ಜೂನ್ 3ನೇ ವಾರದಿಂದ ಅಕ್ಟೋಬರ್‌ವರೆಗೂ ಕೊರೊನಾ ಕೇಸ್ ಹೆಚ್ಚಳ; ಕಾನ್ಪುರದ ಐಐಟಿ ವರದಿ ನಿರ್ಲಕ್ಷ್ಯವಹಿಸುವಂತಿಲ್ಲ ಎಂದ ಸಚಿವ ಸುಧಾಕರ್

ತಾಂತ್ರಿಕ ಸಲಹಾ ಸಮಿತಿ, ಕಾನ್ಪುರದ IIT ವರದಿ ನೀಡಿದೆ. ಜೂನ್ 3ನೇ ವಾರದಿಂದ ಅಕ್ಟೋಬರ್‌ವರೆಗೂ ಕೇಸ್ ಹೆಚ್ಚಳವಾಗಬಹುದು. ಈ ಹಿಂದೆಯೂ ಇವರೇ ಕೇಸ್ ಹೆಚ್ಚಳ ಬಗ್ಗೆ ವರದಿ‌ ನೀಡಿದ್ರು. ನಾವು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ.

ಜೂನ್ 3ನೇ ವಾರದಿಂದ ಅಕ್ಟೋಬರ್‌ವರೆಗೂ ಕೊರೊನಾ ಕೇಸ್ ಹೆಚ್ಚಳ; ಕಾನ್ಪುರದ ಐಐಟಿ ವರದಿ ನಿರ್ಲಕ್ಷ್ಯವಹಿಸುವಂತಿಲ್ಲ ಎಂದ ಸಚಿವ ಸುಧಾಕರ್
ಡಾ ಸುಧಾಕರ್, ಆರೋಗ್ಯ ಸಚಿವ
TV9kannada Web Team

| Edited By: Ayesha Banu

Jun 16, 2022 | 2:41 PM

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ (Covid-19) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಅಕ್ಟೋಬರ್‌ನಲ್ಲಿ ಕೊರೊನಾ ಪೀಕ್‌ಗೆ ಹೋಗುತ್ತೆಂಬ ಕಾನ್ಪುರದ ಐಐಟಿ ವರದಿ ಬಗ್ಗೆ ಸಚಿವ ಸುಧಾಕರ್(Dr K Sudhakar) ಪ್ರತಿಕ್ರಿಯೆ ನೀಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ, ಕಾನ್ಪುರದ IIT ವರದಿ ನೀಡಿದೆ. ಜೂನ್ 3ನೇ ವಾರದಿಂದ ಅಕ್ಟೋಬರ್‌ವರೆಗೂ ಕೇಸ್ ಹೆಚ್ಚಳವಾಗಬಹುದು. ಈ ಹಿಂದೆಯೂ ಇವರೇ ಕೇಸ್ ಹೆಚ್ಚಳ ಬಗ್ಗೆ ವರದಿ‌ ನೀಡಿದ್ರು. ನಾವು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅದಕ್ಕೆ ತಕ್ಕಂತೆ ಪೂರಕವಾಗಿ ಸಿದ್ಧತೆ ಮಾಡಿಕೊಂಡಿದ್ದೇವೆ. ಈಗ ಬರುತ್ತಿರುವ ಕೊವಿಡ್ ತಳಿ ಸೌಮ್ಯ ಲಕ್ಷಣ ಹೊಂದಿದೆ. ಜನರು ಯಾವುದೇ ಆತಂಕ, ಭಯಪಡುವ ಅವಶ್ಯಕತೆ ಇಲ್ಲ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇನ್ನು ಇದೇ ವೇಳೆ ಬೆಂಗಳೂರಿನ 2 ಶಾಲೆಗಳಲ್ಲಿ ಕೊರೊನಾ ಸೋಂಕು ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಡಾ.ಕೆ.ಸುಧಾಕರ್, ಒಂದೆರಡು ಶಾಲೆಗಳಲ್ಲಿ ಕೊರೊನಾ ಕೇಸ್ ಕಾಣಿಸಿಕೊಂಡಿವೆ. ಕೊರೊನಾ ಕೇಸ್ ಕಾಣಿಸಿಕೊಂಡ ಶಾಲೆಗಳಿಗೆ ರಜೆ ನೀಡಿದ್ದಾರೆ. ಈಗಾಗಲೇ ಸ್ಪಷ್ಟವಾದ ನಿಯಮಾವಳಿಗಳನ್ನು ರೂಪಿಸಿದ್ದೇವೆ. ಮಕ್ಕಳು ಬರುವಾಗ ಸ್ಕ್ರೀನಿಂಗ್ ಮಾಡಿ, ಮಾಸ್ಕ್ ಪರಿಶೀಲನೆ ಸೇರಿದಂತೆ ಎಲ್ಲ ಶಾಲೆಗಳಲ್ಲಿ ಕೊವಿಡ್ ನಿಯಮ ಪಾಲನೆ ಮಾಡ್ತಿದ್ದಾರೆ ಎಂದರು. ಇದನ್ನೂ ಓದಿ: ಗಾಂಧಿಗಳಿಗೆ ಈಡಿ ಸಮನ್ಸ್: ಬೆಂಗಳೂರಲ್ಲಿ ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ

ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಿಗೆ ಹೊಸ ಕೊರೊನಾ ಮಾರ್ಗಸೂಚಿ ಪ್ರಕಟ ಬೆಂಗಳೂರಿನ 2 ಶಾಲೆಯ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಕೊರೊನಾ ಮಾರ್ಗಸೂಚಿ ಪ್ರಕಟ ಮಾಡಿದೆ. ಮಾರ್ಗಸೂಚಿಯಲ್ಲಿ ಮಕ್ಕಳು, ಪೋಷಕರಿಗೆ ಮುಂಜಾಗ್ರತಾ ಕ್ರಮವಹಿಸಬೇಕು. ಕೊವಿಡ್ ಲಕ್ಷಣ ಕಂಡುಬಂದ ಕೂಡಲೇ ವೈದ್ಯಕೀಯ ಪರೀಕ್ಷೆ ಮಾಡಿಸಬೇಕು. ಫಲಿತಾಂಶ ಬರುವವರೆಗೂ ಮಕ್ಕಳ್ಳನ್ನು ಪ್ರತ್ಯೇಕವಾಗಿ ಇರಿಸಬೇಕು. ಶಾಲೆಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ ಪಾಲನೆ ಮಾಡಬೇಕು. ಶಾಲೆಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿ ಮಾಡಬೇಕು.

ಕೊರೋನಾಗೆ ಭಯಪಡದೇ ಮಕ್ಕಳು ಮತ್ತು ಪೋಷಕರು ಲಸಿಕೆ ಹಾಕಿಸಿಕೊಳ್ಳಬೇಕು. ಸಂಸ್ಥೆಯ ಆವರಣದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸಿರುವುದು, ಸಾಮಾಜಿಕ ಅಂತರ ಕಾಪಾಡುವುದು ಖಚಿತಪಡಿಸಿಕೊಳ್ಳಬೇಕು.ಸಂಸ್ಥೆಯ ಆವರಣದ ಮುಖ್ಯ ಸ್ಥಳಗಳಲ್ಲಿ ಸ್ಯಾನಿಟೈಸರ್ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುಬೇಕು. ಸಂಸ್ಥೆಯ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಸಂಸ್ಥೆಯ ಸಿಬ್ಬಂದಿ ಕೋವಿಡ್-19 ಲಸಿಕೆ ಪಡೆದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಲಸಿಕೆ ಪಡೆಯದವರು ಕೂಡಲೇ ಲಸಿಕೆ ಪಡೆಯುವಂತೆ ವ್ಯವಸ್ಥೆ ಮಾಡುಬೇಕು. ಕೋವಿಡ್-19 ಲಸಿಕೆ ಪಡೆಯುವಂತೆ ಪ್ರೇರೇಪಿಸಿ ಮತ್ತು ಅಗತ್ಯ ಕ್ರಮ ಕೈಗೊಳ್ಳಬೇಕು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada