AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ಕಾರಣಗಳಿಂದ ಮೆರಿಟ್ ವಿದ್ಯಾರ್ಥಿನಿಗೆ ಅನ್ಯಾಯವಾಗಬಾರದು: ಅಂಕಪಟ್ಟಿ ತಡೆಹಿಡಿದಿದ್ದ NTA ಕ್ರಮ ರದ್ದುಗೊಳಿಸಿದ ಕೋರ್ಟ್

ನೀಟ್ ಪರೀಕ್ಷಾ ಕೇಂದ್ರದ ಆವರಣಕ್ಕೆ ಮೊಬೈಲ್ ಕೊಂಡೊಯ್ದ ಆರೋಪ ಹಿನ್ನೆಲೆ ವಿದ್ಯಾರ್ಥಿನಿಯ ಅಂಕಪಟ್ಟಿ ತಡೆಹಿಡಿದಿದ್ದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿದೆ. ಮೆರಿಟ್ ವಿದ್ಯಾರ್ಥಿನಿಗೆ ಅನ್ಯಾಯವಾಗಬಾರದೆಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದ್ದು, ಅಂಕಪಟ್ಟಿ ಬಿಡುಗಡೆಗೆ ಆದೇಶ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ತಾಂತ್ರಿಕ ಕಾರಣಗಳಿಂದ ಮೆರಿಟ್ ವಿದ್ಯಾರ್ಥಿನಿಗೆ ಅನ್ಯಾಯವಾಗಬಾರದು: ಅಂಕಪಟ್ಟಿ ತಡೆಹಿಡಿದಿದ್ದ NTA ಕ್ರಮ ರದ್ದುಗೊಳಿಸಿದ ಕೋರ್ಟ್
ಕರ್ನಾಟಕ ಹೈಕೋರ್ಟ್​
ರಮೇಶ್​ ಎಮ್​.
| Edited By: |

Updated on: Nov 19, 2026 | 10:38 PM

Share

ಮುಖ್ಯಾಂಶಗಳು

  • ನೀಟ್ ಪರೀಕ್ಷಾ ಕೇಂದ್ರದ ಆವರಣಕ್ಕೆ ಮೊಬೈಲ್ ಕೊಂಡೊಯ್ದ ಆರೋಪ
  • ವಿದ್ಯಾರ್ಥಿನಿ ಅಂಕಪಟ್ಟಿ ತಡೆಹಿಡಿದಿದ್ದ ಎನ್​ಟಿಎ ಕ್ರಮ ರದ್ದು
  • ನ್ಯಾ.ಎಂ. ನಾಗಪ್ರಸನ್ನ, ನ್ಯಾ. ಹೇಮಾ ಕುಲಕರ್ಣಿ ಅವರಿದ್ದ ಪೀಠ ಆದೇಶ

ಬೆಂಗಳೂರು, ನವೆಂಬರ್​ 19: ನೀಟ್ ಪರೀಕ್ಷಾ ಕೇಂದ್ರದ ಆವರಣಕ್ಕೆ ಮೊಬೈಲ್ ಕೊಂಡೊಯ್ದ ಆರೋಪ ಹಿನ್ನೆಲೆ ವಿದ್ಯಾರ್ಥಿನಿಯ ಅಂಕಪಟ್ಟಿ ತಡೆಹಿಡಿದಿದ್ದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್​ಟಿಎ) ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿದೆ. ರಾಣೆಬೆನ್ನೂರಿನ ಅನುಷ್ಕಾ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಹಾಗೂ ನ್ಯಾಯಮೂರ್ತಿ ಹೇಮಾ ಕುಲಕರ್ಣಿ ಅವರಿದ್ದ ಪೀಠ ತೀರ್ಪು ನೀಡಿದೆ.

ಪರೀಕ್ಷಾ ಕೊಠಡಿ ಪ್ರವೇಶಕ್ಕೂ ಮುನ್ನವೇ ಮೊಬೈಲ್ ವಶಕ್ಕೆ

ಮೇ 3ರಂದು ನಡೆದ ನೀಟ್ ಪರೀಕ್ಷೆಯ ಸಂದರ್ಭದಲ್ಲಿ ರಾಣೆಬೆನ್ನೂರಿನ ಅನುಷ್ಕಾ ಅವರು ಮೊಬೈಲ್ ಫೋನ್ ಅನ್ನು ಪರೀಕ್ಷಾ ಕೇಂದ್ರದ ಆವರಣಕ್ಕೆ ಕೊಂಡೊಯ್ದಿದ್ದರು. ಆದರೆ ಪರೀಕ್ಷಾ ಕೊಠಡಿ ಪ್ರವೇಶಿಸುವ ಮೊದಲೇ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ನೀಟ್ ಪರೀಕ್ಷೆ ರದ್ದುಗೊಂಡ ಹಿನ್ನೆಲೆಯಲ್ಲಿ ಜೂನ್ 21ರಂದು ಮರುಪರೀಕ್ಷೆ ನಡೆಸಲಾಗಿತ್ತು. ಮರುಪರೀಕ್ಷೆಯಲ್ಲಿ ವಿದ್ಯಾರ್ಥಿನಿ 570 ಅಂಕಗಳನ್ನು ಪಡೆದಿದ್ದರು.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವಂತಿಲ್ಲ, ಅದು ಮುಕ್ತ ಪರವಾನಗಿ ಅಲ್ಲ: ಕರ್ನಾಟಕ ಹೈಕೋರ್ಟ್

570 ಅಂಕ ಗಳಿಸಿದ್ದ ಅನುಷ್ಕಾಗೆ ಬೆಳಗಾವಿಯ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ದೊರೆತಿತ್ತು. ಆದರೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಅವರ ಅಂಕಪಟ್ಟಿಯನ್ನು ತಡೆಹಿಡಿದಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಮಧ್ಯಂತರ ಆದೇಶದ ಮೇರೆಗೆ ಅವರಿಗೆ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ದೊರೆತಿತ್ತು.

LIVE TV

ಅಂಕಪಟ್ಟಿ ತಡೆಹಿಡಿದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿನಿ ಮೊಬೈಲ್ ಬಳಸಿಲ್ಲ. ಹೀಗಿದ್ದರೂ ಅಂಕಪಟ್ಟಿಯನ್ನು ತಡೆಹಿಡಿದ ಎನ್‌ಟಿಎ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಿದ್ಯಾರ್ಥಿಯೊಬ್ಬಳು ಗಳಿಸಿದ ಅಂಕಗಳ ಹಿಂದೆ ಸಾಕಷ್ಟು ದಿನಗಳ ನಿದ್ದೆಯಿಲ್ಲದ ರಾತ್ರಿಗಳ ಪರಿಶ್ರಮ, ಹಲವು ವರ್ಷಗಳ ತ್ಯಾಗ ಮತ್ತು ವೈದ್ಯೆಯಾಗಬೇಕೆಂಬ ಕನಸು ಇರುತ್ತದೆ. ತಾಂತ್ರಿಕ ಕಾರಣಗಳಿಂದ ಅರ್ಹ ವಿದ್ಯಾರ್ಥಿನಿಗೆ ಅನ್ಯಾಯವಾಗಬಾರದು ಎಂದು ಅಭಿಪ್ರಾಯಪಟ್ಟಿರುವ ವಿಭಾಗೀಯ ಪೀಠ, ವಿದ್ಯಾರ್ಥಿನಿಯ ಅರ್ಜಿಯನ್ನು ಪುರಸ್ಕರಿಸಿ ಎನ್‌ಟಿಎ ಕ್ರಮವನ್ನು ರದ್ದುಗೊಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
‘ಮಹಾರಾಣಿ ಆಗಬಾರದು’ ಮಂಜಿಗೆ ನೇರವಾಗಿ ಹೇಳಿದ ಮಂಜ: ವಿಡಿಯೋ
‘ಮಹಾರಾಣಿ ಆಗಬಾರದು’ ಮಂಜಿಗೆ ನೇರವಾಗಿ ಹೇಳಿದ ಮಂಜ: ವಿಡಿಯೋ
ಶಿಕ್ಷಕರು ಬೈದಿದ್ದಕ್ಕೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಪರಾರಿ
ಶಿಕ್ಷಕರು ಬೈದಿದ್ದಕ್ಕೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಪರಾರಿ
ಸುಳ್ಳಿನಿಂದ ಕಲುಷಿತಗೊಂಡಿದ್ದ ಭೀಮಾನದಿ ಕ್ಲೀನ್ ಮಾಡಿದ ಪೌರ ಕಾರ್ಮಿಕರು
ಸುಳ್ಳಿನಿಂದ ಕಲುಷಿತಗೊಂಡಿದ್ದ ಭೀಮಾನದಿ ಕ್ಲೀನ್ ಮಾಡಿದ ಪೌರ ಕಾರ್ಮಿಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ