
ಬೆಂಗಳೂರು, ಸೆ.7: ರಾಜ್ಯದಲ್ಲಿ ಸಾರ್ವಜನಿಕರ ಜೀವದ ಜೊತೆ ಆಟವಾಡುತ್ತಿದ್ದ ಅನಧಿಕೃತ ಹಾಗೂ ನಕಲಿ ಕ್ಲಿನಿಕ್‌ಗಳ ವಿರುದ್ಧ ಕರ್ನಾಟಕ ಆರೋಗ್ಯ ಇಲಾಖೆ ಸಮರ ಸಾರಿದೆ. 2024ರಿಂದ 2026ರ ಅವಧಿಯಲ್ಲಿ ಇಲಾಖೆಯು ರಾಜ್ಯಾದ್ಯಂತ ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 582 ಕ್ಲಿನಿಕ್‌ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿದೆ.
ತನಿಖೆಯ ವೇಳೆ ಪತ್ತೆಯಾದ ಬಹುತೇಕ ನಕಲಿ ವೈದ್ಯರು ಹಾಗೂ ಅನಧಿಕೃತ ಕ್ಲಿನಿಕ್ ಪ್ರಕರಣಗಳು ಗ್ರಾಮೀಣ ಭಾಗಗಳಲ್ಲೇ ಹೆಚ್ಚಾಗಿ ಕಂಡುಬಂದಿರುವುದು ಸಾರ್ವಜನಿಕರಲ್ಲಿ ತೀವ್ರ ಕಳವಳ ಮೂಡಿಸಿನಿಯಮ ಉಲ್ಲಂಘಿಸಿ ನಡೆಸಲಾಗುತ್ತಿದ್ದ 582 ಕ್ಲಿನಿಕ್‌ಗಳಲ್ಲಿ 87 ಮಂದಿಗೆ ದಂಡ ವಿಧಿಸಲಾಗಿದೆ.
ಅರ್ಹತೆ ಇಲ್ಲದೆ ಚಿಕಿತ್ಸೆ ನೀಡುತ್ತಿದ್ದ 29 ನಕಲಿ ವೈದ್ಯರ ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ. ರಾಜ್ಯದಲ್ಲಿ ದಾಖಲಾಗಿರುವ ನಕಲಿ ವೈದ್ಯರ ಹಾಗೂ ಅನಧಿಕೃತ ಕ್ಲಿನಿಕ್‌ಗಳ ಜಿಲ್ಲಾವಾರು ವಿವರ ಹೀಗಿದೆ:
| ಜಿಲ್ಲೆ | ದಾಖಲಾದ ಪ್ರಕರಣಗಳು |
| ಕಲಬುರಗಿ (ಅತಿ ಹೆಚ್ಚು) | 127 |
| ರಾಯಚೂರು | 124 |
| ಧಾರವಾಡ | 75 |
| ಕೋಲಾರ | 31 |
| ವಿಜಯಪುರ | 24 |
| ಬಳ್ಳಾರಿ | 23 |
| ದಕ್ಷಿಣ ಕನ್ನಡ | 20 |
| ಚಿಕ್ಕಬಳ್ಳಾಪುರ | 17 |
| ಬೆಂಗಳೂರು ನಗರ | 16 |
| ಕೊಪ್ಪಳ | 14 |
ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧದ ವಿವಾದಾತ್ಮಕ ಪೋಸ್ಟ್ ಪ್ರಕರಣ: ಆರಗ ಜ್ಞಾನೇಂದ್ರ ಆಪ್ತನಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್
ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ನಕಲಿ ವೈದ್ಯರ ಹಾವಳಿ ಮಿತಿಮೀರಿದ್ದು, ಶೇಕಡಾ ೪೦ಕ್ಕೂ ಹೆಚ್ಚು ಪ್ರಕರಣಗಳು ಈ ಎರಡು ಜಿಲ್ಲೆಗಳಲ್ಲೇ ಬೆಳಕಿಗೆ ಬಂದಿವೆ. ಸಾರ್ವಜನಿಕರು ಯಾವುದೇ ಕ್ಲಿನಿಕ್‌ಗಳಿಗೆ ತೆರಳುವ ಮುನ್ನ ವೈದ್ಯರ ಅರ್ಹತೆ ಹಾಗೂ ಕೆಪಿಎಂಇ (KPME) ನೋಂದಣಿಯನ್ನು ಪರಿಶೀಲಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ