AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Menstrual leave: ಮಹಿಳೆಯರಿಗೆ ಋತುಚಕ್ರ ರಜೆ ನೀಡಿದ್ದ ಸರ್ಕಾರಕ್ಕೆ ಹೈಕೋರ್ಟ್​​ನಲ್ಲಿ ಭಾರಿ ಹಿನ್ನಡೆ

ಕರ್ನಾಟಕ ಸರ್ಕಾರವು ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ಮುಟ್ಟಿನ ರಜೆ ನೀಡುವ ಆದೇಶ ಹೊರಡಿಸಿತ್ತು. ಇದರ ವಿರುದ್ಧ ಬೆಂಗಳೂರು ಹೋಟೆಲ್‌ಗಳ ಸಂಘವು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಹೋಟೆಲ್ ಮಾಲೀಕರ ಸಂಘದ ವಾದ ಆಲಿಸಿ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದು, ಇದು ಖಾಸಗೀ ವಲಯಕ್ಕೆ ಮಾತ್ರ ಅನ್ವಯಿಸುತ್ತದೆ ಎಂದು ಸಂಘದ ಪರ ವಕೀಲ ಬಿ.ಕೆ ಪ್ರಶಾಂತ್ ಹೇಳಿದ್ದಾರೆ.

Menstrual leave: ಮಹಿಳೆಯರಿಗೆ ಋತುಚಕ್ರ ರಜೆ ನೀಡಿದ್ದ ಸರ್ಕಾರಕ್ಕೆ ಹೈಕೋರ್ಟ್​​ನಲ್ಲಿ ಭಾರಿ ಹಿನ್ನಡೆ
ಮಹಿಳೆಯರಿಗೆ ಋತುಚಕ್ರ ರಜೆ ನೀಡಿದ್ದ ಸರ್ಕಾರಕ್ಕೆ ಹೈಕೋರ್ಟ್​​ನಲ್ಲಿ ಭಾರಿ ಹಿನ್ನಡೆ
ಭಾವನಾ ಹೆಗಡೆ
|

Updated on:Dec 09, 2025 | 12:55 PM

Share

ಬೆಂಗಳೂರು, ಡಿಸೆಂಬರ್ 09: ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ಮುಟ್ಟಿನ ರಜೆಯನ್ನು (Menstrual Leave) ನೀಡಿದ ರಾಜ್ಯ ಸರ್ಕಾರದ ಇತ್ತೀಚಿನ ಆದೇಶದ ವಿರುದ್ಧ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ವಾದ ಆಲಿಸಿದ ಹೈ ಕೋರ್ಟ್​ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮಾನ್ಯ ಉಚ್ಚ ನ್ಯಾಯಾಲಯದ ಮುಂದೆ ಇಂದು ಅರ್ಜಿ ವಿಚಾರಣೆಗೆ ಬಂದಿದ್ದು, ಹೋಟೆಲ್ ಮಾಲೀಕರ ಸಂಘದ ಪರ ವಕೀಲರಾದ ಪ್ರಶಾಂತ್ ಬಿ.ಕೆ ವಾದ ಮಂಡಿಸಿದ್ದರು.

ರಾಜ್ಯ ಸರ್ಕಾರಕ್ಕೆ ಅಂತಹ ಆದೇಶವನ್ನು ವಿಧಿಸಲು ಅಧಿಕಾರವಿಲ್ಲವೆಂದ ಸಂಸ್ಥೆ

ಕರ್ನಾಟಕ ಸರ್ಕಾರ ನವೆಂಬರ್ 12ರಂದು ವೇತನ ಸಹಿತ ಮುಟ್ಟಿನ ರಜೆ ಕಡ್ಡಾಯಗೊಳಿಸುವ ನಿರ್ಧಾರ ತೆಗೆದುಕೊಂಡಿತ್ತು. ಕಾರ್ಮಿಕ ಇಲಾಖೆಯು ಕಾರ್ಖಾನೆ ಕಾಯ್ದೆ, ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆ ಸೇರಿದಂತೆ ಹಲವಾರು ಕಾರ್ಮಿಕ ಕಾನೂನುಗಳ ವ್ಯಾಪ್ತಿಗೆ ಬರುವ ಸಂಸ್ಥೆಗಳು ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆಯನ್ನು ಒದಗಿಸುವಂತೆ ಆದೇಶವನ್ನು ಹೊರಡಿಸಿತ್ತು.

ಆದರೆ ಇತ್ತೀಚೆಗೆ ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರಕ್ಕೆ ಅಂತಹ ಆದೇಶವನ್ನು ವಿಧಿಸಲು ಕಾರ್ಮಿಕ ಕಾನೂನುಗಳ ಪ್ರಕಾರ ಅಧಿಕಾರವಿಲ್ಲವೆಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಹೈಕೋರ್ಟ್​ ಮೆಟ್ಟಿಲೇರಿತ್ತು. ಸರ್ಕಾರವು 1948 ರ ಕಾರ್ಖಾನೆ ಕಾಯ್ದೆ, 1961 ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1951 ರ ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, 1966 ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು 1961 ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಂಸ್ಥೆಗಳಿಗೆ ಮೇಲೆ ತಿಳಿಸಿದ ನೀತಿಯನ್ನು ಅನುಸರಿಸಲು ನಿರ್ದೇಶನ ನೀಡುವ ಅಧಿಸೂಚನೆಯನ್ನು ಹೊರಡಿಸಿದೆ. ಆದರೆ ರಜೆ ನೀತಿಗಳು ವೈಯಕ್ತಿಕ ಸಂಸ್ಥೆಗಳಿಗೆ ಆಂತರಿಕ ಆಡಳಿತಾತ್ಮಕ ವಿಷಯವಾಗಿ ಉಳಿಯಬೇಕು ಎಂದು ಹೋಟೆಲ್ ಮಾಲೀಕರ ಸಂಘ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ Menstrual Leave: ಉದ್ಯೋಗಸ್ಥ ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರ ಉಡುಗೊರೆ, ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ

ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರ: ಹೈ ಕೋರ್ಟ್​

ಅಸೋಸಿಯೇಶನ್​ನ ಪರ ವಾದ ಆಲಿಸಿದ ನ್ಯಾ.ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠ ಋತುಚಕ್ರ ರಜೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಕಾಯ್ದೆಯಲ್ಲಿಲ್ಲದ ನಿಯಮವನ್ನು ಸರ್ಕಾರಿ ಆದೇಶದ ಮೂಲಕ ಜಾರಿಗೊಳಿಸಿದೆ. ಸರ್ಕಾರದ ಏಕಪಕ್ಷೀಯ ಆದೇಶದಿಂದ ಹೋಟೆಲ್​ಗಳಿಗೆ ಸಮಸ್ಯೆ ಎಂದು ಹೋಟೆಲ್ ಮಾಲೀಕರ ಸಂಘದ ಪರ ವಕೀಲರಾದ ಪ್ರಶಾಂತ್ ಬಿ.ಕೆ ವಾದ ಮಂಡಿಸಿದ್ದರು. ಆದೇಶಕ್ಕೆ ಮುನ್ನ ಸಂಘಟನೆಗಳ ಅಭಿಪ್ರಾಯ ಪಡೆಯಲಾಗಿತ್ತೆ ಎಂದು ಪ್ರಶ್ನೆ ಹಾಕಿದ ನ್ಯಾಯಮೂರ್ತಿಯವರಿಗೆ ಇಲ್ಲ ಎಂದು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ಉತ್ತರ ನೀಡಿದ್ದು, ಮುಂದಿನ ವಿಚಾರಣೆವರೆಗೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರವೆಂದು ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ.

ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಹೇಳಿದ್ದೇನು?

ಹೈ ಕೋರ್ಟ್​ ತಡೆಯಾಜ್ಞೆಗೆ ಪ್ರತಿಕ್ರಿಯಿಸಿದ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಗೌರವಾಧ್ಯಕ್ಷ ಪಿ ಸಿ ರಾವ್, ಸರ್ಕಾರ ಈ ಆದೇಶ ಮಾಡುವ ಮುನ್ನ ನಮ್ಮನ್ನು ಕರೆದು ಸರ್ಕಾರ ಚರ್ಚೆಯೇ ಮಾಡಿಲ್ಲ. ಆದೇಶದ ಸಾಧಕ ಬಾಧಕಗಳ ಬಗ್ಗೆ ಸರ್ಕಾರ ಅವಲೋಕನ ಮಾಡಿಯೇ ಇಲ್ಲ. ಈಗಾಗಲೇ ಖಾಸಗಿ ವಲಯದಲ್ಲಿ ಮಹಿಳಾ ನೌಕರರಿಗೆ ಸಾಕಷ್ಟು ರಜೆಗಳನ್ನು ನೀಡುತ್ತಿದ್ದೇವೆ. ಅದರ ಮೇಲೆ ಈಗ ವಾರ್ಷಿಕ 12 ರಜೆ ಕೊಡಬೇಕು ಅನ್ನುವುದು ಕಾನೂನಾತ್ಮಕವಾಗಿಲ್ಲ. ಹೀಗಾಗಿ ಆದೇಶ ಪ್ರಶ್ನೆ ಮಾಡಿ ಮಾನ್ಯ ಹೈಕೋರ್ಟ್ ಮೊರೆ ಹೋಗಿದ್ದೇವೆ. ನಮ್ಮ ಮನವಿಯನ್ನು ಆಲಿಸಿ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಈ ರೀತಿಯ ಆದೇಶಗಳಿಂದಾಗಿ ಉದ್ಯಮಗಳ ಮೇಲೆ ಭಾರೀ ಹೊಡೆತ ಬೀಳಲಿದೆ. ಮುಂದಿನ ದಿನಗಳಲ್ಲಾದರೂ ಸರ್ಕಾರ ನಮ್ಮನ್ನು ಕರೆದು ಚರ್ಚೆ ಮಾಡಲಿ ಎಂದಿದ್ದಾರೆ.

ವಕೀಲ ಪ್ರಶಾಂತ್ ಬಿ.ಕೆ ಹೇಳಿಕೆ

ಖಾಸಗಿ ವಲಯಕ್ಕೆ ಮಾತ್ರ ಈ‌ ಆದೇಶ ಅನ್ವಯವಾಗಲಿದೆ ಎಂದು ಹೇಳಿರುವ ವಕೀಲ ಪ್ರಶಾಂತ್, ನಾವು ಖಾಸಗಿ ವಲಯ ಸಂಬಂಧಪಟ್ಟಂತೆ ವಾದ ಮಂಡನೆ ಮಾಡಿದ್ದೇವೆ. ಆ ವಿಚಾರಕ್ಕೆ ಮಾತ್ರ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಚಳಿಗಾಲದ ಅಧಿವೇಶನ ಮುಗಿದ ಮೇಲೆ ಮತ್ತೆ ವಿಚಾರಣೆಗೆ ಬರಲಿದೆ ಎಂದು ಹೇಳಿದ್ದಾರೆ.

ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:25 am, Tue, 9 December 25

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್