AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಗ್ ಅಪ್ಡೇಟ್: 100 ದಿನದ ಸಂಭ್ರಮದಲ್ಲಿ ಸಿಎಂ ಮಹತ್ವದ ಘೋಷಣೆ

ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರ ಯಶಸ್ವಿಯಾಗಿ 100 ದಿನ ಪೂರೈಸಿದೆ. ಹೀಗಾಗಿ ಇಂದು ವಿಧಾನಸೌಧದ ಬ್ಯಾಂಕ್ವೆಟ್​​ ಹಾಲ್‌ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್​, ಸರ್ಕಾರ ನೀಡಿದ ಐದು ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತಂದಿವೆ. ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಗ್ ಅಪ್ಡೇಟ್: 100 ದಿನದ ಸಂಭ್ರಮದಲ್ಲಿ ಸಿಎಂ ಮಹತ್ವದ ಘೋಷಣೆ
ಡಿಕೆ ಶಿವಕುಮಾರ್​Image Credit source: cmx
ಹರೀಶ್ ಜಿ.ಆರ್​.
| Edited By: |

Updated on: Sep 10, 2026 | 3:22 PM

Share

ಬೆಂಗಳೂರು, ಸೆಪ್ಟೆಂಬರ್​ 10: ‘ರಾಜ್ಯದ 7 ಕೋಟಿ ಜನರಿಗೆ ಕಾಂಗ್ರೆಸ್​ ಸರ್ಕಾರ ಸೇರಿದೆ. ಕರ್ನಾಟಕ ರಾಜ್ಯವನ್ನು ಸಮಗ್ರ ಅಭಿವೃದ್ಧಿ ಮಾಡುವುದೆ ನಮ್ಮ ಗುರಿ. ನಾಡನ್ನು ಪ್ರಗತಿಪಥದತ್ತ ಕೊಂಡೊಯ್ಯಲು ನಿಮ್ಮ ಮುಂದೆ ನಿಂತಿದ್ದೇನೆ. ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ. ಕೊಟ್ಟ ಮಾತಿನಂತೆ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿಯೋಜನೆ, ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ’ ಎಂದು ಸಿಎಂ ಡಿಕೆ ಶಿವಕುಮಾರ್​ ಗುಡುಗಿದರು.

‘ದೃಢ ಕರ್ನಾಟಕದ ಸಂಕಲ್ಪ’.. ‘ಶತಕದ ಪಥ, ಪ್ರಗತಿ ರಥ’ ಕಾರ್ಯಕ್ರಮ

ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಸರ್ಕಾರ ಶತ ದಿನ ಪೂರೈಸಿದೆ. ಸರ್ಕಾರ ಯಶಸ್ವಿಯಾಗಿ 100 ದಿನಗಳ ಆಡಳಿತವನ್ನು ಪೂರೈಸಿದ ಐತಿಹಾಸಿಕ ಮೈಲಿಗಲ್ಲನ್ನು ಸಂಭ್ರಮಿಸಲು ಇಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ‘ದೃಢ ಕರ್ನಾಟಕದ ಸಂಕಲ್ಪ, ಶತಕದ ಪಥ, ಪ್ರಗತಿ ರಥ’ ಧ್ಯೇಯ ವಾಕ್ಯದಡಿ ಶತ ದಿನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನುಡಿದಂತೆ ನಡೆದು ಆತ್ಮವಿಶ್ವಾಸಕ್ಕೆ ದೊಡ್ಡ ಶಕ್ತಿ ತುಂಬಿದ್ದೇವೆ: ಸಿಎಂ 

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್​​, ‘ನಾವು ಐದು ಗ್ಯಾರಂಟಿಗಳನ್ನು ಕೊಟ್ಟು ಪ್ರತಿಜ್ಞೆ ಮಾಡಿದ್ದೇವೆ. ಗ್ಯಾರಂಟಿಯಿಂದ ನಿಮ್ಮೆಲ್ಲರ ಬದುಕಿನಲ್ಲಿ ಬದಲಾವಣೆ ತಂದಿದೆ. ಇದು ನೂರು ದಿನದ ಸರ್ಕಾರದ ಆಚರಣೆ ಅಲ್ಲ. ನಾನು ಹಾಗೂ ಸಿದ್ದರಾಮಯ್ಯ ನಿಮಗೆ ಭರವಸೆ ಕೊಟ್ಟಿದ್ದೆವು, ನುಡಿದಂತೆ ನಡೆದು ಆತ್ಮವಿಶ್ವಾಸಕ್ಕೆ ದೊಡ್ಡ ಶಕ್ತಿ ತುಂಬಿದ್ದೇವೆ’ ಎಂದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸ್ತಾಪ

‘ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ಕೆಲಸ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳು ಟೀಕೆ ಮಾಡಿದ್ದವು. ಕೇಂದ್ರ ಸರ್ಕಾರ ಕೂಡ ಗ್ಯಾರಂಟಿ ಯೋಜನೆಗಳನ್ನ ಟೀಕಿಸಿತ್ತು. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತೆ ಎಂದಿದ್ದರು. ಈಗ ನಮ್ಮ ಗ್ಯಾರಂಟಿ ಯೋಜನೆಗಳನ್ನು ಕೇಂದ್ರ ಸರ್ಕಾರ, ಬಿಜೆಪಿ ಸರ್ಕಾರದ ರಾಜ್ಯಗಳು ಅನುಸರಿಸುತ್ತಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಯೋಜನೆಗಳ ಬಗ್ಗೆ ಪ್ರಸ್ತಾಪಿಸಲಾಗಿದ್ದು, ಗ್ಯಾರಂಟಿ ಯೋಜನೆ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ. 5 ಗ್ಯಾರಂಟಿಗಳನ್ನ ಜನರಿಗೆ ತಲುಪಿಸಿದ್ದೇವೆ ಎಂಬ ಆತ್ಮವಿಶ್ವಾಸ ಇದೆ. ಇದಕ್ಕೆಲ್ಲಾ ನೀವು ಕೊಟ್ಟ ಶಕ್ತಿ, ಇದರಿಂದ ಉತ್ತಮ ಕೆಲಸ ಮಾಡುತ್ತಿದ್ದೇವೆ. ನಮ್ಮ ಎಲ್ಲ ಸಚಿವರ ಸಹಕಾರದಿಂದ ಒಳ್ಳೆಯ ಕೆಲಸ ಮಾಡಲು ಸಾಧ್ಯವಾಗಿದೆ’ ಎಂದು ಅವರು ಹೇಳಿದರು.

LIVE TV

ಇದನ್ನೂ ಓದಿ: ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ಡಿಕೆಶಿ, ಪರಮೇಶ್ವರ್​​ರಿಂದ ವಿಶೇಷ ಸ್ವಾಗತ

‘ನಾನೊಬ್ಬನೇ ರಥ ಎಳೆಯುತ್ತಿಲ್ಲ, ಇದು ಜನತೆಯ ಸರ್ಕಾರ. ಪ್ರತಿ ಮನೆಯಲ್ಲೂ ಬದಲಾವಣೆ ರೂಪ ಕೊಡುವುದಕ್ಕೆ ಆಲೋಚನೆ ಮಾಡುತ್ತಿದ್ದೇವೆ. ಶತಕದ ಪಥದಲ್ಲಿ ಕರ್ನಾಟಕ ಹೆಜ್ಜೆ ಹಾಕ್ತಿದೆ. ನನ್ನ ಸಹೋದ್ಯೋಗಿಗಳು, 224 ಶಾಸಕರು 75 ಎಂಎಲ್​ಸಿಗಳು ರಾಜ್ಯದ ಎಲ್ಲಾ ಸಂಸದರು ಒಟ್ಟಾಗಿ ದುಡಿಯುವ ಕೆಲಸ ಮಾಡುತ್ತೇವೆ. ಯಾರು ಸಹಕಾರ ಕೊಡುತ್ತಾರೋ ಬಿಡುತ್ತಾರೋ ಗೊತ್ತಿಲ್ಲ, ರಾಜ್ಯದ ಹಿತಸಾಕ್ತಿಗೆ ಕೆಲಸ ಮಾಡುತ್ತೇವೆ’ ಎಂದಿದ್ದಾರೆ.

ಕರ್ನಾಟಕ ಮಾಡೆಲ್ ದೇಶದ ಮಾಡೆಲ್ ಎಂದ ಡಿಕೆ ಶಿವಕುಮಾರ್​

‘ರಾಮಲಿಂಗಾರೆಡ್ಡಿ ಸಾರಿಗೆ ಸಚಿವರಾಗಿದ್ದಾಗ ಶಕ್ತಿ ಯೋಜನೆ ಜಾರಿ ಮಾಡಲಾಗಿದೆ. ಈಗ ಸುರೇಶ್​​ಗೆ ಸ್ಮಾರ್ಟ್ ಕಾರ್ಡ್ ಕೊಡುವ ಹೊಣೆ ವಹಿಸಿದ್ದೇವೆ. ಉದ್ಯೋಗದ ಸೃಷ್ಟಿ ಮಾಡುವುದಕ್ಕಾಗಿ ಯುವ ನಿಧಿ ಜಾರಿ ಮಾಡಿದ್ವಿ. ನಮ್ಮ ಯೋಜನೆಗಳನ್ನು ಬಿಜೆಪಿಯವರು ಕಾಪಿ ಮಾಡುತ್ತಿದ್ದಾರೆ. ಕರ್ನಾಟಕ ಮಾಡೆಲ್ ದೇಶದ ಮಾಡೆಲ್ ಆಗಿದೆ’ ಎಂದರು.

ರೈತರ ಭೂಮಿಯನ್ನು ಉಳುವ ಖರ್ಚು ಸರ್ಕಾರವೇ ಭರಿಸಲಿದೆ

‘ನೇಗಿಲ ಯೋಗಿ ಕಾರ್ಯಕ್ರಮದಡಿ ರೈತರ ಭೂಮಿಯನ್ನು ಉಳುವ ಖರ್ಚು ಸರ್ಕಾರವೇ ಭರಿಸಲಿದೆ. ನಗರದ ಯುವಕರಿಗೆ ಗ್ರಾಮೀಣ ಅನುಭವ ಆಗಲು ಹಳ್ಳಿಗಳಿಗೆ ಕಳಿಸಿ 3 ದಿನ ವಾಸ್ತವ್ಯ ಮಾಡಿಸೋದಕ್ಕೆ ಉತ್ತರ ಕರ್ನಾಟಕ ಭಾಗಕ್ಕೆ ಹಲವು ಹೊಸ ಕಾರ್ಯಕ್ರಮ ರೂಪಿಸಿದ್ದೇವೆ. ತೇಗದ ಸಿರಿ ಯೋಜನೆಯಡಿ ಕಾರ್ಯಕ್ರಮ ರೂಪಿಸಿದ್ದೇವೆ. ರಸ್ತೆ ಬದಿಯಲ್ಲಿ ಗಿಡ ಬೆಳೆಸೋದಕ್ಕೆ ಕಾರ್ಯಕ್ರಮ ರೂಪಿಸಿದ್ದೇವೆ, ಇದರಿಂದ ರೈತರಿಗೆ 70% ಹಣ ಸಿಗುತ್ತೆ’ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ಲೈಟಿಂಗ್ಸ್

‘ಡಾ.ಪರಮೇಶ್ವರ್ ಅವರಿಗೆ ಮತ್ತೊಂದು ಜವಾಬ್ದಾರಿ ಕೊಟ್ಟಿದ್ದೇವೆ. ಭಾರತ್ ಜೋಡೋ ಸಂಘಗಳ ಸ್ಥಾಪನೆ ಇದು ನನ್ನ ಕನಸು. ನಶೆ ಮುಕ್ತ ಕರ್ನಾಟಕ ಮಾಡೋದಕ್ಕೆ ನಿರ್ಧಾರ ಮಾಡಿದ್ದೇವೆ. ಸಚಿವ ಪ್ರಿಯಾಂಕ್ ಖರ್ಗೆ ಜತೆ ಮಾತಾಡಿದ್ದೇವೆ. ಪ್ರತಿ ಗ್ರಾ.ಪಂ.ನಲ್ಲಿ ಯುವಕ ಯುವತಿಯರು ಒಗ್ಗಟ್ಟಾಗಿ ಸೇರಬೇಕು. 10 ಸಾವಿರ ಭಾರತ್ ಜೋಡೋ ಯುವ ಸಂಘಟನೆ ಮಾಡಿದ್ದೇವೆ. ಯುವಕರಿಗೆ ಉದ್ಯೋಗ ಸೇತು ಹೊಸ ಕಾರ್ಯಕ್ರಮ ರೂಪಿಸಿದ್ದೇವೆ’ ಎಂದು ಅವರು ಹೇಳಿದರು.

ನನ್ನ ಬದುಕು ಸಾರ್ಥಕವಾಗುತ್ತಿದೆ ಎಂದ ಸಿಎಂ 

‘ನನ್ನ ಬದುಕು ಸಾರ್ಥಕವಾಗುತ್ತಿದೆ. ತುಂಗಭದ್ರ, ಕಾವೇರಿ, ಕೃಷ್ಣ ನದಿ ಜೋಡಣೆಗೆ ಮುಂದಾಗಿದ್ದೇವೆ. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಜೊತೆ ಚರ್ಚೆ ಮಾಡಿದ್ದೇನೆ. ತುಂಗಭದ್ರ ಡ್ಯಾಮ್​ನ ಎಲ್ಲಾ ಗೇಟ್​ ಬದಲಾವಣೆ ಮಾಡಿದ್ದೇವೆ. ಮೇಕೆದಾಟು ಕರ್ನಾಟಕದ ಯೋಜನೆ ಎಂಬ ತೀರ್ಪು ಬಂದಿದೆ. ತಮಿಳುನಾಡಿನ ಮುಖ್ಯಮಂತ್ರಿ ವಿಜಯ್​ಗೆ ಜ್ಞಾನ ಇದೆ. ಮುಂದೆ ಎಲ್ಲಾ ಜವಾಬ್ದಾರಿ ಚಲುವರಾಯಸ್ವಾಮಿಗೆ ಕೊಟ್ಟಿದ್ದೇವೆ’ ಎಂದು ಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ