AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ, ರಾಯಚೂರಿನಲ್ಲೇ ಅತಿ ಹೆಚ್ಚು ಫೇಕ್ ಡಾಕ್ಟರ್ಸ್: 582 ಕ್ಲಿನಿಕ್‌ಗಳ ವಿರುದ್ಧ ಆರೋಗ್ಯ ಇಲಾಖೆಯಿಂದ ಶಿಸ್ತುಕ್ರಮ

ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯದ ಸುರಕ್ಷತೆಗಾಗಿ ಕರ್ನಾಟಕ ಆರೋಗ್ಯ ಇಲಾಖೆಯು ಅನಧಿಕೃತ ಮತ್ತು ನಕಲಿ ಕ್ಲಿನಿಕ್‌ಗಳ ವಿರುದ್ಧ ಭಾರಿ ಕಾರ್ಯಾಚರಣೆ ನಡೆಸಿದೆ. 2024-26ರ ಅವಧಿಯಲ್ಲಿ 582 ಕ್ಲಿನಿಕ್‌ಗಳ ಮೇಲೆ ಕ್ರಮ ಜರುಗಿಸಿದ್ದು, 29 ನಕಲಿ ವೈದ್ಯರ ವಿರುದ್ಧ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ಕಲಬುರಗಿ ಮತ್ತು ರಾಯಚೂರಿನಲ್ಲಿ ಇವುಗಳ ಹಾವಳಿ ಹೆಚ್ಚಿದೆ. ಸಾರ್ವಜನಿಕರು ಚಿಕಿತ್ಸೆ ಪಡೆಯುವ ಮುನ್ನ ವೈದ್ಯರ ಅರ್ಹತೆ ಪರಿಶೀಲಿಸುವಂತೆ ಇಲಾಖೆ ಸೂಚಿಸಿದೆ.

ಕಲಬುರಗಿ, ರಾಯಚೂರಿನಲ್ಲೇ ಅತಿ ಹೆಚ್ಚು ಫೇಕ್ ಡಾಕ್ಟರ್ಸ್: 582 ಕ್ಲಿನಿಕ್‌ಗಳ ವಿರುದ್ಧ ಆರೋಗ್ಯ ಇಲಾಖೆಯಿಂದ ಶಿಸ್ತುಕ್ರಮ
ಸಾಂದರ್ಭಿಕ ಚಿತ್ರ Image Credit source: Google
ವಿನಯ್​ ಕಾಶಪ್ಪನವರ್​
| Edited By: |

Updated on: Sep 07, 2026 | 4:35 PM

Share

ಬೆಂಗಳೂರು, ಸೆ.7: ರಾಜ್ಯದಲ್ಲಿ ಸಾರ್ವಜನಿಕರ ಜೀವದ ಜೊತೆ ಆಟವಾಡುತ್ತಿದ್ದ ಅನಧಿಕೃತ ಹಾಗೂ ನಕಲಿ ಕ್ಲಿನಿಕ್‌ಗಳ ವಿರುದ್ಧ ಕರ್ನಾಟಕ ಆರೋಗ್ಯ ಇಲಾಖೆ ಸಮರ ಸಾರಿದೆ. 2024ರಿಂದ 2026ರ ಅವಧಿಯಲ್ಲಿ ಇಲಾಖೆಯು ರಾಜ್ಯಾದ್ಯಂತ ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 582 ಕ್ಲಿನಿಕ್‌ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿದೆ.

ತನಿಖೆಯ ವೇಳೆ ಪತ್ತೆಯಾದ ಬಹುತೇಕ ನಕಲಿ ವೈದ್ಯರು ಹಾಗೂ ಅನಧಿಕೃತ ಕ್ಲಿನಿಕ್ ಪ್ರಕರಣಗಳು ಗ್ರಾಮೀಣ ಭಾಗಗಳಲ್ಲೇ ಹೆಚ್ಚಾಗಿ ಕಂಡುಬಂದಿರುವುದು ಸಾರ್ವಜನಿಕರಲ್ಲಿ ತೀವ್ರ ಕಳವಳ ಮೂಡಿಸಿನಿಯಮ ಉಲ್ಲಂಘಿಸಿ ನಡೆಸಲಾಗುತ್ತಿದ್ದ 582 ಕ್ಲಿನಿಕ್‌ಗಳಲ್ಲಿ 87 ಮಂದಿಗೆ ದಂಡ ವಿಧಿಸಲಾಗಿದೆ.

ಅರ್ಹತೆ ಇಲ್ಲದೆ ಚಿಕಿತ್ಸೆ ನೀಡುತ್ತಿದ್ದ 29 ನಕಲಿ ವೈದ್ಯರ ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ. ರಾಜ್ಯದಲ್ಲಿ ದಾಖಲಾಗಿರುವ ನಕಲಿ ವೈದ್ಯರ ಹಾಗೂ ಅನಧಿಕೃತ ಕ್ಲಿನಿಕ್‌ಗಳ ಜಿಲ್ಲಾವಾರು ವಿವರ ಹೀಗಿದೆ:

ಜಿಲ್ಲೆ ದಾಖಲಾದ ಪ್ರಕರಣಗಳು
ಕಲಬುರಗಿ (ಅತಿ ಹೆಚ್ಚು) 127
ರಾಯಚೂರು 124
ಧಾರವಾಡ 75
ಕೋಲಾರ 31
ವಿಜಯಪುರ 24
ಬಳ್ಳಾರಿ 23
ದಕ್ಷಿಣ ಕನ್ನಡ 20
ಚಿಕ್ಕಬಳ್ಳಾಪುರ 17
ಬೆಂಗಳೂರು ನಗರ 16
ಕೊಪ್ಪಳ 14

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧದ ವಿವಾದಾತ್ಮಕ ಪೋಸ್ಟ್ ಪ್ರಕರಣ: ಆರಗ ಜ್ಞಾನೇಂದ್ರ ಆಪ್ತನಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ನಕಲಿ ವೈದ್ಯರ ಹಾವಳಿ ಮಿತಿಮೀರಿದ್ದು, ಶೇಕಡಾ ೪೦ಕ್ಕೂ ಹೆಚ್ಚು ಪ್ರಕರಣಗಳು ಈ ಎರಡು ಜಿಲ್ಲೆಗಳಲ್ಲೇ ಬೆಳಕಿಗೆ ಬಂದಿವೆ. ಸಾರ್ವಜನಿಕರು ಯಾವುದೇ ಕ್ಲಿನಿಕ್‌ಗಳಿಗೆ ತೆರಳುವ ಮುನ್ನ ವೈದ್ಯರ ಅರ್ಹತೆ ಹಾಗೂ ಕೆಪಿಎಂಇ (KPME) ನೋಂದಣಿಯನ್ನು ಪರಿಶೀಲಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್