AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ ಎಚ್ಚರ: ಇನ್ಮುಂದೆ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ, ಉಲ್ಲಂಘನೆ ಮಾಡಿದ್ರೆ ಜೈಲು

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಪಾರಿವಾಳಗಳಿಗೆ ಆಹಾರ ಹಾಕೋಕೆ ಹೋಗಬೇಡಿ. ಪಾರಿವಾಳ ಇಷ್ಟ ಅಂತ ಪಬ್ಲಿಕ್ ಪ್ಲೇಸ್ ನಲ್ಲಿ ಕಾಳು ಹಾಕಿದ್ರೆ ಕಠಿಣ ಶಿಕ್ಷೆಗೆ ಗುರಿಯಾಗಬಹುದು. ಈ ಕುರಿತಾಗಿ ಕಟ್ಟುನಿಟ್ಟಿನ ನಿಯಮಗಳ ಅನುಷ್ಠಾನಕ್ಕೆ ಕರ್ನಾಟಕ ಆರೋಗ್ಯ ಇಲಾಖೆಯಿಂದ ನಗರಾಭಿವೃದ್ಧಿ ಇಲಾಖೆಗೆ ಖಡಕ್ ನಿರ್ದೇಶನ ನೀಡಿದೆ. ಹೀಗಾಗಿ ಯಾವುದಕ್ಕೂ ಪಾರಿವಾಳ ಪ್ರಿಯರು ಎಚ್ಚರಿಕೆಯಿಂದ ಇರುವುದು ಒಳಿತು. ಹಾಗಾದ್ರೆ, ಪಾರಿವಾಳಗಳಿಗ ಏಕೆ ಆಹಾರ ನೀಡಬಾರದು ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಎಚ್ಚರ ಎಚ್ಚರ: ಇನ್ಮುಂದೆ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ, ಉಲ್ಲಂಘನೆ ಮಾಡಿದ್ರೆ ಜೈಲು
ಪಾರಿವಾಳ
ರಮೇಶ್ ಬಿ. ಜವಳಗೇರಾ
|

Updated on:Dec 17, 2025 | 10:06 PM

Share

ಬೆಂಗಳೂರು, (ಡಿಸೆಂಬರ್ 17): ಸಿಲಿಕಾನ್ ಸಿಟಿ ಬೆಂಗಳೂರಲ್ಲಿ  (Bengaluru) ಇನ್ಮುಂದೆ ಪಾರಿವಾಳಗಳಿಗೆ (Pigeon) ಸಾರ್ವಜನಿಕ ಸ್ಥಳಗಳಲ್ಲಿ ಊಟ ಹಾಕುವಂತಿಲ್ಲ.ಒಂದು ವೇಳೆ ಪಾರಿವಾಳ ಇಷ್ಟ ಅಂತ ಕಾಳು ಹಾಕಿದ್ರೆ ದಂಡಕ್ಕೆ ಗುರಿಯಾಗಬಹುದು. ಹೌದು..ಹೀಗೊಂದು ಕಠಿಣ ನಿಯಮ ಜಾರಿಗೆ ತರಲು ಕರ್ನಾಟಕ ಆರೋಗ್ಯ (Karnataka Health Department) ಇಲಾಖೆಯು ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಿದೆ. ಯಾಕಂದ್ರೆ, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಕೊಡುತ್ತಿರುವುದರಿಂದ ಹಿಕ್ಕೆಗಳು ಹಾಗೂ ಅದರ ದುರ್ವಾಸನೆ ಜನಸಾಮಾನ್ಯರ ಆರೋಗ್ಯದ‌ ಮೇಲೆ ಪರಿಣಾಮ ಬೀರುತ್ತಿದೆ ಎನ್ನಲಾಗಿದೆ. ಹೀಗಾಗಿ ಈ ಕಟ್ಟುನಿಟ್ಟಿನ ರೂಲ್ಸ್ ಜಾರಿಗೆ ತರಲು ನಗರಾಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ.

ಪರಿವಾಳಗಳಿಗೆ ಏಕೆ ಆಹಾರ ಹಾಕಬಾರದು?

ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಫೀಡಿಂಗ್ ಮಾಡ್ತಿರೋದ್ರಿಂದ, ಪಾರಿವಾಳ ಹಿಕ್ಕೆಗಳು, ಹಾಗೂ ಅದರ ದುರ್ವಾಸನೆ ಜನಸಾಮಾನ್ಯರ ಆರೋಗ್ಯದ‌ ಮೇಲೆ ಪರಿಣಾಮ ಬೀರ್ತಿದೆ ಎನ್ನಲಾಗಿದೆ. ಹಾಗಾಗಿ, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಆರೋಗ್ಯ ಇಲಾಖೆ ನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿದೆ. ಜಿಬಿಎ ಪಾರಿವಾಳ ಫೀಡಿಂಗ್ ಗೆ ಒಂದು ಸ್ಥಳ ನಿಗಧಿ ಮಾಡಬೇಕು. ಸಿಕ್ಕ ಸಿಕ್ಕ ಕಡೆಯಲ್ಲಿ ಪಾರಿವಾಳ ಫೀಡಿಂಗ್ ಗೆ ಬ್ರೇಕ್ ಹಾಕಬೇಕು. ಈ ಸಂಬಂಧ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ನಿರ್ದೇಶನ ನೀಡಲು ಆರೋಗ್ಯ ಇಲಾಖೆ ಒತ್ತಾಯಿಸಿದೆ.

ಇದನ್ನೂ ಓದಿ: Dog Bite Relief Fund: ನಾಯಿ ಕಚ್ಚಿ ಸಾವನ್ನಪ್ಪಿದವರಿಗೆ 5 ಲಕ್ಷ ರೂ.ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ

ಪಾರಿವಾಳಗಳ ಹಿಕ್ಕೆಗಳು ಮತ್ತು ರೆಕ್ಕೆಗಳಿಂದ ಶ್ವಾಸಕೋಶ ಸಂಬಂಧಿತ ಕಾಯಿಲೆಗಳ ಭೀತಿ ಹೆಚ್ಚಿದ್ದು, ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಉಸಿರಾಟದ ಸಮಸ್ಯೆ ಹೊಂದಿರುವ ದುರ್ಬಲ ವ್ಯಕ್ತಿಗಳಲ್ಲಿ ರೋಗ ಉಲ್ಬಣವಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹಾಗಾಗಿ, ಪಾರಿವಾಳಗಳಿಗೆ ಎಲ್ಲೆಂದರಲ್ಲಿ ಆಹಾರ ಹಾಕಿ ನಿಯಮ ಉಲ್ಲಂಘನೆ ಮಾಡಿದ್ರೆ, ಅಂತವರ ವಿರುದ್ಧ ಬಿಎನ್‌ಎಸ್ ಸೆಕ್ಷನ್ 270, 271 ಮತ್ತು 272 ಅಡಿಯಲ್ಲಿ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ. ದಂಡದ ಜೊತೆಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅಧಿಕಾರವಿದೆ ಎಂದು ತಿಳಿಸಲಾಗಿದೆ. ಅದರೆ,ಇದಕ್ಕೆ ಪ್ರಾಣಿ ಪ್ರಿಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಪ್ರತಿಕ್ರಿಯಿಸಿದ್ದು, ನಗರಾಭಿವೃದ್ಧಿ ಇಲಾಖೆಯಿಂದ ಆದೇಶಕ್ಕೆ ಕಾಯುತ್ತಿದ್ದೇವೆ. ಮಾರ್ಗಸೂಚಿ ರಚನೆ ಮಾಡಿ, ನಿಗದಿತ ಸ್ಥಳಗಳನ್ನ ಗುರುತಿಸಲಾಗುವುದು ಎಂದಿದ್ದಾರೆ.

ಒಟ್ಟಿನಲ್ಲಿ ಇನ್ಮುಂದೆ ಪಾರಿವಾಳ ಇಷ್ಟ ಅಂತ ಸಿಕ್ಕ ಸಿಕ್ಕಲ್ಲಿ ಕಾಳು ಹಾಕೋಕೆ ಹೋಗ್ಬೇಡಿ. ಒಂದು ವೇಳೆ ಕಾಳು ಹಾಕಿ ಕೇಸ್ ಹಾಕಿಸಿಕೊಳ್ಳಬೇಕಾಗುತ್ತೆ ಎಚ್ಚರ.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

Published On - 10:04 pm, Wed, 17 December 25

ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ