AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಒಂದೆಡೆ ಮಳೆ, ಮತ್ತೊಂದೆಡೆ ಬಿಸಿಲು; ರೋಗಗಳ ಹರಡುವಿಕೆ ತಡೆಗೆ ಆರೋಗ್ಯ ಇಲಾಖೆ ಅಲರ್ಟ್

ರಾಜ್ಯದಲ್ಲಿ ಮಳೆ-ಬಿಸಿಲಿನ ವಿಚಿತ್ರ ಹವಾಮಾನ ವೈಪರೀತ್ಯವು ಆರೋಗ್ಯ ಇಲಾಖೆಗೆ ಸವಾಲಾಗಿದೆ. 'ಸೂಪರ್ ಎಲ್ ನಿನೊ' ಪರಿಣಾಮದಿಂದ ತಾಪಮಾನ ಏರಿಕೆ, ನಿರ್ಜಲೀಕರಣ, ಹೀಟ್‌ಸ್ಟ್ರೋಕ್ ಅಪಾಯವಿದ್ದರೆ, ಮಳೆಯಿಂದ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಿದೆ. ಮಕ್ಕಳ ಮತ್ತು ವೃದ್ಧರ ಆರೋಗ್ಯಕ್ಕೆ ಹೆಚ್ಚಿನ ಗಮನ ಬೇಕು. ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಹೈ ಅಲರ್ಟ್ ಘೋಷಿಸಿ, ಜನರಿಗೆ ನೀರು ಕುಡಿಯಲು, ಸುತ್ತಮುತ್ತ ಸ್ವಚ್ಛತೆ ಕಾಪಾಡಲು ಮನವಿ ಮಾಡಿದೆ.

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಒಂದೆಡೆ ಮಳೆ, ಮತ್ತೊಂದೆಡೆ ಬಿಸಿಲು; ರೋಗಗಳ ಹರಡುವಿಕೆ ತಡೆಗೆ ಆರೋಗ್ಯ ಇಲಾಖೆ ಅಲರ್ಟ್
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on:Sep 10, 2026 | 12:00 PM

Share

ಬೆಂಗಳೂರು, ಸೆ.10: ರಾಜ್ಯದಲ್ಲಿ ಒಂದೆಡೆ ಮಳೆಯ ವಾತಾವರಣವಿದ್ದರೆ, ಮತ್ತೊಂದೆಡೆ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಹವಾಮಾನದ ಈ ವಿಚಿತ್ರ ವೈಪರೀತ್ಯವು ಆರೋಗ್ಯ ಇಲಾಖೆಗೆ ಡಬಲ್ ಸವಾಲಾಗಿ ಪರಿಣಮಿಸಿದೆ. ಜಾಗತಿಕವಾಗಿ ‘ಸೂಪರ್ ಎಲ್ ನಿನೊ’ (Super El Niño) ಪರಿಣಾಮದಿಂದ ತಾಪಮಾನ ಏರಿಕೆಯಾಗುವ ಬೆನ್ನಲ್ಲೇ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ಹವಾಮಾನ ಬದಲಾವಣೆಯ ನೇರ ಪರಿಣಾಮ ಸಾರ್ವಜನಿಕರ ಆರೋಗ್ಯದ ಮೇಲೆ ಬೀರುವ ಆತಂಕ ವ್ಯಕ್ತವಾಗಿದೆ. ಹಠಾತ್ ತಾಪಮಾನ ಏರಿಕೆಯಿಂದ ದೇಹದಲ್ಲಿ ನೀರಿನ ಕೊರತೆ, ತೀವ್ರ ಸುಸ್ತು, ತಲೆನೋವು ಹಾಗೂ ಹೀಟ್‌ಸ್ಟ್ರೋಕ್ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಯಿದೆ.ಹವಾಮಾನದಲ್ಲಾಗುವ ದಿಢೀರ್ ಬದಲಾವಣೆಯಿಂದ ವೈರಲ್ ಜ್ವರ, ಕೆಮ್ಮು, ನೆಗಡಿ ಹಾಗೂ ಉಸಿರಾಟದ ತೊಂದರೆಗಳು ಮಕ್ಕಳಲ್ಲಿ ಮತ್ತು ವೃದ್ಧರಲ್ಲಿ ಹೆಚ್ಚಾಗುತ್ತಿವೆ.

ಇದನ್ನೂ ಓದಿ: ಕರ್ನಾಟಕ ಜಲಾಶಯಗಳ ಇಂದಿನ ನೀರಿನ ಮಟ್ಟ: ಆಲಮಟ್ಟಿ, ಬಸವಸಾಗರ ಭರ್ತಿ; ಕೆಆರ್‌ಎಸ್, ತುಂಗಭದ್ರಾ ಸ್ಥಿತಿಗತಿ ಇಲ್ಲಿದೆ

ಮತ್ತೊಂದೆಡೆ ಮಳೆ ಮುಂದುವರಿಯುತ್ತಿರುವುದರಿಂದ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ. ಇದರಿಂದಾಗಿ ಡೆಂಗ್ಯೂ, ಚಿಕೂನ್‌ಗುನ್ಯಾ ಹಾಗೂ ಮಲೇರಿಯಾದಂತಹ ಕೀಟಜನ್ಯ ಮತ್ತು ನೀರುಜನ್ಯ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಸಂಭಾವ್ಯ ಆರೋಗ್ಯ ಬಿಕ್ಕಟ್ಟನ್ನು ಎದುರಿಸಲು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಆರೋಗ್ಯ ಇಲಾಖೆಯು ಕಾರ್ಯಯೋಜನೆ ರೂಪಿಸಿದೆ:

1.ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಅಗತ್ಯ ಜೀವ ರಕ್ಷಕ ಔಷಧಿಗಳು, ಒಆರ್‌ಎಸ್ (ORS) ಪ್ಯಾಕೇಟ್‌ಗಳು ಹಾಗೂ ರಕ್ತ ಪರೀಕ್ಷಾ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ. 2.ಬೆಂಗಳೂರಿನ ಹವಾಮಾನ ವೈಪರೀತ್ಯವನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ತಳಮಟ್ಟದಲ್ಲಿ ನಿಗಾವಹಿಸಲು ಆದೇಶಿಸಲಾಗಿದೆ. 3.ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸುವುದು, ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಹಾಗೂ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಲು ಮನವಿ ಮಾಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:59 am, Thu, 10 September 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ