AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್‌ಗಳು ಇರುವ ರಾಜ್ಯ ಕರ್ನಾಟಕ

ಪೆಟ್ರೋಲ್ ವಾಹನಗಳ ಕ್ರೇಜ್ ಕಡಿಮೆಯಾಗಿದೆ. ಈಗ ಎಲ್ಲರೂ ಎಲೆಕ್ಟ್ರಿಕ್ ವಾಹನಗಳತ್ತ ಗಮನ ಹರಿಸುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣವೆಂದರೆ ವಾರ-ವಾರ, ಪ್ರತಿದಿನ, ಪೆಟ್ರೋಲ್​ಗೆ​​​ ದುಡ್ಡು ತೆರಬೇಕಿಲ್ಲ. ಚಾರ್ಜ್ ಮಾಡಿಕೊಂಡರೆ ಸಾಕು. ಪೆಟ್ರೋಲ್ ಗಾಡಿಗಿಂತ ಹೆಚ್ಚು ಪ್ರಯಾಣ ಮಾಡಬಹುದು. ಹೀಗಾಗಿ ಎಲೆಕ್ಟ್ರಿಕ್​​ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದ ಇವಿ ಚಾರ್ಜಿಂಗ್ ಸ್ಟೇಷನ್‌ಗಳು ಏರಿಕೆಯಾಗುತ್ತಿದ್ದು, ದೇಶದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ.

ಭಾರತದಲ್ಲಿ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್‌ಗಳು ಇರುವ ರಾಜ್ಯ ಕರ್ನಾಟಕ
ವಿದ್ಯುತ್​ ವಾಹನ ಚಾರ್ಜಿಂಗ್​ ಕೇಂದ್ರ
ವಿವೇಕ ಬಿರಾದಾರ
|

Updated on: Feb 19, 2024 | 7:59 AM

Share

ಬೆಂಗಳೂರು, ಫೆಬ್ರವರಿ 19: ಕರ್ನಾಟಕ (Karnataka) ರಾಜ್ಯ ಒಂದರಲ್ಲೇ 5,059 ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಸ್ಟೇಷನ್​ಗಳು (Public Electric Vehicle Charging Stations)​ ಇರುವ ಮೂಲಕ ರಾಜ್ಯ ದೇಶದಲ್ಲೇ ನಂಬರ್​ ಒನ್​ ಸ್ಥಾನದಲ್ಲಿದೆ. ಕೇಂದ್ರ ವಿದ್ಯುತ್ ಸಚಿವಾಲಯದ ಅಡಿಯಲ್ಲಿನ ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ) ಅಂಕಿಅಂಶಗಳ ಪ್ರಕಾರ, ಬೆಂಗಳೂರು ನಗರ ಜಿಲ್ಲೆಯಲ್ಲಿ 4,281ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳವೆ. ಅಂದರೆ ಶೇ 85 ರಷ್ಟು ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್​ಗಳು ಬೆಂಗಳೂರಿನಲ್ಲಿವೆ. ಕರ್ನಾಟಕದಲ್ಲಿ 2017 ರಲ್ಲಿ ಮೊದಲ ಎಲೆಕ್ಟ್ರಿಕ್ ವೆಹಿಕಲ್ (Electric Vehicle) ನೀತಿಯನ್ನು ಜಾರಿಯಾಯಿತು.

ಬೇರೆ ರಾಜ್ಯಗಳಲ್ಲಿನ ಇವಿ ಚಾರ್ಜಿಂಗ್​ ಸ್ಟೇಷನ್​ಗಳು

ಮಹಾರಾಷ್ಟ್ರ (3,079), ದೆಹಲಿ (1,886), ಕೇರಳ (958), ತಮಿಳುನಾಡು (643), ಉತ್ತರ ಪ್ರದೇಶ (583), ಮತ್ತು ರಾಜಸ್ಥಾನ (500) ಇವಿ ಚಾರ್ಜಿಂಗ್​ ಸ್ಟೇಷನ್​ಗಳಿವೆ. ಇನ್ನು ಹೆಚ್ಚಿಗೆ ಎಲೆಕ್ಟ್ರಿಕ್​ ವೆಹಿಕಲ್​ ಹೊಂದಿರುವ ರಾಜ್ಯಗಳನ್ನು ನೋಡುವುದಾರೆ, ಉತ್ತರ ಪ್ರದೇಶವು 7.45 ಲಕ್ಷದೊಂದಿಗೆ ಅಗ್ರಸ್ಥಾನದಲ್ಲಿದೆ. ಮಹಾರಾಷ್ಟ್ರ (4.15 ಲಕ್ಷ), ಮತ್ತು ಕರ್ನಾಟಕ (3.31 ಲಕ್ಷ) ನಂತರದ ಸ್ಥಾನದಲ್ಲಿದೆ.

ಇದನ್ನೂ ಓದಿ: Budget 2024: ಎಲೆಕ್ಟ್ರಿಕ್ ವಾಹನ ಹೆಚ್ಚಳಕ್ಕಾಗಿ ಕೇಂದ್ರದಿಂದ ಮಹತ್ವದ ಯೋಜನೆ

ಎಲೆಕ್ಟ್ರಿಕ್ ವಾಹನಗಳ ವ್ಯಾಪಾರ ಹೆಚ್ಚಿಸವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಕಳೆದ ವರ್ಷ ಪರಿಷ್ಕೃತ ಕರಡು ಇವಿ ನೀತಿಯನ್ನು (2023-28) ಪರಿಚಯಿಸಿತು. ಇದು ಒಂದು ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಜೊತೆಗೆ 50,000 ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸುವ ಗುರಿಯನ್ನು ಹೊಂದಿದೆ. ಕರ್ನಾಟಕದಲ್ಲಿ, ನೋಂದಾಯಿತ ಇವಿಗಳ ಸಂಖ್ಯೆ 2020 ರಲ್ಲಿ 9,703 ರಿಂದ 2021 ರಲ್ಲಿ 33,306, 2022 ರಲ್ಲಿ 95,892 ಮತ್ತು 2023 ರಲ್ಲಿ 1.52 ಲಕ್ಷಕ್ಕೆ ಏರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು