗಿ ಕಳೆದ ನಾಲ್ಕು ತಿಂಗಳುಗಳಿಂದ ನಡೆಸಲಾಗುತ್ತಿದ್ದ ಸುದೀರ್ಘ ಮರು ಪರಿಶೀಲನಾ ಹಾಗೂ ಸಮೀಕ್ಷಾ ಕಾರ್ಯ ಕೊನೆಗೂ ಅಂತ್ಯಗೊಂಡಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯಲ್ಲಿ ಈ ಸಮೀಕ್ಷೆ ಪೂರ್ಣಗೊಂಡಿದ್ದು, ಪರಿಶೀಲನೆಯ ವೇಳೆ ಬರೋಬ್ಬರಿ 1.42 ಲಕ್ಷ ಫಲಾನುಭವಿಗಳು ಸಮೀಕ್ಷೆಯಲ್ಲಿ ಭಾಗಿಯಾಗಲು ಸಂಪೂರ್ಣವಾಗಿ ಹಿಂದೇಟು ಹಾಕಿದ್ದಾರೆ. ಪರಿಣಾಮವಾಗಿ, ಈ 1.42 ಲಕ್ಷ ಮಂದಿಯನ್ನು ಯೋಜನೆಯಿಂದ ಅಧಿಕೃತವಾಗಿ ಕೈಬಿಡಲು ಬೆಸ್ಕಾಂ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಶೇ. 99.31ರಷ್ಟು ಸಮೀಕ್ಷೆ ಪೂರ್ಣ: 70 ಲಕ್ಷ ಕುಟುಂಬಗಳ ಡಾಟಾ ಕಲೆಕ್ಟ್

ಬೆಸ್ಕಾಂ ಮೀಟರ್ ರೀಡರ್‌ಗಳು ಕಳೆದ 4 ತಿಂಗಳುಗಳಿಂದ ನಿರಂತರವಾಗಿ ಮನೆ ಮನೆಗೆ ಭೇಟಿ ನೀಡಿ ಮರು ಪರಿಶೀಲನೆ ನಡೆಸಿದ್ದು, ಶೇ. 99.31 ರಷ್ಟು ಸಮೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಬೆಸ್ಕಾಂ ವ್ಯಾಪ್ತಿಗೆ ಒಳಪಡುವ ಒಟ್ಟು ಸುಮಾರು 70 ಲಕ್ಷ ಗೃಹ ಜ್ಯೋತಿ ಫಲಾನುಭವಿಗಳ ಸಮಗ್ರ ಮಾಹಿತಿಯನ್ನು ಕಲೆಹಾಕಲಾಗಿದೆ. ಸಮೀಕ್ಷೆಗೆ ಆಗಮಿಸಿದ ಸಿಬ್ಬಂದಿ ಬಳಿ ಸುಮಾರು 1.42 ಲಕ್ಷ ಗ್ರಾಹಕರು, “ನಾವು ಈ ಸಮೀಕ್ಷೆಯಲ್ಲಿ ಭಾಗಿಯಾಗಲು ಇಷ್ಟಪಡುವುದಿಲ್ಲ” ಎಂದು ಸ್ವತಃ ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದಾರೆ. ಹೀಗಾಗಿ ಇವರನ್ನು ಯೋಜನೆಯಿಂದ ನೇರವಾಗಿ ಹೊರಗಿಡಲಾಗುತ್ತಿದೆ.

ಐಟಿ ರಿಟರ್ನ್ಸ್, ಜಿಎಸ್‌ಟಿ ಪಾವತಿದಾರರು ಹಾಗೂ ವಾಣಿಜ್ಯ ಬಳಕೆದಾರರು ಹೊರಕ್ಕೆ:

ಉಚಿತ ವಿದ್ಯುತ್ ದುರುಪಯೋಗ ತಡೆಯಲು ಸರ್ಕಾರ ಹಾಗೂ ಇಂಧನ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಈ ಕೆಳಗಿನ ವರ್ಗದವರು ಯೋಜನೆಯಿಂದ ಹೊರಬೀಳುವುದು ಬಹುತೇಕ ಖಚಿತವಾಗಿದೆ. ಗೃಹ ಬಳಕೆಯ ವಿದ್ಯುತ್ ಸಂಪರ್ಕವನ್ನು ಪಡೆದು, ಅದನ್ನು ಪೆಟ್ಟಿಗೆ ಅಂಗಡಿ, ಬಾಡಿಗೆ ಮಳಿಗೆ ಅಥವಾ ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿದ್ದವರ ಸಂಪರ್ಕ ರದ್ದಾಗಲಿದೆ. ವಾರ್ಷಿಕ ಐಟಿ ರಿಟರ್ನ್ಸ್ ಸಲ್ಲಿಸುತ್ತಿರುವ ಹಾಗೂ ಐಟಿ ಪಾವತಿದಾರರಾಗಿದ್ದರೂ ಯೋಜನೆ ಲಾಭ ಪಡೆಯುತ್ತಿದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ. ವ್ಯಾಪಾರ-ವಹಿವಾಟು ನಡೆಸಿ ಜಿಎಸ್‌ಟಿ ಸಂಖ್ಯೆ ಹೊಂದಿರುವ ಮಾಲೀಕರಿಗೂ ಗೃಹ ಜ್ಯೋತಿ ಭಾಗ್ಯ ಕೈತಪ್ಪಲಿದೆ.

ಇದನ್ನೂ ಓದಿ: ಬರದ ನಡುವೆಯೂ ಈರುಳ್ಳಿ ಬೆಳೆದು ಕೋಟಿ ಆದಾಯ! ಧಾರವಾಡದ ರೈತ ಕುಟುಂಬದ ಯಶೋಗಾಥೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಹಾಗೂ ಚಿತ್ರದುರ್ಗ ಸೇರಿದಂತೆ ಒಟ್ಟು 8 ಜಿಲ್ಲೆಗಳು ಬೆಸ್ಕಾಂ ವ್ಯಾಪ್ತಿಗೆ ಒಳಪಡುತ್ತವೆ. ಈ 8 ಜಿಲ್ಲೆಗಳಲ್ಲೇ 1.42 ಲಕ್ಷ ಮಂದಿ ಸಮೀಕ್ಷೆಯಿಂದ ಹಿಂದೆ ಸರಿದಿದ್ದಾರೆ. ಇಡೀ ರಾಜ್ಯಾದ್ಯಂತ ಪ್ರಸ್ತುತ ಸುಮಾರು 1.65 ಕೋಟಿ ಗೃಹ ಜ್ಯೋತಿ ಫಲಾನುಭವಿಗಳಿದ್ದಾರೆ. ಈ ಪೈಕಿ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ ಬರೋಬ್ಬರಿ 1.70 ಲಕ್ಷಕ್ಕೂ ಹೆಚ್ಚು ಮಂದಿ ಸಮೀಕ್ಷೆಯಲ್ಲಿ ಭಾಗಿಯಾಗಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.

ಶೀಘ್ರದಲ್ಲೇ ಇಂಧನ ಇಲಾಖೆಗೆ ಸಮಗ್ರ ವರದಿ ಸಲ್ಲಿಕೆ

ನಾಲ್ಕು ತಿಂಗಳ ತಪಾಸಣೆಯ ಅಂಕಿಅಂಶಗಳನ್ನೊಳಗೊಂಡ ಅಂತಿಮ ವರದಿಯನ್ನು ಬೆಸ್ಕಾಂ ಅಧಿಕಾರಿಗಳು ಅತ್ಯಂತ ಶೀಘ್ರದಲ್ಲೇ ರಾಜ್ಯ ಇಂಧನ ಇಲಾಖೆಗೆ ಸಲ್ಲಿಕೆ ಮಾಡಲಿದ್ದಾರೆ. ವರದಿ ಸಲ್ಲಿಕೆಯಾದ ಬಳಿಕ, ಅರ್ಹತೆಯಿಲ್ಲದ ಹಾಗೂ ಸಮೀಕ್ಷೆಗೆ ನಿರಾಕರಿಸಿದ ಗ್ರಾಹಕರ ವಿದ್ಯುತ್ ಖಾತೆಗಳಿಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಸಬ್ಸಿಡಿಯನ್ನು ಇಲಾಖೆ ರದ್ದುಗೊಳಿಸಲಿದ್ದು, ಮುಂದಿನ ತಿಂಗಳಿನಿಂದ ಅವರಿಗೆ ಸಾಮಾನ್ಯ ವಿದ್ಯುತ್ ಬಿಲ್ ತಲುಪಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ
ಸ್ಟಿಂಗ್ ಆಪರೇಷನ್ ಪ್ರಕರಣ: ಕುಮಾರಸ್ವಾಮಿ ದೆಹಲಿ ನಿವಾಸ ಪರಿಶೀಲನೆ ಸಾಧ್ಯತೆ
ಸ್ಟಿಂಗ್ ಆಪರೇಷನ್ ಪ್ರಕರಣ: ಕುಮಾರಸ್ವಾಮಿ ದೆಹಲಿ ನಿವಾಸ ಪರಿಶೀಲನೆ ಸಾಧ್ಯತೆ
ಶಕ್ತಿದೇವತೆ ಹಾಸನಾಂಬೆಯನ್ನು ನೋಡಲು ಕಿಕ್ಕಿರಿದ ಭಕ್ತರ ದಂಡು!
ಶಕ್ತಿದೇವತೆ ಹಾಸನಾಂಬೆಯನ್ನು ನೋಡಲು ಕಿಕ್ಕಿರಿದ ಭಕ್ತರ ದಂಡು!
ಕೃಷ್ಣಾ ನದಿ ನೀರು ವಿವಾದ, ಮಹಾರಾಷ್ಟ್ರದ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ
ಕೃಷ್ಣಾ ನದಿ ನೀರು ವಿವಾದ, ಮಹಾರಾಷ್ಟ್ರದ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ
ನಂದಿನಿ ಹಾಲು ದರ ಏರಿಕೆ ಪರಿಣಾಮ: ರಾಜ್ಯಾದ್ಯಂತ ಕಾಫಿ, ಟೀ ಬೆಲೆ ₹5 ಹೆಚ್ಚಳ
ನಂದಿನಿ ಹಾಲು ದರ ಏರಿಕೆ ಪರಿಣಾಮ: ರಾಜ್ಯಾದ್ಯಂತ ಕಾಫಿ, ಟೀ ಬೆಲೆ ₹5 ಹೆಚ್ಚಳ
‘ಧಮ್ ಇದ್ರೆ ಬಿಚ್ಚಿಡು’; ಗಾನವಿ-ಆಸಿಯಾ ಮಧ್ಯೆ ನಡೆಯಿತು ದೊಡ್ಡ ವಾಕ್ಸಮರ
‘ಧಮ್ ಇದ್ರೆ ಬಿಚ್ಚಿಡು’; ಗಾನವಿ-ಆಸಿಯಾ ಮಧ್ಯೆ ನಡೆಯಿತು ದೊಡ್ಡ ವಾಕ್ಸಮರ
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಸತ್ತ ನಾಲ್ವರ ಮೃತದೇಹ ಬೆಂಗಳೂರಿಗೆ
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಸತ್ತ ನಾಲ್ವರ ಮೃತದೇಹ ಬೆಂಗಳೂರಿಗೆ
ಶಿವಲಿಂಗೇಗೌಡ ಕಬಡ್ಡಿ ಅಖಾಡಕ್ಕಿಳಿದು ರೈಡ್ ಮಾಡಿದ ಸ್ಟೈಲ್ ನೋಡಿ
ಶಿವಲಿಂಗೇಗೌಡ ಕಬಡ್ಡಿ ಅಖಾಡಕ್ಕಿಳಿದು ರೈಡ್ ಮಾಡಿದ ಸ್ಟೈಲ್ ನೋಡಿ