AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತರ ಮದ್ಯಪಾನಕ್ಕೆ ಹೈಕೋರ್ಟ್ ಬ್ರೇಕ್! ವಯಸ್ಸಿನ ಪರೀಕ್ಷೆ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಯಾರಿಗೆ ಶಿಕ್ಷೆ?

ಕರ್ನಾಟಕ ಹೈಕೋರ್ಟ್ ಪಬ್, ಬ್ರೀವರಿಗಳಲ್ಲಿ ಅಪ್ರಾಪ್ತರು ಮದ್ಯಪಾನ ಮಾಡುವುದಕ್ಕೆ ಕಡಿವಾಣ ಹಾಕಿದೆ. ಗ್ರಾಹಕರ ವಯಸ್ಸನ್ನು ಕಡ್ಡಾಯವಾಗಿ ಪರಿಶೀಲಿಸಲು ಆದೇಶಿಸಿದೆ. ಅಪ್ರಾಪ್ತರಿಗೆ ಮದ್ಯ ನೀಡಿದರೆ ಮಾಲೀಕರೇ ಸಂಪೂರ್ಣ ಹೊಣೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. 'ಅಪ್ರಾಪ್ತರಿಗೆ ಮದ್ಯ ನಿಷೇಧ' ಫಲಕಗಳು ಕಡ್ಡಾಯ. ಸಮಾಜದ ಹಿತದೃಷ್ಟಿಯಿಂದ ಈ ತೀರ್ಪು ಅತ್ಯಗತ್ಯ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಅಪ್ರಾಪ್ತರ ಮದ್ಯಪಾನಕ್ಕೆ ಹೈಕೋರ್ಟ್ ಬ್ರೇಕ್! ವಯಸ್ಸಿನ ಪರೀಕ್ಷೆ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಯಾರಿಗೆ ಶಿಕ್ಷೆ?
ಸಾಂದರ್ಭಿಕ ಚಿತ್ರ Image Credit source: Tv9 kannada
Ramesha M
| Edited By: |

Updated on: Mar 25, 2026 | 3:47 PM

Share

ಬೆಂಗಳೂರು, ಮಾ.25: ಪಬ್ ಮತ್ತು ಬ್ರೀವರಿಗಳಲ್ಲಿ ಅಪ್ರಾಪ್ತರು ಮದ್ಯಪಾನ ಮಾಡುವ ಪ್ರವೃತ್ತಿಗೆ ಕರ್ನಾಟಕ ಹೈಕೋರ್ಟ್ ಗಂಭೀರ ಕಡಿವಾಣ ಹಾಕಿದೆ. ಅಪ್ರಾಪ್ತರನ್ನು ಮದ್ಯಪಾನದ ವ್ಯಸನದಿಂದ ರಕ್ಷಿಸುವುದು ಆಡಳಿತ ಮಂಡಳಿಯ ನೈತಿಕ ಮತ್ತು ಶಾಸನಾತ್ಮಕ ಕರ್ತವ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಬ್ರೀವರಿಗಳಿಗೆ ಗ್ರಾಹಕರು ಪ್ರವೇಶಿಸುವಾಗಲೇ ಅವರ ವಯಸ್ಸನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಮದ್ಯ ಸರಬರಾಜು ಮಾಡುವ ಸಂದರ್ಭದಲ್ಲೂ ಸಿಬ್ಬಂದಿಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಆದೇಶಿಸಿದೆ.

“ಅಪ್ರಾಪ್ತರಿಗೆ ಮದ್ಯ ನೀಡಲಾಗುವುದಿಲ್ಲ” ಎಂಬ ಎಚ್ಚರಿಕೆ ಫಲಕಗಳನ್ನು ಪ್ರತಿಯೊಂದು ಬ್ರೀವರಿಯಲ್ಲಿ ಎದ್ದು ಕಾಣುವಂತೆ ಹಾಕಿರಬೇಕು. ಅಪ್ರಾಪ್ತರು ಬ್ರೀವರಿಗಳ ಒಳಗೆ ಕದ್ದುಮುಚ್ಚಿ ಮದ್ಯಪಾನ ಮಾಡಿದರೂ ಸಹ, ಅದಕ್ಕೆ ಅಲ್ಲಿನ ಆಡಳಿತ ಮಂಡಳಿಯೇ ಸಂಪೂರ್ಣ ಹೊಣೆಯಾಗುತ್ತದೆ. ಈ ಜವಾಬ್ದಾರಿಯಿಂದ ಮಾಲೀಕರು ನುಣುಚಿಕೊಳ್ಳಲು ಸಾಧ್ಯವಿಲ್ಲ.

ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್​​​ಗೆ ಮಾನಸಿಕ ತಪಾಸಣೆ ಮಾಡಿಸಿ, ಚುನಾವಣಾ ಆಯೋಗಕ್ಕೆ ಮನವಿ

ರಾಜರಾಜೇಶ್ವರಿ ನಗರದ ಬ್ರೀವರಿ ಮಾಲೀಕ ವಿ. ಚಿಟ್ಟಿಬಾಬು ವಿರುದ್ಧ ಅಪ್ರಾಪ್ತರಿಗೆ ಮದ್ಯ ಸರಬರಾಜು ಮಾಡಿದ ಆರೋಪದಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಮದ್ಯಪಾನದಿಂದ ಅಪ್ರಾಪ್ತರನ್ನು ಕಾಪಾಡುವುದು ಸಮಾಜದ ಹಿತದೃಷ್ಟಿಯಿಂದ ಅತ್ಯಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್