AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ: ರಾಜ್ಯದಲ್ಲಿ ಮತ್ತೆ ರಸ್ತೆಗಿಳಿಯಲಿವೆ ಬೈಕ್​ ಆ್ಯಂಬುಲೆನ್ಸ್​​ಗಳು

Bengaluru News: ಬೆಂಗಳೂರಿನ ಟ್ರಾಫಿಕ್ ದಟ್ಟಣೆಯಲ್ಲಿ ತುರ್ತು ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ, ಸ್ಥಗಿತಗೊಂಡಿದ್ದ 'ಬೈಕ್ ಆ್ಯಂಬುಲೆನ್ಸ್' ಯೋಜನೆಯನ್ನು ರಾಜ್ಯದಲ್ಲಿ ಮರುಜಾರಿಗೊಳಿಸಲು ಆರೋಗ್ಯ ಇಲಾಖೆ ಮಹತ್ವದ ಸಿದ್ಧತೆ ನಡೆಸಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಬೈಕ್ ಆ್ಯಂಬುಲೆನ್ಸ್​​ಗಳು ಸೇವೆ ನೀಡುತ್ತಿವೆ. ಹೀಗಾಗಿ ನಮ್ಮಲ್ಲೂ ಈ ಸೇವೆಯನ್ನು ಆದಷ್ಟು ಬೇಗ ಮತ್ತೆ ಆರಂಭಿಸುತ್ತೇವೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್​​ ಮಾಹಿತಿ ನೀಡಿದ್ದಾರೆ.

ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ: ರಾಜ್ಯದಲ್ಲಿ ಮತ್ತೆ ರಸ್ತೆಗಿಳಿಯಲಿವೆ ಬೈಕ್​ ಆ್ಯಂಬುಲೆನ್ಸ್​​ಗಳು
ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ
ವಿನಯ್​ ಕಾಶಪ್ಪನವರ್​
| Edited By: |

Updated on:Jun 24, 2026 | 5:24 PM

Share

ಮುಖ್ಯಾಂಶಗಳು

  • ಆರೋಗ್ಯ ಇಲಾಖೆಯಿಂದ ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​
  • ಬೈಕ್​​ ಆ್ಯಂಬುಲೆನ್ಸ್​​ ಸೇವೆ ಪುನರಾರಂಭಕ್ಕೆ ಇಲಾಖೆ ನಿರ್ಧಾರ
  • ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಸಚಿವ ಖಾದರ್​​

ಬೆಂಗಳೂರು, ಜೂನ್​​ 24: ಟ್ರಾಫಿಕ್​​ ಸಮಸ್ಯೆಯಿಂದ ಸಕಾಲಕ್ಕೆ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವುದು ಕಷ್ಟವಾಗುತ್ತಿರುವ ನಡುವೆ ಆರೋಗ್ಯ ಇಲಾಖೆ ಬೆಂಗಳೂರಿಗರಿಗೆ (Bengaluru) ಗುಡ್​​ ನ್ಯೂಸ್​​ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಬೈಕ್ ಆ್ಯಂಬ್ಯುಲೆನ್ಸ್ ಸೇವೆ ಪುನರಾರಂಭಕ್ಕೆ ಚಿಂತನೆ ನಡೆದಿದ್ದು, ಈ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್​​ ಕೂಡ ಬಹಳ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಈ ಹಿಂದೆ ಖಾದರ್​​ ಆರೋಗ್ಯ ಸಚಿವರಾಗಿದ್ದ ವೇಳೆಯೇ ರಾಜ್ಯದಲ್ಲಿ ಬೈಕ್​​ ಆ್ಯಂಬುಲೆನ್ಸ್​​ ಸೇವೆ ಪರಿಚಯಿಸಲಾಗಿತ್ತು ಎಂಬುದಿಲ್ಲಿ ಗಮನಾರ್ಹ.

2015ರ ಏಪ್ರಿಲ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಬೈಕ್ ಆ್ಯಂಬ್ಯುಲೆನ್ಸ್​​ಗಳು ರಸ್ತೆಗಿಳಿದಿದ್ದವು. ರಾಜ್ಯದ್ಯಾಂತ ಒಟ್ಟು 30 ಬೈಕ್ ಆ್ಯಂಬ್ಯುಲೆನ್ಸ್ಗಳನ್ನು ಸೇವೆಗೆ ನಿಯೋಜಿಸಲಾಗಿತ್ತು. ಆದರೆ 8 ವರ್ಷಗಳ ಬಳಿಕ ಬೈಕ್ ರಿಪೇರಿಗೆ ಅನುದಾನದ ಕೊರತೆ, ಸಿಬ್ಬಂದಿ ಸಂಬಳದ ವಿಚಾರ ಸೇರಿ ನಾನಾ ಕಾರಣಗಳಿಂದಾಗಿ ಮಹತ್ವದ ಯೋಜನೆ ನಿಂತಿತ್ತು. ಇದೀಗ ರಾಜ್ಯದ ಆರೋಗ್ಯ ಸಚಿವರಾಗಿ ಯು.ಟಿ. ಖಾದರ್​​ ಮತ್ತೆ ಅಧಿಕಾರ ಸ್ವೀಕಾರದ ಬೆನ್ನಲ್ಲೇ ಈ ಸೇವೆ ಪುನರಾರಂಭಕ್ಕೆ ಚಿಂತನೆ ನಡೆಸಲಾಗಿದೆ. ಈ ಸಂಬಂಧ ಸಚಿವರು ಅಧಿಕಾರಿಗಳ ಸಭೆ ಕೂಡ ನಡೆಸಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಬಹಳ ಸುಲಭವಾಗಿ ಸಿಗಲಿದೆ ಸರ್ಕಾರಿ ಆ್ಯಂಬುಲೆನ್ಸ್ ಸೇವೆ! ದೇಶದಲ್ಲೇ ಪ್ರಥಮ ವಿನೂತನ ಕಮಾಂಡ್ ಸೆಂಟರ್ ಲೋಕಾರ್ಪಣೆ

ಬೈಕ್​​ ಆ್ಯಂಬುಲೆನ್ಸ್​​ಗಳ ವಿಶೇಷತೆ ಏನು?

  • ರೋಗಿಗಳಿಗೆ ಸುಲಭವಾಗಿ ತಕ್ಷಣ ಚಿಕಿತ್ಸೆ ಒದಗಿಸಲು ಸಾಧ್ಯ
  • ಟ್ರಾಫಿಕ್ ಸಮಯದಲ್ಲಿಯೂ ರೋಗಿಯ ಬಳಿ ಸುಲಭವಾಗಿ ತಲುಪಬಹುದು
  • ಆ್ಯಂಬುಲೆನ್ಸ್​​ಗಳ ಮಾದರಿಯಲ್ಲೇ ಇವು ಆಕ್ಸಿಜನ್ ಸಿಲಿಂಡರ್, ಫಸ್ಟ್ ಏಡ್ ಕಿಟ್, ಲೈಫ್ ಸೇವಿಂಗ್ ಮೆಡಿಸಿನ್, ಆಕ್ಸಿಮೀಟರ್, ಗ್ಲೂಕೋಮೀಟರ್, ಡ್ರೆಸಿಂಗ್ ಸಾಮಗ್ರಿಗಳನ್ನು ಹೊಂದಿರಲಿವೆ
  • ಕೆಲ ಬೈಕ್​​ಗಳಲ್ಲಿ ಸೈಡ್ ಕ್ಯಾರೇಜ್ ಅಳವಡಿಸುವ ಕಾರಣ ರೋಗಿ ಮಲಗಲು ಅನುಕೂಲ ಮಾಡುವ ವ್ಯವಸ್ಥೆಯೂ ಇರಲಿದೆ

ಯು.ಟಿ. ಖಾದರ್​​ ಮಾಹಿತಿ

ಇನ್ನು ಈ ಸಂಬಂಧ ಪ್ರತಿಕ್ರಿಯಿಸಿರುವ ಸಚಿವ ಯು.ಟಿ. ಖಾದರ್​​, 108 ಆ್ಯಂಬುಲೆನ್ಸ್ ಹಾಗೂ ಬೈಕ್ ಆ್ಯಂಬುಲೆನ್ಸ್ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಬೇರೆ ಬೇರೆ ರಾಜ್ಯಗಳಲ್ಲಿ ಬೈಕ್ ಆ್ಯಂಬುಲೆನ್ಸ್​​ಗಳು ಸೇವೆ ನೀಡುತ್ತಿವೆ. ಹೀಗಾಗಿ ನಮ್ಮಲ್ಲೂ ಈ ಸೇವೆಯನ್ನು ಆದಷ್ಟು ಬೇಗ ಮತ್ತೆ ಆರಂಭಿಸುತ್ತೇವೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:19 pm, Wed, 24 June 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ