Monkeypox: ಕರ್ನಾಟಕದಲ್ಲಿ ಮುನ್ನೆಚ್ಚರಿಕೆ, ಎಲ್ಲ ಜಿಲ್ಲೆಗಳಲ್ಲಿ ಎರಡು ಬೆಡ್​ಗಳ ಪ್ರತ್ಯೇಕ ವಾರ್ಡ್​ ಮೀಸಲಿಡಲು ಸೂಚನೆ

WHO ಮಂಕಿಪಾಕ್ಸ್​ ಕಾಯಿಲೆಯನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದ ಬೆನ್ನಿಗೇ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯೂ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಅಗತ್ಯ ಸೂಚನೆ ರವಾನಿಸಿದೆ.

Monkeypox: ಕರ್ನಾಟಕದಲ್ಲಿ ಮುನ್ನೆಚ್ಚರಿಕೆ, ಎಲ್ಲ ಜಿಲ್ಲೆಗಳಲ್ಲಿ ಎರಡು ಬೆಡ್​ಗಳ ಪ್ರತ್ಯೇಕ ವಾರ್ಡ್​ ಮೀಸಲಿಡಲು ಸೂಚನೆ
ಮಂಕಿಪಾಕ್ಸ್​Image Credit source: Hindustan Times
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 26, 2022 | 9:27 AM

ಬೆಂಗಳೂರು: ದೆಹಲಿಯಲ್ಲಿ ಪ್ರವಾಸದ ಇತಿಹಾಸ (Travel History) ಇಲ್ಲದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್​ ಪತ್ತೆಯಾದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಆತಂಕದ ಛಾಯೆ ಕಂಡುಬಂದಿದೆ. ನೆರೆಯ ಕೇರಳದಲ್ಲಿ ಮೂರು ಮಂಕಿಪಾಕ್ಸ್​ ಸೋಂಕಿನ ಹಲವು ಪ್ರಕರಣಗಳು ವರದಿಯಾಗಿದ್ದರಿಂದ್ದ ಗಡಿಯಲ್ಲಿ ಕರ್ನಾಟಕ ಕಟ್ಟೆಚ್ಚರ ವಹಿಸಿತ್ತು. ವಿಶ್ವ ಆರೋಗ್ಯ ಸಂಸ್ಥೆಯು (World Health Organisation – WHO) ಮಂಕಿಪಾಕ್ಸ್​ ಕಾಯಿಲೆಯನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದ ಬೆನ್ನಿಗೇ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯೂ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಅಗತ್ಯ ಸೂಚನೆ ರವಾನಿಸಿದೆ.

ನೂರಾರು ದೇಶಗಳಲ್ಲಿ ಈಗಾಗಲೇ ಸಾವಿರಾರು ಮಂದಿಯಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿದೆ. ಪ್ರಕರಣ ಪತ್ತೆ ಹಿನ್ನಲೆಯಲ್ಲಿ ತಜ್ಞರು ಎಚ್ಚರಿಕೆಯಿಂದ ಇರುವಂತೆ ನೀಡಿದ್ದಾರೆ. ಭಾರತದಲ್ಲಿ ಪತ್ತೆಯಾದ 4ನೇ ಮಂಕಿಪಾಕ್ಸ್ ಪ್ರಕರಣದ ರೋಗಿಗೆ ಟ್ರಾವೆಲ್ ಹಿಸ್ಟರಿ ಇರಲಿಲ್ಲ. ಹೀಗಾಗಿ ದೇಶದಲ್ಲಿಯೂ ಆತಂಕ ವ್ಯಕ್ತವಾಗಿದೆ.

ತಜ್ಞರ ಸಲಹೆಯಂತೆ ಮುನ್ನಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದ ಎಲ್ಲ ಜಿಲ್ಲಾ ವೈದ್ಯಾಧಿಕಾರಿಗಳು, ಸಿಎಚ್​ಒ, ಜಿಲ್ಲಾ ಆಸ್ಪತ್ರೆಗಳ ನಿರ್ದೇಶಕರ ಜೊತೆಗೆ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸಭೆ ನಡೆಸಿದ್ದರು. ಪ್ರತಿ ಜಿಲ್ಲಾ ಕೇಂದ್ರಗಳಲ್ಲಿಯೂ ಎರಡು ಬೆಡ್​ಗಳ ಪ್ರತ್ಯೇಕ ವಾರ್ಡ್ ಮೀಸಲಿರಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಸಿವಿ ರಾಮನ್ ಆಸ್ಪತ್ರೆ ಹಾಗೂ ಕೆಸಿ ಜನರಲ್ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಮಂಕಿಪಾಕ್ಸ್ ವಾರ್ಡ್ ರೂಪಿಸಲು ಸಿದ್ಧತೆ ನಡೆಯುತ್ತಿದೆ. ಸಂಪೂರ್ಣ ಐಸೋಲೇಶನ್ ವಾರ್ಡ್ ಸಿದ್ದಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published On - 9:27 am, Tue, 26 July 22

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ