AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಥಿ ಶಿಕ್ಷಕರನ್ನ ಮರೆತ ಸರ್ಕಾರ: ಕಳೆದ ನಾಲ್ಕು ತಿಂಗಳಿನಿಂದ ಬಂದಿಲ್ವಂತೆ ಸಂಬಳ!

ಕರ್ನಾಟಕದ ಸುಮಾರು 51,000 ಅತಿಥಿ ಶಿಕ್ಷಕರಿಗೆ ನವೆಂಬರ್ 2025ರಿಂದ ವೇತನ ಪಾವತಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ತಿಂಗಳಿಗೆ 10-12 ಸಾವಿರ ರೂ.ಗಳ ವೇತನದಲ್ಲಿ ಜೀವನ ನಡೆಸುವ ಶಿಕ್ಷಕರಿಗೆ ನಾಲ್ಕು ತಿಂಗಳ ಸಂಬಳ ಬಾಕಿ ಉಳಿದಿರುವುದು ತೀವ್ರ ತೊಂದರೆ ತಂದಿದೆ. ಇದು ಬೋಧನೆಯ ಗುಣಮಟ್ಟ ಮತ್ತು ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಶಿಕ್ಷಣ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ಬಾಕಿ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಲಾಗಿದೆ.

ಅತಿಥಿ ಶಿಕ್ಷಕರನ್ನ ಮರೆತ ಸರ್ಕಾರ: ಕಳೆದ ನಾಲ್ಕು ತಿಂಗಳಿನಿಂದ ಬಂದಿಲ್ವಂತೆ ಸಂಬಳ!
4 ತಿಂಗಳಿಂದ ಸಂಬಳ ಬಾರದ ಆರೋಪ
ಪ್ರಸನ್ನ ಹೆಗಡೆ
|

Updated on:Mar 11, 2026 | 6:40 PM

Share

ಬೆಂಗಳೂರು, ಮಾರ್ಚ್​ 11: ರಾಜ್ಯದ ಪೊಲೀಸ್​​ ಸಿಬ್ಬಂದಿಗೆ ಕಳೆದ ತಿಂಗಳಿನ ಸಂಬಳ ಇನ್ನೂ ಆಗಿಲ್ಲ ಎಂಬ ವಿಚಾರವಾಗಿ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದಿರುವ ನಡುವೆ ಮತ್ತೊಂದು ಆಘಾತಕಾರಿ ಸುದ್ದಿ ವರದಿಯಾಗಿದೆ. ಈಗಾಗಲೇ ಶಿಕ್ಷಕರ ಕೊರತೆಯಿಂದ ಬಳಲುತ್ತಿರುವ ಕರ್ನಾಟಕದ ಸರ್ಕಾರಿ ಶಾಲೆಗಳ ಸುಮಾರು 51,000 ಅತಿಥಿ ಶಿಕ್ಷಕರಿಗೆ (Guest Teachers) 2025ರ ನವೆಂಬರ್‌ನಿಂದ ಇಂದಿನವರೆಗೆ ವೇತನ ಪಾವತಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಮಾತನಾಡಿರುವ ಬೆಂಗಳೂರು ಲಿಂಕ್ ರೋಡ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿ ಸುರೇಖಾ, ನಮ್ಮ ಬೋಧನಾ ಅನುಭವದ ಆಧಾರದ ಮೇಲೆ ನಮಗೆ ತಿಂಗಳಿಗೆ 10,000ರಿಂದ 12,000 ವರೆಗೆ ವೇತನ ನೀಡಲಾಗುತ್ತದೆ. ಆದರೆ ನವೆಂಬರ್‌ನಿಂದ ಇಂದಿನವರೆಗೆ ನಮಗೆ ವೇತನ ಸಿಕ್ಕಿಲ್ಲ. ಈ ಬಗ್ಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘವು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮತ್ತು ಮುಖ್ಯ ಕಾರ್ಯದರ್ಶಿಗೆ ಪತ್ರ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ವೇತನ‌ ಸಿಗದೆ ಪೊಲೀಸ್ ಸಿಬ್ಬಂದಿ ಪರದಾಟ; ಸಂಬಳ ನೀಡಲೂ ಸರ್ಕಾರದ ಬಳಿ ಇಲ್ವಾ ಹಣ?

ಯಲಹಂಕದ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಮತ್ತೊಬ್ಬ ಶಿಕ್ಷಕರು ಮಾತನಾಡಿ, ನಾವು 12 ತಿಂಗಳು ಕೆಲಸ ಮಾಡಿದರೂ ನಮಗೆ 10 ತಿಂಗಳಷ್ಟೇ ವೇತನ ನೀಡಲಾಗುತ್ತದೆ. ಮಾರ್ಚ್ 31ರಂದು ನಮ್ಮ ಒಪ್ಪಂದ ಅವಧಿ ಮುಗಿಯುತ್ತದೆ. ನಂತರ ಶಾಲೆ ಹಾಗೂ ಇಲಾಖೆಯ ನಿರ್ಧಾರಕ್ಕೆ ಅನುಗುಣವಾಗಿ ನಮ್ಮ ಒಪ್ಪಂದವನ್ನು ನವೀಕರಿಸುವುದೋ ಅಥವಾ ಇಲ್ಲವೋ ಎಂಬುದು ತೀರ್ಮಾನವಾಗುತ್ತದೆ. ಸರ್ಕಾರ ಕನಿಷ್ಠ ನಮ್ಮ ಕಡಿಮೆ ವೇತನವನ್ನಾದರೂ ಸಮಯಕ್ಕೆ ಸರಿಯಾಗಿ ಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ನಡುವೆ ಶಿಕ್ಷಣ ತಜ್ಞ ಡಾ.ನಿರಂಜನಾರಾಧ್ಯ ವಿ.ಪಿ. ಅವರು ಅತಿಥಿ ಶಿಕ್ಷಕರ ವೇತನ ಪಾವತಿಗಾಗಿ ತಕ್ಷಣವೇ ನಿಧಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಶಿಕ್ಷಣದಲ್ಲಿ ಅತಿಥಿ ಶಿಕ್ಷಕರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಮೂರು ತಿಂಗಳಿಗೂ ಹೆಚ್ಚು ಕಾಲ ವೇತನ ಸಿಗದಿದ್ದರೆ ಅವರ ಜೀವನ ನಿರ್ವಹಣೆ ಕಷ್ಟವಾಗುತ್ತದೆ. ಇದರಿಂದ ಬೋಧನೆಯ ಗುಣಮಟ್ಟಕ್ಕೂ ಪರಿಣಾಮ ಬೀಳಬಹುದು ಮತ್ತು ಮಕ್ಕಳ ಕಲಿಕೆಯ ಮಟ್ಟವೂ ಕುಸಿಯಬಹುದು ಎಂದು ಅವರು ಎಚ್ಚರಿಸಿರೋದಾಗಿ ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:34 pm, Wed, 11 March 26

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ