AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

H1N1 Alert: ಕರ್ನಾಟಕದಲ್ಲಿ 4,000 ಗಡಿ ದಾಟಿದ H1N1 ಪ್ರಕರಣಗಳು!

ಕರ್ನಾಟಕದಲ್ಲಿ H1N1 ಸೋಂಕಿನ ಪ್ರಕರಣಗಳು 4,000ರ ಗಡಿ ದಾಟಿದ್ದು, ಆರೋಗ್ಯ ಇಲಾಖೆಯು ತೀವ್ರ ನಿಗಾ ವಹಿಸಿದೆ. ಹವಾಮಾನ ಬದಲಾವಣೆಯಿಂದ ಸೋಂಕು ಹರಡುತ್ತಿದ್ದು, ಆಸ್ಪತ್ರೆಗಳಲ್ಲಿ ಔಷಧ ಮತ್ತು ಪರೀಕ್ಷಾ ಕಿಟ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ. ಜ್ವರ ಹಾಗೂ ಉಸಿರಾಟದ ತೊಂದರೆ ಕಂಡುಬಂದಲ್ಲಿ ತಕ್ಷಣ ವೈದ್ಯಕೀಯ ನೆರವು ಪಡೆಯಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

H1N1 Alert: ಕರ್ನಾಟಕದಲ್ಲಿ 4,000 ಗಡಿ ದಾಟಿದ H1N1 ಪ್ರಕರಣಗಳು!
ಸಾಂದರ್ಭಿಕ ಚಿತ್ರ Image Credit source: gettyimages.com
ಭಾವನಾ ಹೆಗಡೆ
|

Updated on: Aug 23, 2026 | 10:50 AM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ H1N1 ಸೋಂಕಿನ ಪ್ರಕರಣಗಳ ಸಂಖ್ಯೆ 4,000ರ ಗಡಿ ದಾಟಿದೆ.
  • ಪರಿಸ್ಥಿತಿ ನಿಯಂತ್ರಿಸಲು ಆರೋಗ್ಯ ಇಲಾಖೆಯಿಂದ ತೀವ್ರ ಪರಿಶೀಲನೆ ಮತ್ತು ಮುನ್ನೆಚ್ಚರಿಕೆ.
  • ಆಸ್ಪತ್ರೆಗಳಲ್ಲಿ ಔಷಧಿ ಮತ್ತು ಚಿಕಿತ್ಸಾ ಸೌಲಭ್ಯ ಸಿದ್ಧವಾಗಿಟ್ಟುಕೊಳ್ಳಲು ಇಲಾಖೆ ಸೂಚನೆ.

ಬೆಂಗಳೂರು, ಆಗಸ್ಟ್ 23: ರಾಜ್ಯದಲ್ಲಿ H1N1 (ಇನ್‌ಫ್ಲುಯೆಂಜಾ ಎ) ಸೋಂಕಿನ ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿದ್ದು, ಪ್ರಕರಣಗಳ ಸಂಖ್ಯೆ 4,000ರ ಗಡಿ ದಾಟಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಪರಾಮರ್ಶಿಸಲು ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಬಿಗಿಗೊಳಿಸಲು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಮಗ್ರ ಪರಿಶೀಲನೆಗೆ ಮುಂದಾಗಿದೆ.

ಮಕ್ಕಳಲ್ಲಿ, ವೃದ್ಧರಲ್ಲಿ ಸೋಂಕಿನ ಲಕ್ಷಣಗಳು ಹೆಚ್ಚು

ರಾಜ್ಯಾದ್ಯಂತ ಹವಾಮಾನ ಬದಲಾವಣೆ ಮತ್ತು ಸಾಲು ಸಾಲು ಮಳೆಯಿಂದಾಗಿ ವೈರಲ್ ಸೋಂಕುಗಳು ವೇಗವಾಗಿ ಹರಡುತ್ತಿವೆ. ವಿಶೇಷವಾಗಿ ಬೆಂಗಳೂರು ನಗರ ಸೇರಿದಂತೆ ಹಲವು ಪ್ರಮುಖ ಜಿಲ್ಲೆಗಳಲ್ಲಿ H1N1 ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಸಣ್ಣ ಮಕ್ಕಳಲ್ಲಿ, ವೃದ್ಧರಲ್ಲಿ ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವ ವ್ಯಕ್ತಿಗಳಲ್ಲಿ ಈ ಸೋಂಕಿನ ಲಕ್ಷಣಗಳು ತೀವ್ರವಾಗಿ ಕಂಡುಬರುತ್ತಿವೆ.

ಮಾದರಿ ಪರೀಕ್ಷಾ ಕಿಟ್‌ಗಳನ್ನಿಡಲು ನಿರ್ದೇಶನ

ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿರುವ ಆರೋಗ್ಯ ಇಲಾಖೆಯು, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದೆ. ಆಸ್ಪತ್ರೆಗಳಲ್ಲಿ ಮಾದರಿ ಪರೀಕ್ಷಾ ಕಿಟ್‌ಗಳು, ‘ಟ್ಯಾಮಿಫ್ಲೂ’ (Tamiflu) ಸೇರಿದಂತೆ ಅಗತ್ಯ ಔಷಧಗಳು ಮತ್ತು ಐಸಿಯು ಹಾಸಿಗೆಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಆಡಳಿತ ಮಂಡಳಿಗಳಿಗೆ ನಿರ್ದೇಶನ ನೀಡಲಾಗಿದೆ.

ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಸೂಚನೆ

ಸಾರ್ವಜನಿಕರು ತೀವ್ರ ಜ್ವರ, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಅಥವಾ ದೇಹದಂಡನೆ ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವಂತೆ ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಸ್ವಯಂ ವೈದ್ಯಕೀಯ (Self-medication) ಚಿಕಿತ್ಸೆಯಿಂದ ದೂರವಿರಲು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು, ಕೈಗಳನ್ನು ಆಗಾಗ್ಗೆ ಸ್ವಚ್ಛಗೊಳಿಸುವಂತಹ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಸೂಚಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!